ನೀರು ಮಿತವಾಗಿ ಬಳಸಿ
Team Udayavani, Apr 12, 2019, 6:30 AM IST
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರಿಗೆ ಕುಡಿಯುವ ನೀರನ್ನು ನೇತ್ರಾವತಿ ನದಿಯಿಂದ ಪೂರೈಕೆ ಮಾಡಲಾಗುತ್ತಿದ್ದು, ಪ್ರಸ್ತುತ ನದಿಯಲ್ಲಿ ಫೆಬ್ರವರಿ ತಿಂಗಳಿನಿಂದಲೇ ನೀರಿನ ಒಳ ಹರಿವು ಸಂಪೂರ್ಣ ಸ್ಥಗಿತಗೊಂಡಿದೆ. ಬುಧವಾರ ತುಂಬೆ ಡ್ಯಾಂನಲ್ಲಿ ನೀರಿನ ಮಟ್ಟ 5.80 ಮೀ. ಮಾತ್ರ ಲಭ್ಯವಿದ್ದು, ಮಳೆಗಾಲ ಪ್ರಾರಂಭವಾಗುವ ವರೆಗೆ ನೀರನ್ನು ಸಮರ್ಪಕವಾಗಿ ಬಳಸಿ ವಿತರಣೆ ಮಾಡಬೇಕಾಗಿರುತ್ತದೆ.
ಮುಂಜಾಗ್ರತ ಕ್ರಮವಾಗಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಾರದೆಂದು ಮುಂದಿನ ದಿನಗಳಲ್ಲಿ 4 ದಿನಗಳ ಒಟ್ಟು 96 ಗಂಟೆಗಳ ಅವಧಿಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ನೀರನ್ನು ಸರಬರಾಜನ್ನು ಮಾಡಲಾಗುವುದು. ಅನಂತರ 48 ಗಂಟೆಗಳ ಅವಧಿಯಲ್ಲಿ ಸಂಪೂರ್ಣ ಸ್ಥಗಿತಗೊಳಿಸಲಾಗುತ್ತದೆ. ಸದ್ರಿ ವ್ಯವಸ್ಥೆಯು ತಾತ್ಕಾಲಿಕವಾಗಿದ್ದು, ಮುಂದಿನ ದಿನಗಳಲ್ಲಿ ಮಳೆ ಬಂದು ನದಿಯಲ್ಲಿ ಒಳಹರಿವು ಕಂಡು ಬಂದಲ್ಲಿ ನೀರನ್ನು ಈ ಹಿಂದಿನಂತೆಯೇ ಪೂರೈಕೆ ಮಾಡಲಾಗುವುದು. ಹಾಗಾಗಿ ಸಾರ್ವಜನಿಕರು ತಮ್ಮ ಮನೆಗಳಲ್ಲಿನ ಕೈತೋಟಗಳಿಗೆ, ವಾಹನ ತೊಳೆಯಲು ಮತ್ತು ಇನ್ನಿತರ ಕೆಲಸಗಳಿಗೆ ಕುಡಿಯುವ ನೀರನ್ನು ಬಳಸಬಾರದು ಮತ್ತು ನೀರನ್ನು ಪೋಲು ಮಾಡದೆ ಮಿತವಾಗಿ ಬಳಸಬೇಕು.
ತಗ್ಗು ಪ್ರದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಪೂರೈಕೆಯಾಗುತ್ತಿರುವ ಬಳಕೆದಾರರು ಕುಡಿಯುವ ನೀರನ್ನು ಮಿತವಾಗಿ ಬಳಸಿ ಆವಶ್ಯಕತೆ ಇದ್ದಷ್ಟನ್ನೇ ಉಪಯೋಗಿಸಿ ತಮ್ಮ ಮನೆಯ ಗೇಟ್ ವಾಲ್Ìಗಳನ್ನು ಬಂದ್ ಮಾಡಿ ಎತ್ತರದ ಪ್ರದೇಶದಲ್ಲಿನ ಸಾರ್ವಜನಿಕರಿಗೆ ನೀರು ಪೂರೈಕೆಯಾಗುವಂತೆ ಸಹಕರಿಸುವಂತೆ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.