ಸಿಬ್ಬಂದಿಗೆ ಉತ್ತಮ ಊಟದ ವ್ಯವಸ್ಥೆ ಮಾಡಿ
2101 ಮತಗಟ್ಟೆಸಿಬ್ಬಂದಿಗಳಿಗೆ ಮೂಲ ಸೌಲಭ್ಯ ಕಲ್ಪಿಸಿ: ಚುನಾವಣಾಧಿಕಾರಿ ಕನಗವಲ್ಲಿ
Team Udayavani, Apr 12, 2019, 1:36 PM IST
ವಿಜಯಪುರ: ಚುನಾವಣಾ ಸಿಬ್ಬಂದಿಗೆ ಊಟದ ವ್ಯವಸ್ಥೆ ಕಲ್ಪಿಸುವ ಕುರಿತು ಡಿಸಿ ಎಂ. ಕನಗವಲ್ಲಿ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ಜರುಗಿತು.
ವಿಜಯಪುರ: ಲೋಕಸಭಾ ಚುನಾವಣೆ ಅಂಗವಾಗಿ ಸ್ಥಾಪಿಸಲಾಗಿರುವ ಜಿಲ್ಲೆಯ 2101 ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮಸ್ಟರಿಂಗ್-ಡಿ- ಮಸ್ಟರಿಂಗ್ ದಿನ ಹಾಗೂ ಮತದಾನ ದಿನದಂದು ಚುನಾವಣಾ ಸಿಬ್ಬಂದಿಗಳಿಗೆ ವ್ಯವಸ್ಥಿತ ರೀತಿಯಲ್ಲಿ ಊಟ-ಉಪಾಹಾರದ ವ್ಯವಸ್ಥೆ ಮಾಡುವಂತೆ
ಜಿಲ್ಲಾ ಚುನಾವಣಾ ಅಧಿಕಾರಿ ಎಂ.ಕನಗವಲ್ಲಿ ಸೂಚಿಸಿದರು.
ಗುರುವಾರ ನಗರದ ಜಿಲ್ಲಾ ಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಅಧಿಕಾರಿಗಳಿಗೆ ಈ ಸೂಚನೆ ನೀಡಿದ ಅವರು, ಪ್ರತಿಯೊಂದು ಮತಗಟ್ಟೆ ವ್ಯಾಪ್ತಿಯಲ್ಲಿ ಮತದಾನದ ಮುನ್ನ ದಿನ ಹಾಗೂ ಮತದಾನ ದಿನದಂದು ಅತ್ಯಂತ ವ್ಯವಸ್ಥಿತ ರೀತಿಯಲ್ಲಿ ಸಿಬ್ಬಂದಿಗಳಿಗೆ ಊಟೋಪಾಹಾರದ
ವ್ಯವಸ್ಥೆ ಮಾಡಬೇಕು. ಯಾವುದೇ ರೀತಿಯ ದೂರು ಬಂದಲ್ಲಿ ಸಂಬಂಧಪಟ್ಟವರಿಗೆ ನೊಟೀಸ್ ನೀಡದೇ ತಕ್ಷಣ ಅಮಾನತ್ತಿನ ಕ್ರಮ
ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 2101
ಮತಗಟ್ಟೆಗಳಿದ್ದು, ಪ್ರತಿಯೊಂದು ಮತಗಟ್ಟೆಗೆ ಅಲೊ³àಪಾಹಾರ
ಹಾಗೂ ಉಪಾಹಾರಕ್ಕಾಗಿ ತಲಾ 1,250 ರೂ. ಹಾಗೂ
ಕುಡಿಯುವ ನೀರಿಗಾಗಿ 100 ರೂ. ಸೇರಿದಂತೆ 1,350 ರೂ. ಕಾಯ್ದಿರಿಸಿ ಅನುದಾನ ಬಿಡುಗಡೆ ಮಾಡಲಾಗುತ್ತದೆ. ಮತದಾನದ ಪೂರ್ವದಿನ
ಮಧ್ಯಾಹ್ನ ಊಟ, ಸಂಜೆ ಅಲ್ಪೋಪಾಹಾರ ಹಾಗೂ ರಾತ್ರಿ ಊಟದ ವ್ಯವಸ್ಥೆ ಅದರಂತೆ ಮತದಾನ ದಿನದಂದು ಬೆಳಿಗ್ಗೆ ಅಲ್ಪೋಪಾಹಾರ, 11ಗಂಟೆಗೆ ಟೀ ವ್ಯವಸ್ಥೆ, ಮಧ್ಯಾಹ್ನ ಊಟ ಹಾಗೂ ಸಂಜೆ ಅಲ್ಪೋಪಾಹಾರದ ವ್ಯವಸ್ಥೆ
ಮಾಡಬೇಕು. ಇದರಲ್ಲಿ ಯಾವ ಲೋಪವಿಲ್ಲದೇ ಉತ್ತಮ ರೀತಿಯ ಸೌಲಭ್ಯ ಕಲ್ಪಿಸಬೇಕು. ಆರೋಗ್ಯಕ್ಕೆ ಹಿತರಕವಾದ ಆಹಾರ
ಬಳಸಬೇಕು. ಯಾವುದೇ ರೀತಿಯ ದೂರುಗಳು ಬಂದಲ್ಲಿ ಕಟ್ಟುನಿಟ್ಟಿನ
ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ಜಿಲ್ಲೆಯಲ್ಲಿ ಸ್ಥಾಪನೆಯಾಗಿರುವ ಏಕಮತಗಟ್ಟೆ ಹಾಗೂ ಒಂದೇ
ಕಡೆ ಒಂದಕ್ಕಿಂತ ಹೆಚ್ಚಿರುವ ಮತಗಟ್ಟೆಗಳಲ್ಲಿ ಸಹಾಯಕರ ನೆರವಿನೊಂದಿಗೆ
ಸಿಬ್ಬಂದಿಗಳಿಗೆ ವ್ಯವಸ್ಥಿತ ರೀತಿಯಲ್ಲಿ ಊಟೋಪಾಹಾರದ ವ್ಯವಸ್ಥೆಯಾಗಬೇಕು. ಒಂದೇ ಕಡೆ ಎರಡರಿಂದ ಮೂರು ಮತಗಟ್ಟೆಗಳಿರುವ ಪ್ರದೇಶದಲ್ಲಿ ಒಂದೇ ಸ್ಥಳದಲ್ಲಿ ಊಟದ ವ್ಯವಸ್ಥೆ ಮಾಡಿ ಇನ್ನೊಂದು ಮತಗಟ್ಟೆಗೆ ಆಹಾರ ಪೂರೈಸಲು ಸಹಾಯಕರೊಬ್ಬರನ್ನು ನಿಯೋಜಿಸಿಕೊಳ್ಳುವಂತೆ ತಿಳಿಸಿದರು.
ಶಾಲಾ ಕಟ್ಟಡಗಳಲ್ಲಿರುವ ಮತಗಟ್ಟೆಗಳು ಹಾಗೂ ಶಾಲೆ ಹೊರತುಪಡಿಸಿ ಇರುವ ಮತಗಟ್ಟೆಗಳನ್ನು ಗುರುತಿಸಿದ್ದು, ಅದರನ್ವಯ ಅಚ್ಚುಕಟ್ಟಾದ ಊಟೋಪಾಹಾರದ ವ್ಯವಸ್ಥೆ ಮಾಡುವಂತೆ ತಿಳಿಸಿದ ಅವರು, ಸಂಪೂರ್ಣ ರೀತಿಯ ಜವಾಬ್ದಾರಿಯನ್ನು ಸಂಬಂಧಪಟ್ಟ ಅಧಿಕಾರಿಗಳು ವಹಿಸಿಕೊಂಡಲ್ಲಿ ಮಾತ್ರ ಯಾವುದೇ ಲೋಪಕ್ಕೆ ಅವಕಾಶವಿರುವುದಿಲ್ಲ. ಇದಕ್ಕಾಗಿ ತಕ್ಷಣ ಸಂಬಂಧಿ ಸಿದ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗುವಂತೆ ತಿಳಿಸಿದ ಅವರು, ತಾಪಂ ಇಓ, ಡಿಸಿಪಿಐ, ಅಕ್ಷರ ದಾಸೋಹ ಅ ಧಿಕಾರಿಗಳ ವ್ಯಾಟ್ಸ್‌ಆ್ಯಪ್ ಗ್ರೂಪ್ ರಚಿಸಿಕೊಂಡು ಕೈಗೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ಕಾಲಕಾಲಕ್ಕೆ ಮಾಹಿತಿ ಒದಗಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅಕ್ಷರ ದಾಸೋಹದ ಜಿಲ್ಲಾ ಶಿಕ್ಷಣಾಧಿಕಾರಿ ವೀರೇಶ ಜೇವರ್ಗಿ ಮಾಹಿತಿ ನೀಡಿದರು. ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನ ಸೇರಿದಂತೆ ಇತರ
ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Muddebihal: ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ
Waqf ಜೆಪಿಸಿ ಅಧ್ಯಕ್ಷ ಭೇಟಿ ಹಿನ್ನೆಲೆ: ವಿಜಯಪುರಕ್ಕೆ ಬಂದ ಜೊಲ್ಲೆ ದಂಪತಿ, ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.