ಮತಗಟ್ಟೆಯಲ್ಲಿ ಸೌಲಭ್ಯ ಲೋಪವಾದರೆ ಕಠಿನ ಕ್ರಮ: ಸಿಇಒ ಎಚ್ಚರಿಕೆ
Team Udayavani, Apr 13, 2019, 6:10 AM IST
ಉಡುಪಿ: ಚುನಾವಣ ಆಯೋಗದ ಸೂಚನೆಯಂತೆ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕಾಗಿದ್ದು ಇದರಲ್ಲಿ ಯಾವುದೇ ರೀತಿಯ ಲೋಪವಾದರೆ ಸಂಬಂಧಪಟ್ಟವರ ವಿರುದ್ಧ ಕಠಿನ ಕ್ರಮ ಜರುಗಿಸುವುದಾಗಿ ಜಿ. ಪಂ. ಸಿಇಒ ಸಿಂಧೂ ಬಿ. ರೂಪೇಶ್ ಎಚ್ಚರಿಸಿದ್ದಾರೆ.
ಅವರು ಶುಕ್ರವಾರ ಜಿ.ಪಂ. ಸಭಾಂಗಣದಲ್ಲಿ ಮತಗಟ್ಟೆ ಸೌಲಭ್ಯ ಕುರಿತು ನಗರ ಸ್ಥಳೀಯ ಸಂಸ್ಥೆ ಮುಖ್ಯಾಧಿಕಾರಿಗಳು ಹಾಗೂ ಗ್ರಾ. ಪಂ. ಪಿಡಿಒಗಳ ಸಭೆಯಲ್ಲಿ ಮಾತನಾಡಿದರು.
ಪ್ರತಿಯೊಂದು ಮತಗಟ್ಟೆಯಲ್ಲಿ ಕುಡಿಯುವ ನೀರಿನ ಸೌಲಭ್ಯ, ರ್‍ಯಾಂಪ್, ಪೀಠೊಪಕರಣ, ಮೆಡಿಕಲ್ ಕಿಟ್, ವಿದ್ಯುತ್ ಸೌಲಭ್ಯ, ಮತದಾರರಿಗೆ ಹೆಲ್ಪ್ ಡೆಸ್ಕ್ ಸೌಲಭ್ಯಗಳನ್ನು ಒದಗಿಸಬೇಕು. ಇದರಲ್ಲಿ ಯಾವುದೇ ಕೊರತೆಯಾಗದಂತೆ ಗಮನಹರಿಸಬೇಕು, ಚುನಾವಣೆ ದಿನ ಇದರಲ್ಲಿ ಯಾವುದೇ ಒಂದು ಲೋಪವಾದರೂ ಸಂಬಂಧಪಟ್ಟ ಪಿಡಿಒ, ಮುಖ್ಯಾಧಿಕಾರಿ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ ಸಿಇಒ ಹೇಳಿದರು.
ವಿಕಲಚೇತರು ಹಾಗೂ ಹಿರಿಯ ನಾಗರಿಕರನ್ನು ಮತಗಟ್ಟೆಗೆ ಕರೆತರಲು ವಾಹನ ಸೌಲಭ್ಯ ಹಾಗೂ ವೀಲ್ ಚೇರ್ ವ್ಯವಸ್ಥೆ ಸಿದ್ದವಾಗಿಟ್ಟುಕೊಳ್ಳಬೇಕು. ರಾಜಕೀಯ ವ್ಯಕ್ತಿಗಳಿಗೆ ಸಂಬಂಧಿಸಿದ ವಾಹನಗಳಲ್ಲಿ ಅವರನ್ನು ಕರೆ ತಂದರೆ, ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ತತ್‌ಕ್ಷಣವೇ ಸಿದ್ದತೆ ಮಾಡಿಟ್ಟುಕೊಳ್ಳಬೇಕು ಎಂದರು.ಜಿ.ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸರಾವ್ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.