ಮತದಾರರೇ ಬಿಜೆಪಿಗೆ ಗೇಟ್‌ಪಾಸ್ ನೀಡ್ತಾರೆ: ಸತೀಶ
Team Udayavani, Apr 11, 2019, 3:22 PM IST
ಗೋಕಾಕ: ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ನರೇಂದ್ರ ಮೋದಿ ಸರಕಾರಕ್ಕೆ ಈ ಬಾರಿ ಮತದಾರರು ಗೇಟ್‌ಪಾಸ್ ನೀಡಲಿದ್ದಾರೆ ಎಂದು ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಅರಭಾವಿ ವಿಧಾನಸಭಾ ಮತಕ್ಷೇತ್ರದ ಸಂಗನಕೇರಿ, ಹುಣಶ್ಯಾಳ ಪಿ.ಜಿ. ಸೇರಿದಂತೆ ವಿವಿಧ ಗ್ರಾಮಗಳಲ್ಲಿ
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಅಭ್ಯರ್ಥಿ ಡಾ|ವಿ.ಎಸ್. ಸಾಧುನವರ ಪರ ಪ್ರಚಾರ ಕೈಗೊಂಡು ಅವರು ಮಾತನಾಡಿ, ಕಾಂಗ್ರೆಸ್ ಪಕ್ಷ ಬಡವರ, ದೀನ ದಲಿತರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಪಕ್ಷವಾಗಿದೆ. ಕಾಂಗ್ರೆಸ್ ಪಕ್ಷವನ್ನು ಈ ಬಾರಿ ಅಧಿಕಾರಕ್ಕೆ ತರಲು ಮತದಾರ ನಿಶ್ಚಯಿಸಿದ್ದು ಮೈತ್ರಿ ಅಭ್ಯರ್ಥಿ ಡಾ| ವಿ.ಎಸ್. ಸಾಧುನವರ ಈ ಬಾರಿ ಭರ್ಜರಿ ಜಯಗಳಿಸಲಿದ್ದಾರೆ ಎಂದರು.
ಕಳೆದ ಮೂರು ಅವಧಿಯಲ್ಲಿ ಸಂಸದರಾಗಿರುವ ಸುರೇಶ ಅಂಗಡಿ ಗ್ರಾಮೀಣ ಪ್ರದೇಶಗಳತ್ತ ಗಮನವೇ ನೀಡಿಲ್ಲ. ಗ್ರಾಮೀಣ ಭಾಗದ ಜನರ ಆಶೋತ್ತರಗಳಿಗೆ ಸ್ಪಂದಿಸಿಲ್ಲ. ಹೀಗಾಗಿ ಈ ಬಾರಿ 100ಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿದ ಕಾಂಗ್ರೆಸ್ ಅಭ್ಯರ್ಥಿಗೆ ಜಯ ನಿಶ್ಚಿತ ಎಂದರು. ಈ ಸಂದರ್ಭದಲ್ಲಿ ಹುಣಶ್ಯಾಳ ಪಿ.ಜಿ. ಗ್ರಾಪಂ ಅಧ್ಯಕ್ಷ ರಾಮ ನಾಯಕ, ನಿಜಗುಣಿ ಅಥಣಿ, ಶಿವು ಪಾಟೀಲ, ಪಾಂಡು ಮನ್ನಿಕೇರಿ, ನಿಜಾಮಸಾಬ ಜಮಾದಾರ, ಆರೀಫ್ ಪೀರಜಾದೆ, ಇಮ್ರಾನ ಮುಲ್ಲಾ, ದಸ್ತಗೀರ ಮುಲ್ಲಾ, ಬಾಬು ಶಿರಹಟ್ಟಿ, ರಮೇಶ ಸಂಪಗಾವಿ, ಮೆಹಬೂಬ ಮುಲ್ಲಾ, ದಸ್ತಗೀರ ಮುಜಾವರ ಸೇರಿದಂತೆ ಹಲವಾರು ಕಾರ್ಯಕರ್ತರು ಇದ್ದರು.
ಎರಡೂ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ ಜಯ ಖಚಿತ
ಗೋಕಾಕ: ಜಿಲ್ಲೆಯ ಎರಡೂ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಜಯಗಳಿಸುವುದು ಖಚಿತ ಎಂದು ಅರಣ್ಯ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಬುಧವಾರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ನಿವಾಸದಲ್ಲಿ ಕರೆದ ಬೆಂಬಲಿಗರ ಸಭೆಯಲ್ಲಿ ಅವರು ಮಾತನಾಡಿ, ಕೋಮುವಾದಿ, ಪ್ರಜಾಪ್ರಭುತ್ವ ವಿರೋಧಿ ಮಹಾ ಸುಳ್ಳಗಾರ ನರೇಂದ್ರ ಮೋದಿ ಸರಕಾರವನ್ನು ಸೋಲಿಸುವುದು ಮುಖ್ಯವಾಗಿದ್ದು, ಕಾರ್ಯಕರ್ತರ ಕಾಂಗ್ರೆಸ್ ಬಲಿಷ್ಠಗೊಳಿಸಲು ಮುಂದಾಗಬೇಕು ಎಂದರು.
ಗೋಕಾಕ: ಜಿಲ್ಲೆಯ ಎರಡೂ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಜಯಗಳಿಸುವುದು ಖಚಿತ ಎಂದು ಅರಣ್ಯ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಬುಧವಾರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ನಿವಾಸದಲ್ಲಿ ಕರೆದ ಬೆಂಬಲಿಗರ ಸಭೆಯಲ್ಲಿ ಅವರು ಮಾತನಾಡಿ, ಕೋಮುವಾದಿ, ಪ್ರಜಾಪ್ರಭುತ್ವ ವಿರೋಧಿ ಮಹಾ ಸುಳ್ಳಗಾರ ನರೇಂದ್ರ ಮೋದಿ ಸರಕಾರವನ್ನು ಸೋಲಿಸುವುದು ಮುಖ್ಯವಾಗಿದ್ದು, ಕಾರ್ಯಕರ್ತರ ಕಾಂಗ್ರೆಸ್ ಬಲಿಷ್ಠಗೊಳಿಸಲು ಮುಂದಾಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.