“ತ್ಯಾಜ್ಯ ಪ್ರಮಾಣ ಹೆಚ್ಚಳಕ್ಕೆ ಆಧುನಿಕ ಜೀವನ ಶೈಲಿಯೇ ಕಾರಣ’

ರಾಮಕೃಷ್ಣ ಮಿಷನ್‌ ಸ್ವಚ್ಛ ಸುರತ್ಕಲ್‌ ಅಭಿಯಾನ

Team Udayavani, Apr 11, 2019, 6:15 AM IST

0804PBE4-Swachate

ಸುರತ್ಕಲ್‌:ಆಧುನಿಕ ಜೀವನ ಶೈಲಿ ಯಿಂದಾಗಿ ಹೆಚ್ಚಿನ ಪ್ರಮಾಣದಲ್ಲಿ ತ್ಯಾಜ್ಯದ ಉತ್ಪತ್ತಿಯಾಗುತ್ತಿದ್ದು ಸೂಕ್ತ ನಿರ್ವಹಣೆ ಮಾಡದಿದ್ದಲ್ಲಿ ನಮ್ಮ ಮುಂದಿನ ಜನಾಂಗ ಭೀಕರವಾದ ಆರೋಗ್ಯ ಸಮಸ್ಯೆಗಳಿಂದ ಬಳಲುವ ಸಂಭವವಿದೆಯೆಂದು ಭಾರತೀಯ ಸೇನೆಯ ನಿವೃತ್ತ ಯೋಧ, ರಾಮಕೃಷ್ಣ ಮಿಷನ್‌ ಸ್ವಚ್ಛ ಸೋಚ್‌ ವಿಚಾರ ಸಂಕಿರಣಗಳ ಸಂಪನ್ಮೂಲ ವ್ಯಕ್ತಿ ಗೋಪಿನಾಥ್‌ ರಾವ್‌ ಹೇಳಿದರು.

ರಾಮಕೃಷ್ಣ ಮಿಷನ್‌ ಮಂಗಳೂರು, ನಾಗರಿಕ ಸಲಹಾ ಸಮಿತಿ ಸುರತ್ಕಲ್‌ ಹಾಗೂ ವಿವಿಧ ಸಂಘ – ಸಂಸ್ಥೆಗಳ ನೇತೃತ್ವದಲ್ಲಿ ಎಂ.ಆರ್‌.ಪಿ.ಎಲ್‌. ನೆರವಿನೊಂದಿಗೆ ನಡೆಯುವ ರಾಮಕೃಷ್ಣ ಮಿಷನ್‌ ಸ್ವತ್ಛ ಸುರತ್ಕಲ್‌ ಅಭಿಯಾನದ 25ನೇ ವಾರದ ಸ್ವಚ್ಛತಾ ಶ್ರಮದಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿವಿಧ ಗುಂಪುಗಳಿಂದ ಶ್ರಮದಾನ
ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ ಗೋವಿಂದ ದಾಸ ಕಾಲೇಜು ಸುರತ್ಕಲ್‌, ಆಪತಾಂದವ ಸಮಾಜ ಸೇವಾ ಸಂಘ ಸುರತ್ಕಲ್‌ ಇದರ 120ಕ್ಕೂ ಮಿಕ್ಕಿ ಸ್ವಯಂ ಸೇವಕರು ಸ್ವಚ್ಛತಾ ಶ್ರಮದಾನದಲ್ಲಿ ಭಾಗವಹಿಸಿದರು. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ನೇತ್ರಾವತಿ ವಲಯದ ಸಂಚಾಲಕ ಹರೀಶ್‌ ಕೋಟ್ಯಾನ್‌, ಉತ್ತರ ಉಪವಲಯ ಮಹಿಳಾ ಸಂಚಾಲಕರಾದ ಮಲ್ಲಿಕಾ, ಶಿಕ್ಷಣ ಪ್ರಮುಖರಾದ ಲೀಲಾವತಿ, ಮೋಹಿನಿ, ಅಂಬುಜಾಕ್ಷಿ, ವಿವಿಧ ಶಾಖೆಗಳ ಸಂಚಾಲಕರಾದ ತೇಜಾ³ಲ್‌, ವಿಜಯಶಂಕರ್‌, ರತ್ನಾಕರ್‌, ಕೇಸರಿ, ಶಶಿಕಲಾ, ಜಯರಾಮ, ದೇವದಾಸ್‌, ವಿನೋದ್‌ ಮೊದಲಾದವರ ನೇತೃತ್ವದಲ್ಲಿ ನಾಲ್ಕು ಗುಂಪುಗಳಾಗಿ, ವಿದ್ಯಾದಾಯಿನಿ ಶಾಲಾ ಮುಂಭಾಗದಿಂದ ಸುರತ್ಕಲ್‌ವರೆಗೆ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ಚರಂಡಿಗಳನ್ನು ಸ್ವಚ್ಛ ಮಾಡುವುದರೊಂದಿಗೆ ತ್ಯಾಜ್ಯದ ವಿಲೇವಾರಿ ಮಾಡಲಾಯಿತು.

ಗೋವಿಂದದಾಸ ಕಾಲೇಜಿನ ಪ್ರೊ| ರಮೇಶ್‌ ಭಟ್‌, ಶಿಕ್ಷಕಿ ಸಾವಿತ್ರಿ ರಮೇಶ್‌ ಭಟ್‌ ರವರ ನೇತೃತ್ವದಲ್ಲಿ ಸುರತ್ಕಲ್‌ ಮೇಲ್ಸೇತುವೆಯ ತಳಭಾಗವನ್ನು ಗೋವಿಂದದಾಸ ಕಾಲೇಜಿನ ವಿದ್ಯಾರ್ಥಿನಿಯರು ಸ್ವತ್ಛಗೊಳಿಸಿದರು.

ನಾಗರಿಕ ಸಲಹಾ ಸಮಿತಿ ಅಧ್ಯಕ್ಷ ಜೆ.ಡಿ. ವೀರಪ್ಪ ಗೋವಿಂದದಾಸ ಕಾಲೇಜಿನ ಉಪಪ್ರಾಂಶುಪಾಲ ಪ್ರೊ| ಕೃಷ್ಣಮೂರ್ತಿ, ರೋಟರಿ ಕ್ಲಬ್‌ ಸುರತ್ಕಲ್‌ನ ಶ್ರೀ ನಿವಾಸ ರಾವ್‌ ಉಪಸ್ಥಿತರಿದ್ದರು. ರಾಮಕೃಷ್ಣ ಮಿಷನ್‌ ಸ್ವಚ್ಛ ಸುರತ್ಕಲ್‌ ಅಭಿಯಾನದ ಸಂಯೋಜಕ ಸತೀಶ್‌ ಸದಾನಂದ್‌ ಸ್ವಯಂ ಸೇವಕರಿಗೆ ಅಗತ್ಯ ಮಾಹಿತಿ ನೀಡಿದರು.

ಮಾರುಕಟ್ಟೆ ಪಕ್ಕದಲ್ಲಿದ್ದ ಕಸದ ರಾಶಿ ತೆರವು
ಸುರತ್ಕಲ್‌ ಪೇಟೆಯಲ್ಲಿ ಸಾರ್ವಜನಿಕ ಶೌಚಾಲಯದ ಬದಿಯಲ್ಲಿ ಸ್ಥಳೀಯ ವ್ಯಾಪಾರಿಗಳು ಸಾರ್ವಜನಿಕರು ರಾಶಿಹಾಕಿದ್ದ ಹಳೆಯ ಸಾಮಾನುಗಳು, ಬಾಟಿÉಗಳು ಕಟ್ಟಡ ಕಾಮಗಾರಿಯ ಉಳಿಕೆ ವಸ್ತುಗಳನ್ನು ಸ್ವಯಂ ಸೇವಕರು ನಾಯಕರಾದ, ನಾಗರಿಕ ಸಮಿತಿ ಕುಳಾಯಿ ಅಧ್ಯಕ್ಷ ಭರತ್‌ ಶೆಟ್ಟಿ, ಸ್ಪಂದನ ಫ್ರೆಂಡ್ಸ್‌ ಸರ್ಕಲ್‌ನ ಸುನಿಲ್‌ ಕುಳಾಯಿ, ಆಪತಾºಂದವ ಸಮಾಜ ಸೇವಾ ಸಂಘದ ಸ್ಥಾಪಕ ಅಧ್ಯಕ್ಷ ಉಮೇಶ್‌ ದೇವಾಡಿಗ, ವಿದ್ಯಾರ್ಥಿ ನಾಯಕರಾದ ಭೂಷಣ್‌, ವಿನೋದ್‌ ಶೆಟ್ಟಿ ಮೊದಲಾದವರ ನೇತೃತ್ವದಲ್ಲಿ ಎರಡು ವಾಹನಗಳನ್ನು ಬಳಸಿ ಸ್ವಚ್ಛಗೊಳಿಸಲಾಯಿತು. ಮುಂದಿನ ವಾರದಲ್ಲಿ ಈ ಭಾಗವನ್ನು ಸ್ವಚ್ಛಹೂತೋಟವನ್ನಾಗಿ ಮಾರ್ಪಡಿಸುವ ಕೆಲಸ ರಾಮಕೃಷ್ಣ ಮಿಷನ್‌ ಸ್ವಚ್ಛ ಸುರತ್ಕಲ್‌ ಅಭಿಯಾನ ಹೊಂದಿದೆಯೆಂದು ನಾಗರಿಕ ಸಲಹಾ ಸಮಿತಿ ಸಂಚಾಲಕ ಡಾ| ಕೆ. ರಾಜ್‌ ಮೋಹನ್‌ ರಾವ್‌ ಹೇಳಿದರು. ಬಂಟರ ಸಂಘದ ನಿರ್ದೇಶಕ ಸದಾಶಿವ ಶೆಟ್ಟಿ, ಗಣೇಶ ಆಚಾರ್‌ ಸ್ವಯಂಸೇವಕರೊಂದಿಗೆ ಶ್ರಮದಾನದಲ್ಲಿ ಭಾಗವಹಿಸಿದರು.

ಸ್ವಚ್ಛತೆಯ ಅರಿವು
ಸುರತ್ಕಲ್‌ ಪೇಟೆಯ ನಾಲ್ಕು ಪ್ರಮುಖ ಬಸ್‌ ನಿಲ್ದಾಣಗಳಲ್ಲಿ, ಯೋಗ ಬಂದುಗಳ ನೇತೃತ್ವದಲ್ಲಿ ಅಂಗಡಿ ಮಾಲಕರಿಗೆ, ಬಸ್‌ ನಿರ್ವಹಕರಿಗೆ, ಪ್ರಯಾಣಿಕರಿಗೆ ಸ್ವಚ್ಛತೆಯ ಮಾಹಿತಿಯನ್ನು ನೀಡಲಾಯಿತು. ಹಸಿ ಕಸ, ಒಣ ಕಸವನ್ನು ಬೇರ್ಪಡಿಸಿ ನಿರ್ವಹಣೆ ಮಾಡಬೇಕಾದ ಅಗತ್ಯವನ್ನು ತಿಳಿ ಹೇಳಲಾಯಿತು.

ಟಾಪ್ ನ್ಯೂಸ್

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

courts

Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.