ನಾಳೆ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ
Team Udayavani, Apr 12, 2019, 6:30 AM IST
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಎ.13ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಆಗಮಿಸಲಿದ್ದು, ಅಂತಿಮ ಹಂತದ ಸಿದ್ಧತೆ ನಡೆಸಲಾಗುತ್ತಿದೆ. ಪೂರ್ಣ ಬಂದೋಬಸ್ತ್ ನಿಯೋಜಿಸಲಾಗಿದೆ.
ಎ.13ರಂದು ಮಧ್ಯಾಹ್ನ 2.45ಕ್ಕೆ ಮಧುರೈಯಿಂದ ವಿಶೇಷ ವಿಮಾನದಲ್ಲಿ ಹೊರಡಲಿರುವ ಪ್ರಧಾನಿ ಮೋದಿ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಜೆ 4 ಗಂಟೆಗೆ ತಲುಪಲಿದ್ದಾರೆ. ಬಳಿಕ ರಸ್ತೆ ಮಾರ್ಗದ ಮೂಲಕ ಕೇಂದ್ರ ಮೈದಾನಕ್ಕೆ ಆಗಮಿಸಿ ಚುನಾವಣ ಪ್ರಚಾರ ಸಭೆಯಲ್ಲಿ ಮಾತನಾಡಲಿದ್ದಾರೆ. 5.20ರ ಸುಮಾರಿಗೆ ಬಜಪೆಗೆ ಆಗಮಿಸಿ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ತಿಳಿದುಬಂದಿದೆ.
ಕಾರ್ಯಕ್ರಮದಲ್ಲಿ ಪ್ರಧಾನಿ ಅವರಿಗೆ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಸಮ್ಮಾನ ನಡೆಯಲಿದ್ದು, ತುಳುನಾಡನ್ನು ನೆನಪಿಸುವ ವಿಶೇಷ ಸ್ಮರಣಿಕೆ ನೀಡಲು ನಿರ್ಧರಿಸಲಾಗಿದೆ.
ಬಿಗಿ ಬಂದೋಬಸ್ತ್
ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಬಂದೋಬಸ್ತ್ ಕರ್ತವ್ಯಕ್ಕೆ ನಗರದಲ್ಲಿ 5 ಎಸ್‌ಪಿ/ಡಿಸಿಪಿ, 10 ಡಿವೈಎಸ್‌ಪಿ/ಎಸಿಪಿ, 36 ಪಿಐಗಳು, 67 ಪಿಎಸ್‌ಐ, 147 ಎಎಸ್‌ಐ, 1207 ಎಚ್‌ಸಿ/ಪಿಸಿ ಸಹಿತ ಒಟ್ಟು 1,472 ಪೊಲೀಸ್ ಅಧಿಕಾರಿಗಳು ಮತ್ತು ಸಿಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. 92 ಎಚ್‌ಐ, 5 ಕೆಎಸ್‌ಆರ್‌ಪಿ ತುಕಡಿ, 19 ಸಿಎಆರ್ ತುಕಡಿ ಹಾಗೂ 2 ಸಿಆರ್‌ಪಿಎಫ್ ತುಕಡಿಗಳ ಅಧಿಕಾರಿ ಮತ್ತು ಸಿಬಂದಿಗಳನ್ನು ನೇಮಿಸಲಾಗಿದೆ. ಜತೆಗೆ, 4 ಎಎಸ್‌ಸಿ ತಂಡ, 1 ಬಿಡಿಎಸ್ ತಂಡ, 30 ಡಿಎಫ್‌ಎಂಡಿ/ 30 ಎಚ್‌ಎಚ್‌ಎಂಡಿಯನ್ನು ಕಾರ್ಯಕ್ರಮ ನಡೆಯುವ ಸ್ಥಳ, ವಿಮಾನ ನಿಲ್ದಾಣ ಹಾಗೂ ವಿವಿಐಪಿ ಸಂಚರಿಸುವ ಸ್ಥಳದ ತಪಾಸಣೆಗೆ ನೇಮಿಸಲಾಗಿದೆ. ನಗರದ ಬಂದೋಬಸ್ತು ಕರ್ತವ್ಯದಲ್ಲಿ ಒಟ್ಟು 34 ಸೆಕ್ಟರ್ ಮೊಬೈಲ್‌ಗಳು ಹಾಗೂ 144 ಸೂಕ್ಷ್ಮ ಪ್ರದೇಶಗಳಲ್ಲಿ ಪಿಕೆಟಿಂಗ್ ಪಾಯಿಂಟ್‌ಗಳು ಕಾರ್ಯ ನಿರ್ವಹಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.