ದೇಶದ ತುಂಬಾ ಮೋದಿ ಅಲೆ: ಸವದಿ
Team Udayavani, Apr 11, 2019, 3:40 PM IST
ಕೋಹಳ್ಳಿ: ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಭ್ರಷ್ಠಾಚಾರ ಮುಕ್ತ ಆಡಳಿತ ನೀಡಿದ್ದು, ದೇಶದ ತುಂಬ ಮೋದಿ ಅಲೆ ಜೋರಾಗಿದೆ ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ ಹೇಳಿದರು.
ಗ್ರಾಮದಲ್ಲಿ ಚಿಕ್ಕೋಡಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ದೇಶದಲ್ಲಿ 65 ವರ್ಷಗಳಲ್ಲಾಗದ ಅಭಿವೃದ್ಧಿಯನ್ನು ಕೇವಲ 5 ವರ್ಷಗಳಲ್ಲಿ ಹಲವಾರು ಜನಪರ ಯೋಜನೆಗಳನ್ನು ನೀಡಿರುವ ಪ್ರಧಾನಿ ಮೋದಿ ಭಾರತ ಹಾಗೂ ಇತರ ದೇಶಗಳಿಗೆ ಮಾದರಿಯಾಗಿದ್ದಾರೆ.
ರಾಷ್ಟೀಕೃತ ಬ್ಯಾಂಕಗಳಲ್ಲಿ ಶೂನ್ಯ ಬಡ್ಡಿ ದರದಲ್ಲಿ 1 ಲಕ್ಷ ರೂ.ಗಳವರೆಗೆ ಅಲ್ಪಾವಧಿ ಸಾಲ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಪ್ರಣಾಳಿಕೆಯಲ್ಲಿರುವ ಎಲ್ಲವನ್ನು ದೇಶದ ಜನರಿಗೆ ನೀಡಲಿದ್ದಾರೆ. ಆದ್ದರಿಂದ ಮೋದಿ ಕೈ ಬಲ ಪಡಿಸಲು ಚಿಕ್ಕೋಡಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಅವರಿಗೆ ಮತ ನೀಡಬೇಕು ಎಂದರು.
ಈ ವೇಳೆ ಅಣ್ಣಾಸಾಬ ನಾಯಿಕ, ಸಂಗಯ್ನಾ ಪೂಜಾರಿ, ಅಶೋಕ ಕೊಡಗ, ಉಮ್ಮಯ್ನಾ ಪೂಜಾರಿ, ಎಸ್.ಎಲ್. ಪೂಜಾರಿ, ಭೀಮಯ್ನಾ ಪೂಜಾರಿ, ನಾರಾಯಣ ಸೂರ್ಯವಂಶಿ, ಗುರಲಿಂಗ ಝರೆ, ಶಂಕರ ಪೂಜಾರಿ, ಮಲ್ಲಪ್ಪ ಉಮರಾಣಿ, ಶಾಮು ಕುಂಬಾರ, ಈರಸಂಗೌಡ ಪಾಟೀಲ, ವಿಕಾಸ ಗುರಪ್ಪಗೋಳ, ದುಂಡಪ್ಪ ಬಾಡಗಿ ಸೇರಿದಂತೆ ಇತರರು ಇದ್ದರು.
ಮೋದಿ ಪ್ರಧಾನಿಯಾದರೆ ಮಾತ್ರ ಉತ್ತಮ ಭವಿಷ್ಯ
ತೆಲಸಂಗ: ನರೇಂದ್ರ ಮೋದಿ ಮತ್ತೂಮ್ಮೆ ಪ್ರಧಾನಿಯಾದರೆ ಮಾತ್ರ ದೇಶಕ್ಕೆ ಉತ್ತಮ ಭವಿಷ್ಯವಿದ್ದು, ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆಯವರನ್ನು ಆಯ್ಕೆ ಮಾಡುವ ಮೂಲಕ ನರೇಂದ್ರ ಮೋದಿಯವರನ್ನು ಪ್ರಧಾನಿಯಾಗಿಸಿದ ಬಾಗ್ಯ ನಮ್ಮದಾಗಿಸಿಕೊಳ್ಳೋಣ ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು. ಬುಧವಾರ ಸಮೀಪದ ಕಕಮರಿ ಗ್ರಾಮದಲ್ಲಿ ಚಿಕ್ಕೋಡಿ ಲೋಕಸಭಾ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಪರ ಪ್ರಚಾರ ನಡೆಸಿ ಮಾತನಾಡಿ, ಮೋದಿ ಆಯ್ಕೆ ಮಾಡಿ ಮತದಾರರು ಪ್ರಜ್ಞಾವಂತರು ಎನ್ನುವ ಸಂದೇಶ ನೀಡಬೇಕೆಂದರು. ಐದು ವರ್ಷಗಳ ಹಿಂದೆ ಕಾಣಿಸಿಕೊಂಡವರು ಮತ್ತೆ ಚುನಾವಣೆಯಲ್ಲಿಯೇ ಪ್ರತ್ಯಕ್ಷರಾಗಿದ್ದಾರೆ ಇಂತವರಿಗೆ ಮೋದಿ ಆಯ್ಕೆಯೇ ಉತ್ತರವಾಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.