ರಾ.ಹೆ. 66: ಅಪಾಯಕಾರಿಯಾಗಿ ವಿದ್ಯುತ್‌ ಕಂಬ ಸಾಗಾಟ


Team Udayavani, Apr 13, 2019, 6:51 AM IST

1104KPE4

ರಾ.ಹೆ. 66ರ ಮೂಲಕ ಲಾರಿಯಲ್ಲಿ ಅಪಾಯಕಾರಿಯಾಗಿ ವಿದ್ಯುತ್‌ ಕಂಬ ಸಾಗಾಟ ಮಾಡುತ್ತಿರುವುದು.

ಕಾಪು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಾಯಕಾರಿಯಾಗಿ ಗುರುವಾರ ಮಧ್ಯಾಹ್ನ ಲಾರಿಯಲ್ಲಿ ವಿದ್ಯುತ್‌ ಕಂಬಗಳನ್ನು ಸಾಗಾಟ ಮಾಡಿದ್ದು, ಇದರಿಂದಾಗಿ ಹೆದ್ದಾರಿಯಲ್ಲಿ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಯಿತು.

20ಕ್ಕೂ ಅಧಿಕ ಕಂಬಗಳು
ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಲಾರಿಯೊಂದರಲ್ಲಿ ಅಪಾಯಕಾರಿ ರೀತಿಯಲ್ಲಿ 20ಕ್ಕೂ ಅಧಿಕ ವಿದ್ಯುತ್‌ ಕಂಬಗಳನ್ನು ಜೋಡಿಸಿಕೊಂಡು, ಯಾವುದೇ ರೀತಿಯ ಮುನ್ಸೂಚನೆ ನೀಡುವ ಅಥವಾ ಸಾರ್ವಜನಿಕ ಎಚ್ಚರಿಕೆ ಫಲಕ ಅಳವಡಿಸದೇ ಸಾಗಾಟ ಮಾಡಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಪಾಯಕಾರಿ ವಾಹನ ಚಾಲನೆ
ಕುಂದಾಪುರದಿಂದ ಮಂಗಳೂರಿ ನತ್ತ ತೆರಳಿದ ಲಾರಿ ಚಾಲಕನು, ಹಿಂಬದಿಯಲ್ಲಿ ಕಟ್ಟಿದ್ದ ಕಂಬಗಳು ರಸ್ತೆಗೆ ತಾಗುವಂತೆ ನೇತಾಡುತ್ತಿದ್ದರೂ ಕೂಡ ಗಮನಿಸಿಯೂ ಅಪಾಯಕಾರಿಯಾಗಿ ಚಲಾಯಿಸಿದ್ದನು.

ಸಹಾಯಕನ ಮನವಿಗೂ ನಿರ್ಲಕ್ಷ್ಯ
ಲಾರಿಯಲ್ಲಿ ಹೇರಲಾಗಿದ್ದ ವಿದ್ಯುತ್‌ ಕಂಬಗಳ ಜತೆಗೆ ಕುಳಿತಿದ್ದ ವ್ಯಕ್ತಿ (ಸಹಾಯಕ) ಯೋರ್ವ ಪದೇ ಪದೇ ಚಾಲಕನಿಗೆ ಎಚ್ಚರ ನೀಡುತ್ತಿದ್ದರೂ, ಚಾಲಕ ಲಾರಿಯನ್ನು ಒಂದೆಡೆ ನಿಲ್ಲಿಸಿ, ಪರಿಶೀಲನೆ ನಡೆಸದೆ ಲಾರಿ ಓಡಿಸುವ ಮೂಲಕ ರಸ್ತೆ ಸಂಚಾರ ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿದ್ದಾನೆ ಎನ್ನುವುದು ಹೈವೇ ಸಂಚಾರಿಗಳ ಆರೋಪವಾಗಿದೆ.

ಹಿಂದಿನ ವಾಹನಗಳ ಸಂಚಾರಕ್ಕೆ ಅಡಚಣೆ
ಹಿಂಭಾಗದಲ್ಲಿ ಜೋಡಿಸಲಾಗಿದ್ದ ವಿದ್ಯುತ್‌ ಕಂಬಗಳ ಭಾರ ತಾಳಲಾರದೆ ಲಾರಿ ಎಡಬದಿ ಮುರಿತಕ್ಕೊಳಗಾದಂತೆ ಸಂಚರಿಸಿದ್ದು, ಇದರಿಂದಾಗಿ ಲಾರಿಯ ಹಿಂದಿನಿಂದ ಸಂಚರಿಸಿದ ಮಂಗಳೂರು ಕಡೆಗೆ ತೆರಳುವ ವಾಹನಗಳು ಗರಿಷ್ಠ ಅಂತರ ಕಾಯ್ದುಕೊಂಡು ಸಂಚರಿಸಬೇಕಾದ ಅನಿವಾರ್ಯತೆ ಎದುರಾಗಿತ್ತು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.