ಸುದ್ದಿ ಪ್ರಕಟ-ಪ್ರಸಾರ ನಿರ್ಬಂಧ ಆದೇಶ ತೆರವು

Team Udayavani, Apr 13, 2019, 3:00 AM IST

highcourt

ಬೆಂಗಳೂರು: ಕಿರುಕುಳ ನೀಡಿದ್ದಾರೆ ಎಂಬ ಮಹಿಳೆಯೊಬ್ಬರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿ ಪ್ರಕಟಿಸದಂತೆ ಸಿಟಿ ಸಿವಿಲ್‌ ಕೋರ್ಟ್‌ನಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಮಾಧ್ಯಮಗಳ ವಿರುದ್ಧ ಪಡೆದುಕೊಂಡಿದ್ದ ನಿರ್ಬಂಧ ಆದೇಶವನ್ನು ಹೈಕೋರ್ಟ್‌ ಶುಕ್ರವಾರ ತೆರವುಗೊಳಿಸಿದೆ.

ಈ ಕುರಿತು ಅಸೋಸಿಯೇಷನ್‌ ಫಾರ್‌ ಡೆಮಾಕ್ರೆಟಿಕ್‌ ರಿಫಾರ್ಮ್ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತ ತೀರ್ಪು ಪ್ರಕಟಿಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್‌. ನಾರಾಯಣಸ್ವಾಮಿ ಹಾಗೂ ನ್ಯಾ. ಪಿ.ಎಸ್‌. ದಿನೇಶ್‌ ಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ, ಸಿಟಿ ಸಿವಿಲ್‌ ಕೋರ್ಟ್‌ನ ಆದೇಶ ತೆರವುಗೊಳಿಸಿ, ಮಾಧ್ಯಮಗಳು ಅವಹೇಳನಕಾರಿ ಸುದ್ದಿಯನ್ನು ಪ್ರಕಟ ಅಥವಾ ಪ್ರಸಾರ ಮಾಡಿದರೆ, ಆ ಕುರಿತು ಅರ್ಜಿದಾರರು ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ಹೈಕೋರ್ಟ್‌ ಆದೇಶಿಸಿದೆ.

ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಆರೋಪ ಸಂಬಂಧ ತೇಜಸ್ವಿ ಸೂರ್ಯ ವಿರುದ್ಧ ಮಾಧ್ಯಮಗಳು ಅವಹೇಳನಕಾರಿ ಸುದ್ದಿ ಪ್ರಕಟಿಸಬಾರದು ಎಂದು ಸಿವಿಲ್‌ ಕೋರ್ಟ್‌ ಹೊರಡಿಸಿದ ಆದೇಶ ತೆರವುಗೊಳಿಸಬೇಕು ಎಂದು ಕೋರಿ ದೆಹಲಿ ಮೂಲದ ಎಡಿಆರ್‌ ಸಂಸ್ಥೆ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಗುರುವಾರ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಪೀಠ, ತೀರ್ಪು ಕಾಯ್ದಿರಿಸಿತ್ತು.

ಸುದ್ದಿ ಪ್ರಸಾರ ಅಥವಾ ಪ್ರಕಟಗೊಂಡ ನಂತರವಷ್ಟೇ ಮಾನಹಾನಿ ಹೇಳಿಕೆ ಅಥವಾ ದೃಶ್ಯ ಎಂಬುದನ್ನು ನಿರ್ಧರಿಸಲು ಸಾಧ್ಯ. ತನ್ನ ಮಾನಹಾನಿಯಾಗಿದೆ ಎಂದು ಹೇಳುವ ವ್ಯಕ್ತಿ ಅಂತಹ ಸುದ್ದಿ ಪ್ರಸಾರ ಅಥವಾ ಪ್ರಕಟವಾದ ಮೇಲೆ ಅದನ್ನು ಸೂಕ್ತ ವೇದಿಕೆಯಲ್ಲಿ ಪ್ರಶ್ನಿಸಬಹುದು. ಮಾಧ್ಯಮಗಳಿಗೆ ಸುದ್ದಿ ಪ್ರಸಾರ ಮಾಡುವ ಹಕ್ಕು ಇದೆ.

ಅದರಂತೆ ಮಾನಹಾನಿಕಾರಿಯಲ್ಲದ ಸುದ್ದಿ ಎಂದು ಮಾಧ್ಯಮಗಳು ಅಭಿಪ್ರಾಯಕ್ಕೆ ಬಂದರೆ, ಅದನ್ನು ಪ್ರಸಾರ ಅಥವಾ ಪ್ರಕಟ ಮಾಡಬಹುದು. ಒಂದೊಮ್ಮೆ ಪ್ರಸಾರ ಅಥವಾ ಪ್ರಕಟವಾದ ನಂತರ ಅದು ಮಾನಹಾನಿ ಸುದ್ದಿ ಎಂದು ಭಾವಿಸಿದರೆ, ಅರ್ಜಿದಾರರು ಆ ಕುರಿತು ಕೇಂದ್ರ ಚುನವಣಾ ಆಯೋಗಕ್ಕೆ ಮನವಿ ಸಲ್ಲಿಸಿ ಸೂಕ್ತ ಪರಿಹಾರ ಕಂಡುಕೊಳ್ಳಬಹುದು ಎಂದು ಆದೇಶದಲ್ಲಿ ತಿಳಿಸಿದ ನ್ಯಾಯಪೀಠ ಅರ್ಜಿ ಇತ್ಯರ್ಥಪಡಿಸಿತು.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.