ಮನೆಗಳ ನಿರ್ಮಾಣ ಕಾರ್ಯ ಶೀಘ್ರ ಪೂರ್ಣಗೊಳಿಸಿ
Team Udayavani, Apr 13, 2019, 6:00 AM IST
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾತನಾಡಿದರು.
ಮಡಿಕೇರಿ: ಪ್ರಕೃತಿ ವಿಕೋಪದಡಿ ನಿರ್ಮಾಣವಾಗುತ್ತಿರುವ ಮನೆಗಳ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನುºಕುಮಾರ್ ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾಹಿತಿ ನೀಡಿದರು.
ಮದೆನಾಡಿನಲ್ಲಿ ಎಪ್ರಿಲ್, 30 ರೊಳಗೆ ಮನೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಬೇಕು. ಉಳಿದ ಕಡೆಗಳಲ್ಲಿ ನಡೆಯುತ್ತಿರುವ ಮನೆಗಳ ಕಾಮಗಾರಿಯನ್ನು ಜೂನ್ ಒಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್‌ಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ನಿರ್ದೇಶನ ನೀಡಿದರು.
ಈ ಬಗ್ಗೆ ಮಾಹಿತಿ ನೀಡಿದ ಹೆಬಿಟೇಟ್ ಸಂಸ್ಥೆಯ ಎಂಜಿನಿಯರ್ ಶ್ರೀನಿವಾಸ್ ಅವರು ಈಗಾಗಲೇ ಕರ್ಣಂಗೇರಿಯಲ್ಲಿ 25 ಮನೆಗಳ ಕಾಮಗಾರಿ ಶೇ.80ರಷ್ಟು ಪೂರ್ಣಗೊಂಡಿದೆ. ಉಳಿದಂತೆ ಮದೆ ನಾಡು ಗ್ರಾಮದಲ್ಲಿ 45, ಕರ್ಣಂಗೇರಿ 10 ಹಾಗೂ ಮಾದಪುರದಲ್ಲಿ 43 ಮನೆಗಳ ಕಾಮಗಾರಿ ಮೇಲ್ಛಾವಣಿ ಹಂತ ತಲುಪಿವೆ ಎಂದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನುºಕುಮಾರ್ ಅವರು ಜನ-ಜಾನು ವಾರುಗಳಿಗೆ ಕುಡಿಯುವ ನೀರು ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿನ ಸಂಬಂಧ ಸಮಸ್ಯೆಗಳು ಕೇಳಿ ಬಂದಲ್ಲಿ ತಕ್ಷಣವೇ ತಹಶೀಲ್ದಾರ್‌ರು, ಸಂಬಂಧಪಟ್ಟ ಎಂಜಿನಿಯರ್‌ಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹರಿಸಬೇಕು ಎಂದು ಅವರು ಸೂಚಿಸಿದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾತನಾಡಿ ಕುಶಾಲನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿತ್ತು, ಅದನ್ನು ಸರಿಪಡಿಸಲಾಗಿದೆ. ಹಾಗೆಯೇ ಕೆಲವು ಹಾಡಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರ ಗಮನಕ್ಕೆ ತಂದರು.
ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಅವರು ಟಿ.ಶೆಟ್ಟಿಗೇರಿ ಮತ್ತಿತರ ಗ್ರಾಮೀಣ ಪ್ರದೇಶ ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿತ್ತು ಎಂದು ಅವರು ತಿಳಿಸಿದರು.
ಪಂಚಾಯತ್ ಎಂಜಿನಿಯರಿಂಗ್ ವಿಭಾಗ, ಪ್ರಧಾನ ಮಂತ್ರಿ ಗ್ರಾಮ ಸಡಕ್‌ಯೋಜನೆ, ಸಣ್ಣ ನೀರಾವರಿ ಇತರೆ ಇಲಾಖೆಗಳು ಮೂರನೇ ದರ್ಜೆ ಯವರಿಂದ ಕಾಮಗಾರಿ ಪರಿಶೀಲನೆ ನೆಪದಲ್ಲಿ ಕಾಲ ದೂಡದೆ ಆದಷ್ಟು ತ್ವರಿತ ವಾಗಿ ಹಣ ಬಳಕೆ ಪ್ರಮಾಣ ಪತ್ರ ನೀಡಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಜನರಿಗೆ ಸ್ಪಂದಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸೂಚನೆ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಲೋಕೋಪಯೋಗಿ ಇಲಾಖೆಯ ಇಇ ಇಬ್ರಾಹಿಂ, ಗ್ರಾಮೀಣ ಕುಡಿಯುವ ನೀರು ವಿಭಾಗದ ಎಂಜಿನಿಯರ್ ರೇವಣ್ಣವರ್, ಜಿಲ್ಲಾ ಪಂಚಾಯತ್ ಎಂಜಿನಿಯರ್ ಶ್ರಿಕಂಠಯ್ಯ, ಸಹಾಯಕ ಎಂಜಿನಿಯರ್ ಮೇಘನ, ಪಿಎಂಜಿಎಸ್‌ವೈ ಎಂಜಿನಿಯರ್, ಸಣ್ಣ ನಿರಾವರಿ ಇಲಾಖೆಯ ಎಇಇ ಮಂಜುನಾಥ್, ನಗರಸಭೆ ಎಂಜಿನಿಯರ್ ವನಿತಾ, ಡಿ. ಎಚ್.ಒ. ಡಾ| ಕೆ.ಮೋಹನ್, ವೈದ್ಯಕೀಯ ಕಾಲೇಜಿನ ನಿರ್ದೇಶಕರಾದ ಕಾರ್ಯಪ್ಪಉಪಸ್ಥಿತರಿದ್ದರು.
ಮನೆಗಳ ಹಸ್ತಾಂತರ
ಪ್ರಥಮ ಹಂತದಲ್ಲಿ 417 ಕುಟುಂಬಗಳನ್ನು ಆಯ್ಕೆ ಮಾಡಲಾಗಿದೆ. ಎರಡನೇ ಹಂತದಲ್ಲಿ 411 ಮನೆಗಳ ಪಟ್ಟಿ ಸಿದ್ಧಪಡಿಸಲಾಗಿದ್ದು, ಒಟ್ಟು 829 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಬಾಕಿ ಇರುವುದನ್ನು ಪಟ್ಟಿ ಮಾಡಿ ಮನೆ ನಿರ್ಮಿಸಲಾಗುವುದು,ಸದ್ಯ 829 ಮನೆಗಳನ್ನು ನಿರ್ಮಿಸಿ ತ್ವರಿತವಾಗಿ ಮನೆಗಳ ಹಸ್ತಾಂತರ ಮಾಡಬೇಕಿದೆ. ಈಗಾಗಲೇ ಮಾರ್ಚ್ ಅಂತ್ಯದವರೆಗೆ ಬಾಡಿಗೆ ಭರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.