“ದ.ಕ. ಜಿಲ್ಲೆಯಲ್ಲಿ ರಾಜಕೀಯವಾಗಿ ಮಹತ್ತರ ಬದಲಾವಣೆ ಕಾಲ ಬಂದಿದೆ: ಮಿಥುನ್ ರೈ
ಬಂಟ್ವಾಳ ಪೇಟೆಯಲ್ಲಿ ಮಿಥುನ್ ರೈ ರೋಡ್ ಶೋ
Team Udayavani, Apr 13, 2019, 6:00 AM IST
ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರು ಬಂಟ್ವಾಳದಲ್ಲಿ ರೋಡ್ ಶೋ ನಡೆಸಿದರು.
ಬಂಟ್ವಾಳ: ಕಳೆದ 28 ವರ್ಷ ಗಳಲ್ಲಿ ಬಿಜೆಪಿ ಭದ್ರಕೋಟೆಯಾಗಿದ್ದ ದ.ಕ. ಜಿಲ್ಲೆಯಲ್ಲಿ ರಾಜಕೀಯವಾಗಿ ಮಹತ್ತರ ಬದಲಾವಣೆ ಕಾಲ ಬಂದಿದೆ. ಈ ನಿಟ್ಟಿನಲ್ಲಿ ಯುವಕರು ಒಗ್ಗಟ್ಟಿನಿಂದ ಈ ಚುನಾವಣೆ ಸಂದರ್ಭ ವಿಶ್ರಾಂತಿ ಪಡೆಯದೆ ಕೆಲಸ ಮಾಡಿ ಎಂದು ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಹೇಳಿದರು.
ಅವರು ಎ. 11ರಂದು ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಬಂಟ್ವಾಳ ಬಡ್ಡಕಟ್ಟೆ ಹನುಮಂತ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬಳಿಕ ಬಂಟ್ವಾಳ ಪೇಟೆಯಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ಮೂಲಕ ಮತಯಾಚನೆ ನಡೆಸಿ ಬಸ್ತಿಪಡು³ವಿನಲ್ಲಿ ಮಾತನಾಡಿ, ಕಾರ್ಯಕರ್ತರು ಹಾಗೂ ಮತದಾರರು ನನ್ನ ಮೇಲೆ ಇಟ್ಟಿರುವ ವಿಶ್ವಾಸಕ್ಕೆ, ಗೌರವಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಎಲ್ಲರೂ ತಲೆ ಎತ್ತಿ ನಡೆಯುವಂತೆ ದ.ಕ. ಜಿಲ್ಲೆಯನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುತ್ತೇನೆ. ಅದಕ್ಕೆ ಅವಕಾಶ ಮಾಡಿಕೊಡಿ. ಚುನಾವಣೆ ಗೆಲುವೇ ನಮ್ಮ ಗುರಿಯಾಗಬೇಕು. ಚುನಾವಣೆ ಮೂಲಕ ಬದಲಾವಣೆ ಮಂತ್ರ ಪ್ರತಿಯೊಬ್ಬ ಕಾರ್ಯಕರ್ತನ ಬಾಯಲ್ಲಿಯೂ ಬರಬೇಕಾಗಿದೆ ಎಂದು ಕರೆ ನೀಡಿದರು.
ಪರಿವರ್ತನೆ
ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಅಭಿವೃದ್ಧಿಗಾಗಿ ಯುವಕ ಮಿಥುನ್ ರೈ ಅವರಿಗೆ ಬೆಂಬಲ ನೀಡಬೇಕು. ದ.ಕ. ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿ ಪರಿವರ್ತನೆ ಮಾಡಲು ನಿಮ್ಮ ಮತ ಕಾಂಗ್ರೆಸ್‌ಗೆ ನೀಡಿ ಎಂದರು.
ಬೆಳಗ್ಗೆ ಸರಪಾಡಿ ವೆಂಕಟರಮಣ ದೇವಸ್ಥಾನ, ಕಕ್ಯಬೀಡು ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನ, ಕಕ್ಯಪದವು ಬದ್ರಿಯಾ ಜುಮ್ಮಾ ಮಸೀದಿ, ಕಾವಳಕಟ್ಟೆ ಜಂಕ್ಷನ್ ಎನ್.ಸಿ. ರೋಡ್, ವಗ್ಗ ಕಾರಿಂಜ ಕ್ರಾಸ್ ಜಂಕ್ಷನ್, ಶ್ರೀ ಕಾರಿಂಜೇಶ್ವರ ದೇವಸ್ಥಾನ, ಪೂಂಜ ಶ್ರೀ ಪಂಚದುರ್ಗಾಪರಮೇಶ್ವರೀ, ಕೆರೆಬಳಿ ಮೈಯುದ್ದೀನ್ ಜುಮ್ಮಾ ಮಸೀದಿ, ಸಂಗಬೆಟ್ಟು ಶ್ರೀ ವೀರಭದ್ರ ದೇವಸ್ಥಾನ, ಕಲ್ಕುರಿ ದಾರುಸ್ ಸಲಾಮ್ ಜಮ್ಮಾ ಮಸೀದಿ, ಸಿದ್ದಕಟ್ಟೆ ಸೈಂಟ್ ಪೆಟ್ರಿಕ್ ಚರ್ಚ್ ಭೇಟಿ, ಮಧ್ಯಾಹ್ನ ಬಳಿಕ ಕರೋಪಾಡಿ ಮಿತ್ತನಡ್ಕ ಪೇಟೆಯಲ್ಲಿ ಮತಯಾಚನೆ, ಕನ್ಯಾನ ಜಂಕ್ಷನ್ ಸಾರ್ವಜನಿಕ ಸಭೆ ನಡೆಸಿದರು.
ಪ್ರಚಾರ ಸಭೆಯಲ್ಲಿ ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಬಿ. ಪದ್ಮಶೇಖರ ಜೈನ್, ಪ್ರಮುಖರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಮಾಯಿಲಪ್ಪ ಸಾಲ್ಯಾನ್, ಸುದರ್ಶನ ಜೈನ್, ಅಬ್ಟಾಸ್ ಆಲಿ, ವಾಸು ಪೂಜಾರಿ, ಗಂಗಾಧರ ಪೂಜಾರಿ, ಜನಾರ್ದನ ಚೆಂಡ್ತಿಮಾರ್, ಬಿ.ಎಚ್. ಖಾದರ್, ಚಿತ್ತರಂಜನ್ ಶೆಟ್ಟಿ, ಜೆ.ಡಿ.ಎಸ್. ಪ್ರಮುಖರಾದ ಬಿ. ಮೋಹನ್, ಹಾರೂನ್ ರಶೀದ್, ಪಿ.ಎ. ರಹೀಂ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.