“ಮುಖ ತೋರಿಸಲಾಗದ ಶೋಭಾ ಕರಂದ್ಲಾಜೆ, ಮೋದಿ ಮುಖ ತೋರಿಸಿ ಮತ ಕೇಳುತ್ತಾರೆ’

ಅಲ್ಲಲ್ಲಿ ಕಾಂಗ್ರೆಸ್‌ ಪ್ರಚಾರ ಸಭೆ

Team Udayavani, Apr 13, 2019, 6:07 AM IST

1204KDPP3

ಸಿದ್ದಾಪುರ: ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಜ್ವಲಂತ ಸಮಸ್ಯೆಗಳು ಜನರನ್ನು ಇಂದಿಗೂ ಕಾಡುತ್ತಿವೆ. ಶೋಭಾ ಕರಂದ್ಲಾಜೆ ಅವರು ಹೇಳುತ್ತಾರೆ ನನ್ನನ್ನು ನೋಡಿ ಓಟು ನೀಡಬೇಡಿ, ಮೋದಿಯನ್ನು ನೋಡಿ ಓಟು ಕೊಡಿ ಎಂದು ಹೇಳುತ್ತಾರೆ. ಸಂಸದರಾಗಿದ್ದಾಗ ಏನೂ ಅಭಿವೃದ್ಧಿ ಕೆಲಸ ಮಾಡದೆ ಇರುವುದರಿಂದ ಜನರಿಗೆ ಮುಖ ತೋರಸಲಾಗದೆ, ಮೋದಿ ಮುಖ ತೋರಿಸಿ ಮತ ಕೇಳುತ್ತಾರೆ ಎಂದು ಹೇಳುತ್ತಾರೆ ಎಂದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್‌ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಹೇಳಿದರು.

ಹೆಂಗವಳ್ಳಿ ಗ್ರಾಮದ ತೊಂಭತ್ತು ಜಯರಾಮ ಶೆಟ್ಟಿ ಅವರ ಮನೆಯಲ್ಲಿ ನಡೆದ ಅಮಾಸೆಬೈಲು ತಾ. ಪಂ. ವ್ಯಾಪ್ತಿಯ ಕಾಂಗ್ರೆಸ್‌ ಕಾರ್ಯಕರ್ತ ಸಭೆಯಲ್ಲಿ ಅವರು ಮಾತನಾಡಿದರು.

ಕಸ್ತೂರಿರಂಗನ್‌, ಡೀಮ್ಡ್ ಫಾರೇಸ್ಟ್‌, ಮೀನುಗಾರರ ಸಮಸ್ಯೆ, ಯುವಕರಿಗೆ ಉದ್ಯೋಗ ಸಮಸ್ಯೆ ಹೀಗೆ ಯಾವ ಸಮಸ್ಯೆಗಳ ಬಗ್ಗೆ ಶೋಭಾ ಕರಂದ್ಲಾಜೆ ಅವರು ಚಿಂತನೆ ಮಾಡಲಿಲ್ಲ. ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತ, ಜನರನ್ನು ದಾರಿ ತಪ್ಪಿಸುತ್ತ ಐದು ವರ್ಷಗಳ ಕಾಲ ಕಾಲಕಳೆದರು. ಮೋದಿ ಮುಖ ನೋಡಿ ಮತ ಕೊಡುವುದಾದರೆ, ಮೋದಿ ಚುನಾವಣೆಗೆ ನಿಂತ ವಾರಣಾಸಿಯಲ್ಲಿ ಮತ ಕೊಡಬೇಕು. ಆದರೆ ಇದು ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರ. ಆದ್ದ‌ರಿಂದ ಇಲ್ಲಿಯ ಅಭ್ಯರ್ಥಿ ಹಾಗೂ ಅಭಿವೃದ್ಧಿಯನ್ನು ನೋಡಿ ಮತ ನೀಡಬೇಕು. ಸುಳ್ಳು ಭರವಸೆಯನ್ನೇ ಬಂಡವಾಳ ಮಾಡಿ‌ಕೊಂಡಿರುವ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಬೇಕೋ ಅಥವಾ ಅಭಿವೃದ್ಧಿಯ ಹರಿಕಾರ ಎಂದು ಕರೆಸಿಕೊಂಡಿರುವ ಪ್ರಮೋದ್‌ ಮಧ್ವರಾಜ್‌ ಬೇಕೋ ಜನತೆ ತೀರ್ಮಾನಿಸಲಿ ಎಂದರು.

ಕುಂದಾಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ನಿಯೋಜಿತ ಅಧ್ಯಕ್ಷ ಹರಿಪ್ರಸಾದ ಶೆಟ್ಟಿ ಬಿದ್ಕಲ್‌ಕಟ್ಟೆ, ಉಡುಪಿ ಜಿಲ್ಲಾ ಕಾಂಗ್ರೆಸ್‌ ಕಾರ್ಯದರ್ಶಿ ಬಿ. ಸತೀಶ ಕಿಣಿ ಬೆಳ್ವೆ, ಮುಖಂಡ ಮುಸ್ತಕ್‌ ಸಾಹೇಬ್‌, ಹೆಂಗವಳ್ಳಿ ಗ್ರಾ. ಪಂ. ಅಧ್ಯಕ್ಷೆ ಜ್ಯೋತಿ, ಉಪಾಧ್ಯಕ್ಷ ಬಿ. ರಘರಾಮ ರೈ, ಉದ್ಯಮಿ ಜಯರಾಮ ಶೆಟ್ಟಿ ತೊಂಭತ್ತು, ಹಿಂದುಳಿದ ಮೋರ್ಚದ ಅಧ್ಯಕ್ಷ ಕೃಷ್ಣ ಪೂಜಾರಿ ಕೊೃಲಾಡಿ, ಯುವ ಕಾಂಗ್ರೆಸ್‌ ಅಧ್ಯಕ್ಷ ಇಚ್ಛಿತಾರ್ಥ ಶೆಟ್ಟಿ, ಕುಂದಾಪುರ ಬ್ಲಾಕ್‌ ಐಟಿ ಸೇಲ್‌ ಚಂದ್ರ ಶೆಟ್ಟಿ, ಮುಖಂಡ ವಿಕಾಸ್‌ ಹೆಗ್ಡೆ ಬಸೂÅರು ಮೊದಲಾದವರು ಉಪಸ್ಥಿತರಿದ್ದರು.

ಹೆಂಗವಳ್ಳಿ ಗ್ರಾ. ಪಂ. ಮಾಜಿ ಅಧ್ಯಕ್ಷ ವಸುಂಧರ ಹೆಗ್ಡೆ ನಿರೂಪಿಸಿದರು.

ವಕೀಲರ ಮತ ಯಾಚಿಸಿದ ಪ್ರಮೋದ್‌
ಕುಂದಾಪುರ: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಇಲ್ಲಿನ ಕೋರ್ಟ್‌ ಕಟ್ಟಡದಲ್ಲಿರುವ ವಕೀಲರ ಸಂಘದ ಕಚೇರಿಗೆ ಭೇಟಿ ನೀಡಿ ಮತಯಾಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಮೋದ್‌, ಕಳೆದ 5 ವರ್ಷಗಳಲ್ಲಿ ಸಂಸದರಾಗಿದ್ದ ಶೋಭಾ ಅವರು ಈ ಕ್ಷೇತ್ರದ ಅನೇಕ ಸಮಸ್ಯೆಗಳನ್ನು ನಿವಾರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಮರಳು ಸಮಸ್ಯೆಗೂ ಪರಿಹಾರ ಸಿಕ್ಕಿಲ್ಲ. ಹೆದ್ದಾರಿ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ ಎಂದು ಆರೋಪಿಸಿದರು. ಬಾರ್‌ ಅಸೋಸಿಯೇಶನ್‌ ಅಧ್ಯಕ್ಷ ನಿರಂಜನ್‌ ಹೆಗ್ಡೆ ಸಳ್ವಾಡಿ, ಪ್ರ. ಕಾರ್ಯದರ್ಶಿ ಪ್ರಮೋದ್‌ ಹಂದೆ, ಪದಾಧಿಕಾರಿಗಳು, ಸದಸ್ಯರು, ವಕೀಲರು, ಕಾಂಗ್ರೆಸ್‌ ಮುಖಂಡರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಶ್ಯಾಮಲಾ ಭಂಡಾರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

1-bharat

Bharatanatyam; ರಾಜ್ಯ ಮಟ್ಟದ ಶಿಷ್ಯವೇತನಕ್ಕೆ ಅದಿತಿ ಜಿ.ಮಂಡೀಚ,ಸ್ವಾತಿ ಆಯ್ಕೆ

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

6(1

Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ

5(1

ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ

Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.