ಮೋದಿಗೆ ರಷ್ಯಾದ ಅತ್ಯುನ್ನತ ಪ್ರಶಸ್ತಿ
Team Udayavani, Apr 13, 2019, 6:00 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲೊಂದಾದ ಆರ್ಡರ್ ಆಫ್ ಸೇಂಟ್ ಆಂಡ್ರ್ಯು ಪುರಸ್ಕಾರಕ್ಕೆ ಭಾಜನರಾಗಿ ದ್ದಾರೆ. ಶುಕ್ರವಾರ ಈ ಘೋಷಣೆ ಮಾಡಲಾಗಿದ್ದು, ಎರಡೂ ದೇಶಗಳ ಸಂಬಂಧ ಸಹಕಾರದಲ್ಲಿ ಈ ಪುರಸ್ಕಾರ ಮಹತ್ವದ್ದಾಗಿರಲಿದೆ. 1698ರಿಂದಲೂ ಈ ಪುರಸ್ಕಾರವನ್ನು ರಷ್ಯಾದಲ್ಲಿ ಅತ್ಯುನ್ನತ ಸೇವೆಗೈದ ನಾಗರಿಕರು ಹಾಗೂ ವಿದೇಶಿಯರಿಗೆ ನೀಡಲಾಗುತ್ತಿದೆ. ರಷ್ಯಾ ಹಾಗೂ ಭಾರತೀ ಯರ ಮಧ್ಯೆ ಉತ್ತಮ ಸಂಬಂಧ ಸುಧಾರಣೆ ಮತ್ತು ವ್ಯೂಹಾತ್ಮಕ ಪಾಲುದಾರಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಕೊಡುಗೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೋದಿಗೆ ಈ ಪುರಸ್ಕಾರ ನೀಡಲಾಗುತ್ತಿದೆ ಎಂದು ರಷ್ಯಾ ಸರಕಾರ ಹೇಳಿದೆ.
ಈ ಪುರಸ್ಕಾರವನ್ನು ನನಗೆ ಕೊಡಮಾಡಿದ್ದಕ್ಕಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಹೇಳಿದ್ದಾರೆ. ಈ ಹಿಂದೆ ಪ್ರಧಾನಿ ಮೋದಿಗೆ ಯುಎಇ ಝಾಯೇದ್ ಪುರಸ್ಕಾರ ನೀಡಿ ಗೌರವಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ
Maharashtra polls; ಫಲಿತಾಂಶದ ಬಳಿಕವೇ ಸಿಎಂ ಯಾರೆಂದು ನಿರ್ಧಾರ: ಕಾಂಗ್ರೆಸ್
Andhra; ಮಿತ್ರ ಪಕ್ಷ ಟಿಡಿಪಿಯ ಗೃಹ ಸಚಿವೆಗೇ ವಾರ್ನಿಂಗ್ ನೀಡಿದ ಡಿಸಿಎಂ ಪವನ್ ಕಲ್ಯಾಣ್!
Agra: ಭಾರತೀಯ ವಾಯುಪಡೆ ಮಿಗ್ 29 ಯುದ್ಧ ವಿಮಾನ ಪತನ, ಪೈಲಟ್ ಪಾರು
Jammu Kashmir: ಕಲಂ-370- ವಿಧಾನಸಭೆ ಮೊದಲ ಕಲಾಪದಲ್ಲೇ ಪಿಡಿಪಿ-ಬಿಜೆಪಿ ಕೋಲಾಹಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.