ಚಿಕ್ಕಮಗಳೂರು ಕ್ಷೇತ್ರ: ಅಮೃತ್ ಶೆಣೈ ಅವರಿಂದ ಮತ ಯಾಚನೆ
Team Udayavani, Apr 13, 2019, 6:56 AM IST
ಉಡುಪಿ: ಕೊಪ್ಪ, ಶೃಂಗೇರಿ, ಹರಿಹರಪುರ, ಜಯಪುರ ಮೊದಲಾದ ಸ್ಥಳಗಳಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅಮೃತ್ ಶೆಣೈ ಪಿ. ಅವರು ಬಿರುಸಿನ ಪ್ರಚಾರ ಕೈಗೊಂಡು ಮತ ಯಾಚಿಸಿದರು.
ಸಭೆಯನ್ನು ಉದ್ದೇಶಿಸಿ ಅಮೃತ್ ಶೆಣೈ ಮಾತನಾಡಿ, ಅಭಿವೃದ್ಧಿ ಹಾಗೂ ಸಾಮಾಜಿಕ ಸಾಮರಸ್ಯವನ್ನು ಎತ್ತಿ ಹಿಡಿಯುವ ಕೆಲಸವನ್ನು ಜತೆಜತೆಯಾಗಿ ಮಾಡುತ್ತೇನೆ. ಶೋಭಾ ಕರಂದ್ಲಾಜೆ ಮತ್ತು ಪ್ರಮೋದ್ ಮಧ್ವರಾಜ್ ಅವರ ಬಗ್ಗೆ ನಾನು ಯಾವುದೇ ಟೀಕೆ ಮಾಡುವುದಿಲ್ಲ ಎಂದರು.
ಅವರಿಬ್ಬರಿಗೂ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ದೇವರು ಈಗಾಗಲೇ ಕೊಟ್ಟಿದ್ದಾರೆ. ಅದೇ ರೀತಿ ತನಗೂ ಒಂದು ಅವಕಾಶ ನೀಡಿದರೆ ಮತದಾರರು ಇಟ್ಟ ಪ್ರೀತಿ, ವಿಶ್ವಾಸಕ್ಕೆ ಚ್ಯುತಿ ಬರದ ಹಾಗೆ ಕೆಲಸ ಮಾಡುತ್ತೇನೆ. ಅಲ್ಲದೆ ಕ್ಷೇತ್ರದ ಜನರ ಒಳಿತಿಗಾಗಿ ಚಿಕ್ಕಮಗಳೂರಿನಲ್ಲಿ ಮನೆ ಮಾಡಿ ಯಾವುದೇ ಹೊತ್ತಿನಲ್ಲೂ ಸಾರ್ವಜನಿಕರಿಗೆ ಸುಲಭವಾಗಿ ಭೇಟಿಯಾಗಲು ಸಿಗುತ್ತೇನೆ ಎಂದು ಭರವಸೆ ನೀಡಿದರು.
ಕಾರ್ಕಳ ಕ್ಷೇತ್ರದ ಫ್ರಾನ್ಸಿಸ್, ಚಿಕ್ಕಮಗಳೂರು ಕ್ಷೇತ್ರದ ಹನೀಫ್, ತರಿಕೆರೆಯ ವರದರಾಜ್, ಕಾಪುವಿನ ಅಮೀರ್, ಜಯಶ್ರೀ ಭಟ್, ದಿನೇಶ್ ಮತ್ತಿತರರು ಶೆಣೈಯವರ ಪರ ಮಾತ ಯಾಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.