ಕಲ್ಮಕಾರು: 40 ಕುಟುಂಬಗಳಿಂದ ಮತದಾನ ಬಹಿಷ್ಕಾರ

ಸೇತುವೆ, ರಸ್ತೆ ಸಹಿತ ಮೂಲ ಸೌಕರ್ಯ ಅವಗಣನೆಗೆ ಗ್ರಾಮಸ್ಥರ ಬೇಸರ

Team Udayavani, Apr 11, 2019, 6:00 AM IST

g-9

ಕಲ್ಮಕಾರು ಭಾಗದ ನಲವತ್ತು ಕುಟುಂಬಗಳಿಂದ ಮತದಾನ ಬಹಿಷ್ಕಾರ ನಿರ್ಧಾರ.

ಸುಬ್ರಹ್ಮಣ್ಯ: ಮೂಲ ಸೌಕರ್ಯ ಈಡೇರಿಸುವಲ್ಲಿ ಸ್ಪಂದಿಸದ ಜನಪ್ರತಿಧಿ ಹಾಗೂ ಅಧಿಕಾರಿಗಳ ನಡೆಯನ್ನು ವಿರೋಧಿಸಿ ಸುಳ್ಯ ತಾಲೂಕಿನ ಕಲ್ಮಕಾರು ಪರಿಸರದ 40 ಕುಟುಂಬಗಳು ಎ. 18ರಂದು ನಡೆಯುವ ಲೋಕಸಭಾ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

ಕಲ್ಮಕಾರು ವ್ಯಾಪ್ತಿಗೆ ಒಳಪಟ್ಟ ಕಾಜಿಮಡ್ಕ, ಕೊಪ್ಪಡ್ಕ, ಮೆಂಟೆಕಜೆ, ಅಂಜನಕಜೆ ಮತ್ತು ಗುಳಿಕಾನ ಎನ್ನುವಲ್ಲಿ ವಿವಿಧ ಸಮುದಾಯಗಳಿಗೆ ಸೇರಿದ 40 ಕುಟುಂಬಗಳು ವಾಸಿಸುತ್ತಿವೆ. ಕೃಷಿ ಅವಲಂಬಿತರೇ ಹೆಚ್ಚಿರುವ ಈ ಪರಿಸರದ ನಾಗರಿಕರು ನಿತ್ಯ ಜೀವನಕ್ಕೆ ಆವಶ್ಯವಿರುವ ಆಹಾರ ವಸ್ತು ಖರೀದಿಸಲು, ಕೃಷಿ ಫಲ ವಸ್ತುಗಳನ್ನು ಮಾರಾಟ ಮತ್ತು ಖರೀದಿಗೆ ಶೆಟ್ಟಿಕಟ್ಟ-ಗುಳಿಕಾನ ಸಂಪರ್ಕ ರಸ್ತೆಯಲ್ಲಿ ತೆರಳಬೇಕಿದ್ದು, ಈ ಮಧ್ಯೆ ಶೆಟ್ಟಿಕಟ್ಟ ಎನ್ನುವಲ್ಲಿ ಹೊಳೆ ಇರುತ್ತದೆ. ಮಳೆಗಾಲದಲ್ಲಿ ಈ ಹೊಳೆ ತುಂಬಿ ಹರಿದು ನೆರೆ ಬಂದು ಸಂಪರ್ಕ ಕಡಿತಗೊಂಡು ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಇದರಿಂದಾಗಿ ನಾಗರಿಕರು, ಮಕ್ಕಳು ಶಾಲಾ ಕಾಲೇಜುಗಳಿಗೆ ತೆರಳಲು ಸಾಧ್ಯ ವಾಗುತ್ತಿಲ್ಲ. ಈ ಹೊಳೆಗೆ ಸೇತುವೆ ನಿರ್ಮಿಸುವಂತೆ, ಈ ಭಾಗಕ್ಕೆ ಸಂಚಾರ ಬೆಳೆಸುವ ಪಂಚಾಯತ್‌ ರಸ್ತೆಗಳನ್ನು ಅಭಿವೃದ್ಧಿಪಡಿಸುವಂತೆ 35 ವರ್ಷದಿಂದ ಸಂಬಂಧಪಟ್ಟ ಸಚಿವರು, ಸಂಸದರು, ಶಾಸಕರು, ಅಧಿಕಾರಿಗಳನ್ನು ಒತ್ತಾಯಿಸುತ್ತಾ ಬಂದಿದ್ದರು. ಹಲವು ಬಾರಿ ಮನವಿ ಹಾಗೂ ಬೇಡಿಕೆಗಳ ಪಟ್ಟಿಯನ್ನು ನೀಡಿದ್ದರು. ಇದುವರೆಗೆ ಸ್ಪಂದಿಸಿಲ್ಲ ಎನ್ನುವ ನೋವು ಸ್ಥಳೀಯರನ್ನು ಕಾಡುತ್ತಿದೆ. ಮತದಾನ ಬಹಿಷ್ಕಾರ ನಡೆ ಸುತ್ತಿರುವ ಗ್ರಾಮಸ್ಥರು ಕಲ್ಮಕಾರು ಬಳಿ ಬ್ಯಾನರ್‌ ಅಳವಡಿಸುವ ಮೂಲಕ ವ್ಯಕ್ತಪಡಿಸಿದ್ದಾರೆ.

ನಕ್ಸಲರ ಸಹಿತ ನಾನಾ ಸಮಸ್ಯೆಗಳಿಂದ ಹೈರಾಣ
ಕಲ್ಮಕಾರು ಸುಳ್ಯ ತಾಲೂಕು ಕಟ್ಟಕಡೆಯ ಗ್ರಾಮ. ದ.ಕ. ಮತ್ತು ಕೊಡಗು ಗಡಿ ಭಾಗದಲ್ಲಿದೆ. ಪುಷ್ಪಗಿರಿ ತಪ್ಪಲಿನಲ್ಲಿರುವ ಈ ಭಾಗದ ಕೃಷಿಕರು ಅನೇಕ ಸಮಸ್ಯೆಗಳಿಗೆ ತುತ್ತಾಗಿದ್ದಾರೆ. ಕಸ್ತೂರಿ ರಂಗನ್‌ ವರದಿಯ ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿಗೂ ಇದು ಸೇರಿದೆ. ಮಳೆಗಾಲದಲ್ಲಿ ಭೂಕುಸಿತದಂತಹ ಘಟನೆಗಳು ನಡೆದು ಗುಳಿಕಾನ ಪರಿಸರದ ಎಂಟು ಕುಟುಂಬಗಳು ಮನೆ, ಕೃಷಿ ಭೂಮಿ ತೊರೆದು ತಾತ್ಕಾಲಿಕ ಪರಿಹಾರ ಕೇಂದ್ರಗಳಲ್ಲಿ ಉಳಿದುಕೊಂಡಿದ್ದವು. ಅವರಿಗಿನ್ನೂ ಸರಕಾರದ ಪರಿಹಾರ ದೊರಕಿಲ್ಲ. ವಿದ್ಯುತ್‌, ಮೊಬೈಲ್‌, ಕುಡಿಯುವ ನೀರು ಸಹಿತ ಅನೇಕ ತರಹದ ಮೂಲ ಸೌಕರ್ಯ ಕೊರತೆ ಎದುರಿಸುತ್ತಿರುವ ಈ ಭಾಗದಲ್ಲಿ ಈ ಹಿಂದೆ ನಕ್ಸಲರ ಚಲನವಲನವೂ ಕಂಡುಬಂದಿತ್ತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.