ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ ಭರ್ಜರಿ ರೋಡ್ ಶೋ
Team Udayavani, Apr 10, 2019, 12:18 PM IST
ಶ್ರೀನಿವಾಸಪುರ: ಭಯೋತ್ಪಾದನೆ ಸಂಪೂರ್ಣ ನಿರ್ಮೂಲನೆಗಾಗಿ ಕೇಂದ್ರ ಸರ್ಕಾರ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದು, ದೇಶದ ರಕ್ಷಣೆ ಮತ್ತು ಹಳ್ಳಿಗಳ ಅಭಿವೃದ್ಧಿಗೆ ಒತ್ತು ನೀಡುವುದರೊಂದಿಗೆ ರೈತರ ಬೆನ್ನೆಲುಬಾಗಿ ಮೋದಿ ನಿಂತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಪಟ್ಟಣದಲ್ಲಿ ಕೋಲಾರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ಮುನಿಸ್ವಾಮಿ ಪರ ಭರ್ಜರಿ ರೋಡ್ ಶೋ ನಡೆಸಿದ ಅವರು, ಕಾಶ್ಮೀರಕ್ಕೆ ಪ್ರತ್ಯೇಕವಾಗಿ ರೂಪಿಸಿರುವ ಆರ್ಟಿಕಲ್ 370 ಹಾಗೂ 35 ಎ ಅನ್ನು ತೆಗೆಯುವ ಮೂಲಕ ಎಲ್ಲಾ ಧರ್ಮಿಯರು ಒಂದೇ ತಾಯಿ ಮಕ್ಕಳಂತೆ ಬಾಳಲು ಅನುಕೂಲ ಕಲ್ಪಿಸಲಾಗುತ್ತಿದೆ. ನಗರ ಪ್ರದೇಶದಲ್ಲಿ ಮಾತ್ರ ಮೋದಿ ಮೋದಿ ಎಂಬ ಘೋಷಣೆ ಕೇಳುತ್ತಿದ್ದೆ, ಈಗ ಗ್ರಾಮೀಣ ಪ್ರದೇಶಗಳಲ್ಲಿಯೂ ಮೋದಿ ನಾಮ ಸ್ಮರಣೆ ಮಾಡುತ್ತಿದ್ದಾರೆ. ಜಾಗತಿಕ ಮಟ್ಟದಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಿದ ಎರಡನೇ ವ್ಯಕ್ತಿ ಮೋದಿ ಎಂದು ಹೇಳಿದರು.
ಶ್ರೀನಿವಾಸಪುರ ತಾಲೂಕಿನ ಪ್ರತಿಯೊಬ್ಬರ ಬಾಯಲ್ಲೂ ಮೋದಿ ಹೆಸರು ಕೇಳಿ ಸಂತಸವಾಗಿದೆ. ಇದರಿಂದ ದೇಶಕ್ಕೆ ಒಳ್ಳೆ ದಿನಗಳು ಬರುತ್ತವೆ ಎಂದು ತಮ್ಮ ಮನದಾಳದ ಮಾತನ್ನು ವ್ಯಕ್ತಪಡಿಸುವುದರೊಂದಿಗೆ, ನನೆಗುದಿಗೆ
ಬಿದ್ದಿರುವ ಎತ್ತಿನ ಹೊಳೆ ಯೋಜನೆ ಕಾರ್ಯ ರೂಪಕ್ಕೆ ತರಲು ಯೋಜನೆ ರೂಪಸಿಲಾಗಿದೆ. ಹೇಮಾವತಿ, ಮೇಕೆದಾಟು, ಕೃಷ್ಣಾ ಹಾಗೂ ಮುಂತಾದ ನದಿ ಜೋಡಣೆಯಿಂದ ನೀರಿನ ಅಭಾವ ಎದುರಿಸುತ್ತಿರುವ ಕೋಲಾರ ಮತ್ತು ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹರಿಸುವ ವಿಚಾರಕ್ಕೆ ಕೇಂದ್ರ ಸಚಿವ ನಿತಿನ್‌ಗಡ್ಕರಿ ಅವರೊಂದಿಗೆ ಮಾತನಾಡಿದ್ದೇನೆ
ಎಂದು ಹೇಳಿದರು. ಮುಳಬಾಗಿಲು ಮಾಜಿ ಶಾಸಕ ಕೊತ್ತೂರ್ ಮಂಜುನಾಥ್ ಮಾತನಾಡಿ, ಕೋಲಾರದಲ್ಲಿ ನ್ಯಾಯ-ಅನ್ಯಾಯದ ಮಧ್ಯೆ ಚುನಾವಣೆ ನಡೆಯುತ್ತಿದೆ. ಜಿಲ್ಲೆಯ ಶಾಸಕರು ಜನತೆಗಾಗಿ ಅಭಿವೃದ್ಧಿ ಕೆಲಸಗಳನ್ನು
ಮಾಡಿದ್ದಾರೆ. ಆದರೆ, ಲೋಕಸಭೆ ಸದಸ್ಯರು ಏನು ಅಭಿವೃದ್ಧಿ ಮಾಡಿದ್ದಾರೆ. ನಾವು ನಿಷ್ಠಾವಂತರಾಗಿ ಜನರಿಗೆ ದುಡಿಯುವವರು. ನಮ್ಮನ್ನು ಸಂಸದ ಕೆ.ಎಚ್. ಮುನಿಯಪ್ಪ ಮುಗಿಸುತ್ತಿದ್ದಾರೆ. ಈಗ ಅದೇ ತಿರುಗುಬಾಣವಾಗಿದೆ ಎಂದು ಹೇಳಿದರು. ಚಿಂತಾಮಣಿ ಮಾಜಿ ಶಾಸಕ ಎಂ.ಸಿ.ಸುಧಾಕರ್ ಕೂಡ ಕೆಎಚ್‌ಎಂ ವಿರುದ್ಧ ವಾಗ್ಧಾಳಿ ನಡೆಸಿದರು. ಬಿಜೆಪಿ ಅಭ್ಯರ್ಥಿಎಸ್. ಮುನಿಸ್ವಾಮಿ, ಜಿಲ್ಲಾಧ್ಯಕ್ಷ ಬಿ.ಪಿ.ವೆಂಕಟಮುನಿಯಪ್ಪ, ತಾಲೂಕು ಅಧ್ಯಕ್ಷ
ವೆಂಕಟೇಗೌಡ, ಮುಖಂಡರುಗಳಾದ ಎಸ್‌ಎಲ್‌ಎನ್ ಮಂಜುನಾಥ್, ಡಾ.ವೇಣುಗೋಪಾಲ್, ವಕೀಲ ನಾಗರಾಜ್, ನಾಗೇಂದ್ರ ಕೊಳ್ಳೂರು, ಚಿರುವನಹಳ್ಳಿ ಲಕ್ಷ್ಮಣಗೌಡ, ರಾಜ್ಯ ಪರಿಷತ್‌ನ ಜಯರಾಮರೆಡ್ಡಿ, ಪದ್ಮನಾಭ, ಯುವ ಮೋರ್ಚಾ ಅಧ್ಯಕ್ಷ ರಾಮಾಂಜಿ, ಎಸ್.ಸಿ ಮೋರ್ಚಾ ಶ್ರೀನಿವಾಸ್ ಹಾಗೂ ಮುಂತಾದವರು ಭಾಗವಹಿಸದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.