ಚರ್ಚೆಗೆ ಗ್ರಾಸವಾದ ಕಾಂಗ್ರೆಸ್‌ಗೆ ಬಿಜೆಪಿ ಬೆಂಬಲ
ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಎಡವಟ್ಟು ಬಿಜೆಪಿಗೆ ನುಂಗಲಾರದ ತುತ್ತು ವರಿಷ್ಠರು ಗರಂ
Team Udayavani, Apr 10, 2019, 10:46 AM IST
ಬೀದರ: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಡೆದಿರುವ ಜಿಲ್ಲಾ ಪಂಚಾಯತ್ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಸದಸ್ಯರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿರುವುದು ಜಿಲ್ಲೆಯಲ್ಲಿ ಸಧ್ಯ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಲೋಕಸಭೆ ಚುನಾವಣೆಯಲ್ಲಿ ಸಧ್ಯ ಕಾಂಗ್ರೆಸ್-ಬಿಜೆಪಿ ಮಧ್ಯೆ ಭಾರಿ
ಪೈಪೋಟಿ ನಡೆಯುತ್ತಿದೆ. ಈ ಮಧ್ಯದಲ್ಲಿ ಜಿಲ್ಲಾ ಪಂಚಾಯತ ಚುನಾವಣೆಯ ಘಟನೆ ಬಿಜೆಪಿಗೆ ನುಂಗಲಾರದ ತುತ್ತಾಗಿ
ಪರಿಣಮಿಸಿದೆ. ಮುಖಂಡರಿಗೆ ಭಾರಿ ಮುಜುಗರ ಎದುರಿಸುವಂತೆ ಮಾಡಿದೆ. ಈ ಕುರಿತು ಉತ್ತರಿಸಲಾಗದ ಬಿಜೆಪಿ ಮುಖಂಡರು ಇಕ್ಕಟಿಗೆ ಸಿಲುಕಿದ್ದಾರೆ.
ಕೆಲ ದಿನಗಳ ಹಿಂದೆ ಜಿಲ್ಲೆಗೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ
ಜಗದೀಶ ಶೆಟ್ಟರ್ ಕೂಡ ಈ ಘಟನೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ, ಅಂದು
ನಡೆದ ಸುದ್ದಿಗೋಷ್ಠಿಯಲ್ಲಿ ಇಂತಹ ಘಟನೆಗಳು ಕೆಲ ಕಡೆಗಳಲ್ಲಿ ನಡೆಯುತ್ತಿವೆ. ಸ್ಥಳೀಯಾವಾಗಿ ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದು, ಪಕ್ಷ ವಿರೋಧಿ ಚಟುವಟಿಕೆ ನಡೆಸುವವರ ವಿರುದ್ಧ ಪಕ್ಷದ ಮುಖಂಡರು ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ಸದಸ್ಯರಿಗೆ ನೋಟಿಸ್ ಜಾರಿ: ಜಿಲ್ಲಾ ಪಂಚಾಯತ ಚುನಾವಣೆಯಲ್ಲಿ ಭಾಗವಹಿಸಿದ್ದ ಒಟ್ಟು 11 ಸದಸ್ಯರ ಪೈಕಿ
10 ಸದಸ್ಯರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ಬಿಜೆಪಿ ಪಕ್ಷದ ಮೂಲಗಳು ತಿಳಿಸಿವೆ. ಆದರೆ, ಸಭೆಯಲ್ಲಿ ಹಾಜರಿದ್ದ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ|ಶೈಲೇಂದ್ರ ಬೆಲ್ದಾಳೆ ಅವರ ತಾಯಿ ಶಕುಂತಲಾ ಬೆಲ್ದಾಳೆ ಅವರಿಗೆ ನೋಟಿಸ್ ಜಾರಿ ಮಾಡಿಲ್ಲ ಯಾಕೆ ಎಂಬ ಪ್ರಶ್ನೆಯನ್ನು ಇತರೆ ಜಿಲ್ಲಾ ಪಂಚಾಯತ ಸದಸ್ಯರು ಕೇಳುತ್ತಿದ್ದಾರೆ. ಸಭೆಯಲ್ಲಿ ಹಾಜರಿರುವ ಸದಸ್ಯರು ತಮ್ಮ ಪಕ್ಷದ
ಅಭ್ಯರ್ಥಿ ಸ್ಪರ್ಧೆ ನಡೆಸಿದರೆ ಅವರ ಪರ ಮತ ಚಲಾಯಿಸಬೇಕು. ಪಕ್ಷದ ಪರ ಮತ ಚಲಾವಣೆ ಮಾಡದೆ ತಟಸ್ಥವಾಗಿ ಉಳಿದುಕೊಂಡರೂ ಕೂಡ ಅದು ಪಕ್ಷ ವಿರೋಧಿ ಯಾಗುತ್ತದೆ ಈ ಹಿನ್ನೆಲೆಯಲ್ಲಿ ಶಕುಂತಲಾ ಬೆಲ್ದಾಳೆ ಅವರಿಗೆ ಯಾಕೆ ನೋಟಿಸ್ ಜಾರಿ ಮಾಡಿಲ್ಲ ಎಂದು ಬಿಜೆಪಿ ಜಿಪಂ ಸದಸ್ಯರು ಪ್ರಶ್ನಿಸುತ್ತಿದ್ದಾರೆ.
ಬಿಜೆಪಿ ಯಾಕೆ ಬೆಂಬಲಿಸಬೇಕು?: ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ಟಿವಿ ಚಾನಲ್‌ಗಳು ನಗರದಲ್ಲಿ ನಡೆಸುತ್ತಿರುವ
ಬಹಿರಂಗ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಬಿಜೆಪಿ ಮುಖಂಡರಿಗೆ ಛೀಮಾರಿ ಹಾಕುತ್ತಿದ್ದಾರೆ. ಜಿಲ್ಲಾ ಪಂಚಾಯತ ಘಟನೆ ಕುರಿತು ಪ್ರಶ್ನಿಸುತ್ತಿರುವ ಜನರು, ಬಿಜೆಪಿ ನಂಬಿ
ಜನರು ಮತ ನೀಡುತ್ತಿದ್ದಾರೆ. ಆದರೆ, ಅದನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಸಾಥ್ ನೀಡುವುದಾದರೆ
ಬಿಜೆಪಿಗೆ ಯಾಕೆ ಬೆಂಬಲಿಸಬೇಕು ಎಂದು ಖಾರವಾಗಿಯೆ ಪ್ರಶ್ನೆಗಳ
ಸುರಿಮಳೆ ಸುರಿಸುತ್ತಿದ್ದಾರೆ. ಇದಕ್ಕೂ ಸೂಕ್ತ ಉತ್ತರ ನೀಡುವಲ್ಲಿ ಮುಖಂಡರು ವಿಫಲರಾಗುತ್ತಿದ್ದಾರೆ.
ಚುನಾವಣೆ ನಂತರ ಕ್ರಮ: ಲೋಕಸಭೆ ಚುನಾವಣೆಯಲ್ಲಿ ಯಾವುದೇ ನಿರ್ಣಯ ತೆಗೆದುಕೊಳ್ಳಬಾರದೆಂದು ಬಿಜೆಪಿ ಮುಖಂಡರು ಮೌನ ವಹಿಸಿದ್ದಾರೆ ಎನ್ನಲಾಗಿದೆ. ಚುನಾವಣೆಯ ನಂತರ ಈ ಕುರಿತು ಚರ್ಚೆ ನಡೆಸಿ ಕ್ರಮ ಕೈಗೊಳ್ಳುವ ನಿರ್ಧಾರ ಮಾಡಿದ್ದಾರೆ. ಸಧ್ಯ ಯಾವುದೇ ನಿರ್ಧಾರ ತೆಗೆದುಕೊಂಡರೂ ಕೂಡ ಪಕ್ಷಕ್ಕೆ ಹಾನಿ ಸಂಭವಿಸುವ ಸಾಧ್ಯತೆ ಇರುವುದನ್ನು ಅರಿತು ಮುಖಂಡರು ಈ ಬಗ್ಗೆ ಹೆಚ್ಚಿನ ಚರ್ಚೆಗೆ ಅವಕಾಶ ಕಲ್ಪಿಸಬಾರದು ಎಂದು ಪಕ್ಷದಲ್ಲಿ ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.
ಜಿಲ್ಲಾ ಪಂಚಾಯತ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದಿಂದ ಯಾರೂ ನಾಮಪತ್ರ ಸಲ್ಲಿಸಬಾರದು ಎಂದು ಸೂಚಿಸಲಾಗಿತ್ತು. ಆದರೆ, ಸದಸ್ಯರು ಅಧ್ಯಕ್ಷ ಸ್ಥಾನಕ್ಕೆ ನಾಮ ಪತ್ರ ಸಲ್ಲಿಸಿದ್ದಾರೆ. ಅಲ್ಲದೆ, ನಾಲ್ವರು ಸದಸ್ಯರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ. ಆರು ಜನರು ಬಿಜೆಪಿ ಅಭ್ಯರ್ಥಿಗೆ ಬೆಂಬಲಿಸಿದ್ದಾರೆ. ಈ ಕುರಿತು ಈಗಾಗಲೇ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದ್ದು, ಸದಸ್ಯರಿಂದ ಸೂಕ್ತ ಉತ್ತರ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು.
ಜೈಕುಮಾರ ಕಾಂಗೆ,
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ
ದುರ್ಯೋಧನ ಹೂಗಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್
Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ
Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!
Hard Disk: ಬಿಟ್ಕಾಯಿನ್ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.