ಬಿರುಗಾಳಿ ಮಳೆಗೆ ನೆಲಕಚ್ಚಿದ ಭತ್ತ!
10 ಸಾವಿರ ಹೆಕ್ಟೇರ್‌ನಲ್ಲಿ ಭತ್ತ ನಾಟಿ ಕೊಯ್ಲಿಗೆ ಬಂದ ಭತ್ತ ಕಾಪಾಡಿಕೊಳ್ಳಲು ರೈತರ ಹೆಣಗಾಟ
Team Udayavani, Apr 12, 2019, 12:00 PM IST
ಸಿರುಗುಪ್ಪ: ದೇವಿನಗರದ ಸಮೀಪ ನೆಲಕ್ಕೆ ಬಿದ್ದಿರುವ ಭತ್ತ.
ಸಿರುಗುಪ್ಪ: ತಾಲೂಕಿನಾದ್ಯಂತ ಬುಧವಾರ ರಾತ್ರಿ ಬಿರುಗಾಳಿ ಸಹಿತ ಸುರಿದ ಮಳೆಗೆ ಸಾವಿರಾರು ಎಕರೆ ಪ್ರದೇಶದಲ್ಲಿ ಕೊಯ್ಲಿಗೆ ಬಂದಿದ್ದ ಭತ್ತ ನೆಲಕಚ್ಚಿದ್ದು, ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ತಾಲೂಕಿನಲ್ಲಿ ಬೇಸಿಗೆ ಹಂಗಾಮಿನಲ್ಲಿ ಸುಮಾರು 10 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೋರ್‌ವೆಲ್ ನೀರು, ಎಲ್‌ಎಲ್‌ಸಿ ಕಾಲುವೆ ನೀರನ್ನು ಬಳಸಿ ಭತ್ತ ಬೆಳೆದಿದ್ದರು. ಇದರಲ್ಲಿ ಈಗಾಗಲೇ ಸುಮಾರು 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಕೊಯ್ಲು ಮಾಡಲಾಗಿದ್ದು, ಇನ್ನು ಎಂಟು ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಕೊಯ್ಲಾಗಬೇಕಾಗಿದೆ.
ಇನ್ನು 10 ರಿಂದ 12 ದಿನದಲ್ಲಿ ಭತ್ತ ಕೊಯ್ಲು ಮಾಡಲು ಸಮಯವಕಾಶವಿದ್ದು, ಕಳೆದ ವಾರದಿಂದ ಮೂರು ಬಾರಿ ಬಿರುಗಾಳಿ ಬೀಸಿರುವುದರಿಂದ ಕೊಯ್ಲಿನ ಹಂತಕ್ಕೆ ಬಂದಿರುವ ಭತ್ತ ನೆಲಕ್ಕೆ ಬಿದ್ದಿದ್ದು, ರೈತರಿಗೆ ಭಾರೀ ನಷ್ಟವಾಗಿದೆ.
ತಾಲೂಕಿನಲ್ಲಿ ಪ್ರತಿವರ್ಷ ಬೇಸಿಗೆಯಲ್ಲಿ ಸುಮಾರು 35 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತಿತ್ತು. ಆದರೆ ಜಲಾಶಯದ ಮೇಲ್ಭಾಗದಲ್ಲಿ ಮಳೆ ಸರಿಯಾಗಿ ಬಾರದ ಕಾರಣ ಕಳೆದ ಮೂರು ವರ್ಷಗಳಿಂದ ಬೇಸಿಗೆಯಲ್ಲಿ ಭತ್ತ ಬೆಳೆಯುವುದು ತುಂಬಾ ಕಡಿಮೆಯಾಗಿದ್ದು, ಪ್ರಸಕ್ತ ವರ್ಷ ತುಂಗಭದ್ರಾ ಜಲಾಶಯ ತುಂಬಿದ್ದರಿಂದ ಬೇಸಿಗೆ ಬೆಳೆಯಾಗಿ ಭತ್ತವನ್ನು ಬೆಳೆಯಬಹುದೆಂದು ರೈತರು ನಿರೀಕ್ಷೆ ಇಟ್ಟುಕೊಂಡಿದ್ದರು.
ಆದರೆ ಈ ವರ್ಷ ತುಂಗಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇರುವುದರಿಂದ ಬೇಸಿಗೆ ಹಂಗಾಮಿನಲ್ಲಿ ಎಲ್‌ಎಲ್‌ಸಿ ಕಾಲುವೆಗೆ ಕಡಿಮೆ
ಮಟ್ಟದ ನೀರನ್ನು ಹರಿಸಲಾಗುತ್ತದೆ. ಆದ್ದರಿಂದ ಲಘು ಬೆಳೆಯನ್ನು ಬೆಳೆಯಬೇಕೆಂದು ನೀರಾವರಿ ಇಲಾಖೆಯು ಮನವಿ ಮಾಡಿದ್ದರಿಂದ ಈ ಬಾರಿಯ ಬೇಸಿಗೆ ಹಂಗಾಮಿನಲ್ಲಿ ಕೇವಲ 10 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿತ್ತು.
ರೋಗ ರುಜಿನಗಳ ಕಾಟ ಕಡಿಮೆ ಇರುವುದರಿಂದ ಹೆಚ್ಚಿನ ಇಳುವರಿ ಬರುತ್ತದೆ ಎಂದು ರೈತರು ನಿರೀಕ್ಷೆಯಲ್ಲಿದ್ದರು. ಆದರೆ ಕೊಯ್ಲು ಮುಂಚೆಯೇ ಬಿರುಗಾಳಿ ಬೀಸುತ್ತಿರುವುದರಿಂದ ರೈತರ ನಿದ್ದೆಗೆಡಿಸಿದೆ.
ವಾರದಲ್ಲಿ ಮೂರು ಬಾರಿ ಬಿರುಗಾಳಿ ಬೀಸಿ ಭತ್ತ ಬೆಳೆದ ರೈತರನ್ನು ಕಂಗೆಡಿಸಿದೆ. ನೆಲಕ್ಕೆ ಬಿದ್ದ ಭತ್ತವನ್ನು ಎತ್ತಿ ಸೂಡು ಕಟ್ಟಲು ರೈತರು ಮುಂದಾಗಿದ್ದಾರೆ. ನೆಲಕ್ಕೆ ಬಿದ್ದ 1ಎಕರೆ ಭತ್ತವನ್ನು ಎತ್ತಿ ಸೂಡು ಕಟ್ಟಲು ಅಂದಾಜು 1200 ರಿಂದ 1500 ರೂ.ವರೆಗೆ ವೆಚ್ಚವಾಗಲಿದೆ.
.ಕುಬೇರರೆಡ್ಡಿ,
ಕರೂರು ಗ್ರಾಮದ ರೈತ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.