ಪ್ರಚಾರದಲ್ಲಿ ಹಿಂದಿರುವುದು ನನ್ನ ದೌರ್ಬಲ್ಯ: ಡಿ.ವಿ.ಸದಾನಂದಗೌಡ

Team Udayavani, Apr 13, 2019, 3:00 AM IST

pracharada

ಬೆಂಗಳೂರು: “ಋಣಾತ್ಮಕ ರಾಜಕಾರಣವನ್ನು ವಿದ್ಯಾವಂತರು ತಿರಸ್ಕರಿಸುತ್ತಿದ್ದು, ಧನಾತ್ಮಕ ರಾಜಕಾರಣ ಬೆಂಬಲಿಸುತ್ತಿದ್ದಾರೆ. ನನ್ನ ಕಾರ್ಯ ಸಾಧನೆ ಬಗ್ಗೆ ಪ್ರಚಾರ ಮಾಡಿಕೊಳ್ಳದಿರುವುದು ದೌರ್ಬಲ್ಯವಿರಬಹುದು. ಆದರೂ ಜನರಿಗೆ ಸೌಲಭ್ಯ ಕಲ್ಪಿಸಿದ ಆತ್ಮತೃಪ್ತಿಯಿದ್ದು, ಕಳೆದ ಬಾರಿಗಿಂತ ಹೆಚ್ಚು ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ’ ಎಂದು ಕೇಂದ್ರ ಸಚಿವ, ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಹೇಳಿದರು.

ಬೆಂಗಳೂರು ಪ್ರಸ್‌ಕ್ಲಬ್‌ ಶುಕ್ರವಾರ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, “ಜನ ಕೆಲವರನ್ನು ತವರೂರಿನಿಂದ ಹೀನಾಯಮಾನವಾಗಿ ಓಡಿಸಿದ್ದಾರೆ. ಹಾಗಾಗಿ ಅವರು ಇನ್ನೊಬ್ಬರನ್ನು ಊರಿನಿಂದ ಓಡಿಸುವ ಬಗ್ಗೆ ಯೋಚಿಸುತ್ತಿರುತ್ತಾರೆ. ಬಹಳ ವರ್ಷಗಳಿಂದ ನನ್ನನ್ನು ಚಿಕ್ಕಮಗಳೂರಿನಿಂದ ಸುಳ್ಯಕ್ಕೆ, ಬೆಂಗಳೂರಿನಿಂದ ಸುಳ್ಯಕ್ಕೆ ಓಡಿಸುವ ಪ್ರಯತ್ನ ನಡೆದಿದೆ. ನಾನು ಮುಖ್ಯಮಂತ್ರಿಯಾಗಿದ್ದವನು. ರಾಜ್ಯದಲ್ಲಿ ಎಲ್ಲಿ ಬೇಕಾದರೂ ಸ್ಪರ್ಧಿಸಲು ಅರ್ಹ ಎಂಬುದನ್ನು ಅವರು ಅರಿಯಬೇಕು’ ಎಂದು ತಿಳಿಸಿದರು.

ಪ್ರಚಾರ ನಡೆಸಿದ ಕೆಲವೆಡೆ ಕ್ಷೇತ್ರಕ್ಕೆ ನನ್ನ ಕೊಡುಗೆ ಏನು ಎಂದು ಪ್ರಶ್ನಿಸಿ ಗೊಂದಲ ಸೃಷ್ಟಿಸುವ ಕೆಲಸವನ್ನು ಕಾಂಗ್ರೆಸ್‌ನವರೇ ಮಾಡಿಸುತ್ತಿದ್ದಾರೆ. ನಾನು 14 ಲೋಕಸಭಾ ಸದಸ್ಯರು ಮಾಡದಷ್ಟು ಕೆಲಸವನ್ನು ಕ್ಷೇತ್ರದಲ್ಲಿ ಮಾಡಿದ್ದೇನೆ. ಪ್ರತಿಯೊಂದು ವಿಧಾನಸಭಾ ಕ್ಷೇತ್ರಕ್ಕೂ 100ಕ್ಕೂ ಹೆಚ್ಚು ಬಾರಿ ಹೋಗಿಬಂದಿದ್ದೇನೆ ಎಂದು ಸಮರ್ಥಿಸಿಕೊಂಡರು.

ಕೇಂದ್ರ ಸಚಿವ ಸ್ಥಾನ ಹಂಚಿಕೆಯಲ್ಲಿ ನನಗೆ ಹಿನ್ನಡೆಯಾಗಿದೆ ಎಂಬ ಮಾತಿದೆ. ಪ್ರಧಾನಿಯವರು ಕೇಂದ್ರ ಸಂಪುಟ ಪುನಾರಚನೆಯಲ್ಲಿ ನನಗೆ ಹಿಂಬಡ್ತಿ ನೀಡಿಲ್ಲ. ನನಗಿಂತಲೂ ನುರಿತ, ಹೆಚ್ಚು ಅನುಭವವಿರುವ ಸುರೇಶ್‌ ಪ್ರಭು ಅವರನ್ನು ರೈಲ್ವೆ ಸಚಿವರನ್ನಾಗಿ ಮಾಡಿದ್ದು ಸ್ವಾಗತಾರ್ಹ. ನನಗೆ ಸಾಂಖೀÂಕ ಮತ್ತು ಯೋಜನಾ ಅನುಷ್ಠಾನ ಖಾತೆ ವಹಿಸಲಾಯಿತು. ಜಿಡಿಪಿ, ಗ್ರಾಹಕರ ಬೆಲೆ ಸೂಚ್ಯಂಕ, ಸಮೀಕ್ಷೆ ವರದಿ ತಯಾರಿ ಸೇರಿ ಬಜೆಟ್‌ಗೆ ಬೇಕಾದ ಇಲಾಖಾ ವರದಿ ಸಲ್ಲಿಸುವ ಮಹತ್ವದ ಇಲಾಖೆಯಾಗಿದೆ ಎಂದು ತಿಳಿಸಿದರು.

ಸಚಿವ ಕೃಷ್ಣ ಬೈರೇಗೌಡರ ಕ್ಷೇತ್ರದಲ್ಲೇ ಪಾಸ್‌ಪೋರ್ಟ್‌ ಕೇಂದ್ರ ತೆರೆದರೂ ಅದರ ಉದ್ಘಾಟನೆಗೆ ಬರಲಿಲ್ಲ. ಯಶವಂತಪುರದಲ್ಲಿ ಕೇಂದ್ರೀಯ ವಿದ್ಯಾಲಯ ಮಂಜೂರು ಮಾಡಿಸಿದೆ. ಕೊಡಿಗೇಹಳ್ಳಿ ಅಂಡರ್‌ಪಾಸ್‌ ಯೋಜನೆಯನ್ನು ನಾನೇ ಮಂಜೂರು ಮಾಡಿಸಿದೆ. ಮೂರು ಬಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಪೊಲೀಸ್‌ ಠಾಣೆ ಸ್ಥಳಾಂತರವಾಗದೆ ಒಂದು ವರ್ಷ ವಿಳಂಬವಾಯಿತು. 15 ದಿನದ ಹಿಂದೆ ಠಾಣೆ ಸ್ಥಳಾಂತರವಾಗಿದ್ದು, ಸಂಚಾರಕ್ಕೆ ಮುಕ್ತವಾಗಿದೆ. ಬ್ಯಾಟರಾಯನಪುರಕ್ಕೆ 124 ಬಾರಿ ಭೇಟಿ ನೀಡಿರುವ ಬಗ್ಗೆ ಬರೆದು ಇಟ್ಟುಕೊಂಡಿದ್ದೇನೆ. ಅಭಿವೃದ್ಧಿ ವಿಚಾರದಲ್ಲಿ ಯಾರೊಂದಿಗೂ ತಿಕ್ಕಾಟ ಮಾಡುವುದಿಲ್ಲ. ಆದರೆ ಪ್ರಚಾರ ಮಾಡಿಕೊಂಡಿಲ್ಲ ಎಂದು ತಿಳಿಸಿದರು.

ಅಧಿಕಾರ ದುರುಪಯೋಗ, ಹಣ- ಹೆಂಡ ವಿತರಣೆ, ತೋಳ್ಬಲ ಪ್ರಭಾವ ಬೀರುವ ಸಂದರ್ಭದಲ್ಲಿ ಜನರ ಭಾವನೆ, ನೋವು, ನಲಿವು ಸೇರಿದಂತೆ ಎಲ್ಲ ರೀತಿಯಲ್ಲೂ ಸ್ಪಂದಿಸಿದ್ದರ ಮೌಲ್ಯಮಾಪನವಾಗಬೇಕು. ಸದ್ಯ ಕ್ಷೇತ್ರದಲ್ಲಿ ಎರಡನೇ ಸುತ್ತಿನ ಪ್ರಚಾರ ಆರಂಭಿಸಿದ್ದು, ಮತದಾರರು ಸ್ಪಂದಿಸುವ ವಿಶ್ವಾಸವಿದೆ ಎಂದು ಹೇಳಿದರು.

ನಾನು ರಾಜಕೀಯಕ್ಕೆ ಸೂಕ್ತವಲ್ಲವೇನೋ ಎಂದು ನನಗೆ ಈಗ ಅನ್ನಿಸುತ್ತಿದೆ. ನನ್ನದು ಒಂದು ದೌರ್ಬಲ್ಯವಿದೆ. ನಾನು ಮಾಡಿದ ಕೆಲಸಗಳ ಪ್ರಚಾರಕ್ಕೆ ಆದ್ಯತೆಯನ್ನೇ ನೀಡಿಲ್ಲ. ಇದರಿಂದ ಹಿನ್ನಡೆಯಾಗಬಹುದು ಎಂದುಕೊಂಡಿರಬಹುದು. ಆದರೆ ಜವಾಬ್ದಾರಿಯಿಂದ ಮತದಾರರಿಗೆ ಅಗತ್ಯವಿರುವ ಕೆಲಸ ಮಾಡಿದ ತೃಪ್ತಿ ಇದೆ. ಈ ಬಾರಿ ದೊಡ್ಡ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ.
-ಡಿ.ವಿ.ಸದಾನಂದಗೌಡ, ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಡಿ.ವಿ.ಸದಾನಂದಗೌಡ ಹೇಳಿದ್ದು…
* ಪ್ರಧಾನಿ ಮೋದಿಯವರ ಹೆಸರಿನಲ್ಲೇ ಚುನಾವಣೆ ಎದುರಿಸುತ್ತೇವೆ. ಏಕೆಂದರೆ ಅವರು ನಮ್ಮ ಸಮರ್ಥ ನಾಯಕ. ಜನತೆಗೆ ನೀಡಿದ ಶೇ.99ರಷ್ಟು ಭರವಸೆ ಈಡೇರಿಸಲಾಗಿದೆ. ಅಭಿವೃದ್ಧಿಗೆ ಹೊಸ ಭಾಷ್ಯ ನೀಡಿದವರು ಮೋದಿ

* ರಾಜ್ಯಾಧ್ಯಕ್ಷರ ಅವಧಿ ಮೂರು ವರ್ಷ. ಆದರೆ ಪಕ್ಷದ ಸಂವಿಧಾನದಲ್ಲಿ ಬದಲಾವಣೆಯಾಗಿದ್ದು, ಎರಡನೇ ಅವಧಿಗೂ ಮುಂದುವರಿಯಬಹುದು. ಇದನ್ನು ವರಿಷ್ಠರು ಗಮನಿಸಲಿದ್ದಾರೆ. ಹಾಗಾಗಿ ಈ ಹಂತದಲ್ಲಿ ಏನೂ ಹೇಳುವುದಿಲ್ಲ. ಜಿಲ್ಲಾಧ್ಯಕ್ಷರು ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡುತ್ತಾರೆ. ಈಚಿನ ವರ್ಷಗಳಲ್ಲಿ ವರಿಷ್ಠರು ಯುವಜನತೆಗೆ ಆದ್ಯತೆ ನೀಡಿದ್ದು, ಮುಂದೆಯೂ ಒತ್ತು ನೀಡಬಹುದು.

* ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರ ಹೇಳಿಕೆಯನ್ನು ಮಾಧ್ಯಮದಲ್ಲಿ ಗಮನಿಸಿದ್ದು, ಹೆಚ್ಚಿನ ಮಾಹಿತಿ ಇಲ್ಲ. ಸಂಭಾವ್ಯ ಅಭ್ಯರ್ಥಿಗಳನ್ನು ರಾಜ್ಯ ಕೋರ್‌ ಕಮಿಟಿಯಿಂದ ಶಿಫಾರಸು ಮಾಡಲಾಗಿತ್ತು. ಅಂತಿಮವಾಗಿ ವರಿಷ್ಠರು ದೇಶಾದ್ಯಂತ ಯುವಜನತೆ, ಮಹಿಳೆಯರಿಗೆ ನೀಡಿರುವ ಆದ್ಯತೆಯನ್ನು ಪರಿಶೀಲಿಸಿ ತೀರ್ಮಾನಿಸಿರುತ್ತಾರೆ. ಬಿ.ಎಲ್‌.ಸಂತೋಷ್‌ ಅವರು ಯಾವ ಹಿನ್ನೆಲೆಯಲ್ಲಿ ಮಾತನಾಡಿದ್ದಾರೋ ಗೊತ್ತಿಲ್ಲ. ಹಾಗಾಗಿ ಉತ್ತರ ಕೊಡುವ ಪರಿಸ್ಥಿತಿಯಲ್ಲಿ ಇಲ್ಲ.

* ಲೋಕಸಭಾ ಚುನಾವಣೆ ಫ‌ಲಿತಾಂಶದ ಬಳಿಕವಲ್ಲ, ರಾಜ್ಯದಲ್ಲಿ ಎರಡನೇ ಹಂತದ ಮತದಾನ ಮುಗಿಯುತ್ತಿದ್ದಂತೆ ರಾಜ್ಯ ಸರ್ಕಾರದ ವಿಚಾರದಲ್ಲಿ ಏನು ಬೇಕಾದರೂ ಆಗಬಹುದು.

* ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರಿಗೆ ಬಿಜೆಪಿ ಬೆಂಬಲ ನೀಡಿರುವುದು ವರವಾಗಲಿದೆಯೇ ಹೊರತು ಶಾಪವಾಗದು.

ಟಾಪ್ ನ್ಯೂಸ್

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

13

Malpe ಫಿಶರೀಸ್‌ ಕಾಲೇಜು: ದುರ್ವಾಸನೆಯಲ್ಲೇ ಪಾಠ

12

Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

11

Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.