ರಾಶಿ ಭವಿಷ್ಯದ ಸಿನಿಮಾ: ನೈಜ ಘಟನೆಯ ಸುತ್ತ ಹೊಸಬರ ಚಿತ್ರ


Team Udayavani, Apr 12, 2019, 6:30 AM IST

Suchi-Bel-Rashi-bhavishya

ಇಂದಿಗೂ ಅದೆಷ್ಟೋ ಜನರ ದೈನಂದಿನ ಕೆಲಸಗಳು ಆರಂಭವಾಗುವುದೇ ಬೆಳ್ಳಂ ಬೆಳಿಗ್ಗೆ ಟಿ.ವಿಯಲ್ಲಿ ಪ್ರಸಾರವಾಗುವ ಜ್ಯೋತಿಷ್ಯ, ದಿನಭವಿಷ್ಯ ಕೇಳಿದ ನಂತರ. ಟಿ.ವಿಯಲ್ಲಿ ಪ್ರಸಾರವಾಗುವ ಜ್ಯೋತಿಷ್ಯ ಕಾರ್ಯಕ್ರಮಗಳು, ಜ್ಯೋತಿಷಿಗಳು ಅಷ್ಟರ ಮಟ್ಟಿಗೆ ಜನಸಾಮಾನ್ಯರ ಮೇಲೆ ಪರಿಣಾಮ ಬೀರಿವೆ ಎಂಬುದರಲ್ಲಿ ಎರಡು ಮಾತಿಲ್ಲ. ಇದೀಗ ಇದೇ ವಿಷಯವನ್ನು ಇಟ್ಟುಕೊಂಡು ಕನ್ನಡದಲ್ಲಿ ಚಿತ್ರವೊಂದು ನಿರ್ಮಾವಾಗುತ್ತದೆ. ಅಂದಹಾಗೆ, ಆ ಚಿತ್ರದ ಹೆಸರು “ಪುನರ್ವಸು ನಕ್ಷತ್ರ ಮಿಥುನ ರಾಶಿ’

ಗಾಂಧಿನಗರದ ಸಂಪರ್ಕವೇ ಇಲ್ಲದ ಮೈಸೂರು ಮೂಲದ ವಿಜಯ್‌ ಕಾರ್ತಿಕ್‌ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಾಹಿತ್ಯ, ಸಂಭಾಷಣೆ ರಚಿಸಿ ಚಿತ್ರವನ್ನು ನಿರ್ದೇಶಿಸಿದ್ದಾರೆ. ಅಲ್ಲದೇ ಚಿತ್ರದಲ್ಲಿ ನಾಯಕ ನಟನಾಗಿಯೂ ಅಭಿನಯಿಸಿದ್ದಾರೆ. ಈ ಬಗ್ಗೆ ಮಾತನಾಡುವ ನಟ ಕಂ ನಿರ್ದೇಶಕ ವಿಜಯ್‌ ಕಾರ್ತಿಕ್‌, “ಜ್ಯೋತಿಷ್ಯ ಅನ್ನೋದು ಇಂದಿನ ದಿನಗಳಲ್ಲಿ ಸಾಮಾನ್ಯ ಜನರ ಮೇಲೆ ಹೇಗೆ ಪರಿಣಾಮ ಬೀರಲಿದೆ ಅನ್ನೋದನ್ನ ಇಟ್ಟುಕೊಂಡು ಈ ಚಿತ್ರವನ್ನು ಮಾಡಿದ್ದೇವೆ.

ಚಿತ್ರದಲ್ಲಿ ಸಂಪೂರ್ಣ ಮನರಂಜನೆ ಜೊತೆಗೆ ಒಂದು ಸಂದೇಶ ಕೂಡ ಇದೆ. ಜ್ಯೋತಿಷ್ಯವನ್ನು ಅನುಸರಿಸುವ ಮಂಜುನಾಥ ಎಂಬ ಸಾಮಾನ್ಯ ವ್ಯಕ್ತಿಯ ಜೀವನದಲ್ಲಿ ಏನೇನು ನಡೆಯುತ್ತದೆ ಅನ್ನೋದೆ ಚಿತ್ರದ ಕಥೆಯ ಒಂದು ಎಳೆ. ಕೆಲ ವರ್ಷಗಳ ಹಿಂದೆ ನಾವು ಕಣ್ಣಾರೆ ಕಂಡಂತಹ ಘಟನೆಯನ್ನು ಆಧರಿಸಿ ಈ ಚಿತ್ರವನ್ನು ತೆರೆಗೆ ತರುತ್ತಿದ್ದೇವೆ. ಮೊದಲೆಲ್ಲ ವೈಜ್ಞಾನಿಕ ತಳಹದಿಯ ಮೇಲೆ ಜ್ಯೋತಿಷ್ಯವನ್ನು ಹೇಳುತ್ತಿದ್ದರು. ಇಂದು ಜ್ಯೋತಿಷ್ಯದ ವ್ಯಾಖ್ಯಾನ, ಅದನ್ನು ಹೇಳುವವರು ಎಲ್ಲರೂ ಬದಲಾಗಿದ್ದಾರೆ. ಅದರಲ್ಲೂ ಟಿ.ವಿಯಲ್ಲಿ ಬಂದು ಪ್ರಚಾರ ಪಡೆಯುವ ಜ್ಯೋತಿಷಿಗಳನ್ನು ನಂಬಿದರೆ ಏನಾಗುತ್ತದೆ ಎನ್ನುವುದನ್ನ ಚಿತ್ರದಲ್ಲಿ ತೋರಿಸಿದ್ದೇವೆ’ ಎನ್ನುತ್ತಾರೆ.

ಇನ್ನು “ಪುನರ್ವಸು ನಕ್ಷತ್ರ ಮಿಥುನ ರಾಶಿ’ ಚಿತ್ರದಲ್ಲಿ ತೆರೆಯ ಮುಂದೆ ಮತ್ತು ತೆರೆಯ ಹಿಂದೆ ಬಹುತೇಕ ಹೊಸಬರ ತಂಡವೇ ಕೆಲಸ ಮಾಡಿದೆ. ಚಿತ್ರದಲ್ಲಿ ನಾಯಕ ವಿಜಯ್‌ ಕಾರ್ತಿಕ್‌ ಅವರಿಗೆ ಜೋಡಿಯಾಗಿ ಅನೂಷಾ ಪಕಾಲಿ ಅಭಿನಯಿಸಿದ್ದಾರೆ. ಉಳಿದಂತೆ ಅಶ್ವಿ‌ಧಿ, ನಾರಾಯಣ ರಾವ್‌, ಮಾನಸ ಶ್ರೀಧರ್‌, ನವೀನ್‌ ಕುಮಾರ್‌, ಸವಿತಾ, ರಮೇಶ್‌ ಕುಮಾರ್‌, ಪ್ರಶಾಂತ್‌, ಡಾ. ಅಭಿಜಿತ್‌, ಸುಜೀಂದ್ರನ್‌ ಮೊದಲಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರದಲ್ಲಿ ಸುಮಾರು 68ಕ್ಕೂ ಹೆಚ್ಚು ಪಾತ್ರಗಳು ಬರಲಿದ್ದು, ಆಟೋ ಡ್ರೈವರ್‌ ಇಂದ ಡಾಕ್ಟರ್‌ ವರೆಗೆ ವಿವಿಧ ವೃತ್ತಿಯಲ್ಲಿರುವ ನಟನೆಯಲ್ಲಿ ಆಸಕ್ತರಾಗಿರುವ ಅನೇಕ ಹೊಸ ಕಲಾವಿದರು ಚಿತ್ರದ ವಿವಿಧ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ.

“ಪುನರ್ವಸು ನಕ್ಷತ್ರ ಮಿಥುನ ರಾಶಿ’ ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು, ಅತಿಶಯ್‌ ಜೈನ್‌ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಮಧು ಬಾಲಕೃಷ್ಣ, ಶುಭಾ ರಾಘವೇಂದ್ರ ಮೊದಲಾದ ಗಾಯಕರು ಚಿತ್ರದ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಚಿತ್ರಕ್ಕೆ ವಿಘ್ನೇಶ್‌ ಛಾಯಾಗ್ರಹಣ, ಭುವನ್‌ ಸತ್ಯ ಸಂಕಲನ ಕಾರ್ಯವಿದೆ. ಶ್ರೀ ಪ್ರಸನ್ನ ಮಹಾಗಣಪತಿ ಪ್ರೊಡಕ್ಷನ್ಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ಮೈಸೂರು, ಚಾಮರಾಜನಗರ, ಪಾಂಡವಪುರ, ಧರ್ಮಸ್ಥಳ, ಮುರುಡೇಶ್ವರ, ಕೊಲ್ಲೂರು, ಮಂಗಳೂರು, ಶೃಂಗೇರಿ ಮೊದಲಾದ ಕಡೆಗಳಲ್ಲಿ ಚಿತ್ರೀಕರಿಸಲಾಗಿದೆ.

ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳಿಗೆ ಚಿತ್ರರಂಗದಿಂದ ಮತ್ತು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹಿರಿಯ ನಿರ್ದೇಶಕ ನಾಗಾಭರಣ ಕೂಡ ಚಿತ್ರತಂಡದ ಪರಿಶ್ರಮಕ್ಕೆ ಬೆನ್ನು ತಟ್ಟಿದ್ದಾರೆ. ಇತ್ತೀಚೆಗೆ “ಪುನರ್ವಸು ನಕ್ಷತ್ರ ಮಿಥುನ ರಾಶಿ’ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್‌ ಮಂಡಳಿ ಚಿತ್ರಕ್ಕೆ ಯಾವುದೇ ಕಟ್ಸ್‌ ಇಲ್ಲದೆ, ಯು ಸರ್ಟಿಫಿಕೆಟ್‌ ನೀಡಿದೆ. ಒಟ್ಟಾರೆ “ಪುನರ್ವಸು ನಕ್ಷತ್ರ ಮಿಥುನ ರಾಶಿ’ ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದ್ದು, ಇದೇ ಖುಷಿಯಲ್ಲಿರುವ ಚಿತ್ರತಂಡ ಸದ್ಯ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದ್ದು, ಇದೇ 19ರಂದು ತೆರೆಗೆ ತರುವ ಯೋಜನೆಯಲ್ಲಿದೆ.

— ಜಿ.ಎಸ್‌ ಕಾರ್ತಿಕ ಸುಧನ್‌

ಟಾಪ್ ನ್ಯೂಸ್

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

MNG-hosp

Mangaluru: ವೆನ್ಲಾಕ್‌ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.