ಇಲಾಖೆಗಳ ಸಮನ್ವಯ ಕೊರತೆ; ಕಾಮಗಾರಿ ಅಪೂರ್ಣ

ಮಧ್ಯ- ಪಂಜ ಸಂಪರ್ಕ ರಸ್ತೆ

Team Udayavani, Apr 13, 2019, 6:28 AM IST

1104PBE4-Chelairu

ಅಪೂರ್ಣ ಕಾಮಗಾರಿಗೊಂಡಿರುವ ಮಧ್ಯ- ಪಂಜ ಸಂಪರ್ಕ ರಸ್ತೆ.

ವಿಶೇಷ ವರದಿ – ಚೇಳಾçರು: ಚೇಳಾçರು ಗ್ರಾಮ ಪಂಚಾಯತ್‌ಗೆ ಒಳಪಟ್ಟ ಮಧ್ಯ ಗ್ರಾಮ ಮತ್ತು ಕೆಮ್ರಾಲ್‌ ಗ್ರಾಮ ಪಂಚಾಯತ್‌ಗೆ ಒಳಪಟ್ಟ ಪಂಜ ಗ್ರಾಮಕ್ಕೆ ಸಂಪರ್ಕಿಸುವ ಪಂಜ ಮಧ್ಯ ಸಂಪರ್ಕ ಸೇತುವೆ 2 ಕೋಟಿ ರೂ. ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ನಿರ್ಮಾಣ ಗೊಂಡರೆ, ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಲ್ಲಿ ಸುಮಾರು 1.20 ಕೋ.ರೂ. ವೆಚ್ಚದಲ್ಲಿ ಇತ್ತೀಚೆಗೆ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದ್ದು , ಇಲಾಖೆಗಳ ನಡುವೆ ಸಮನ್ವಯದ ಕೊರತೆಯಿಂದ ಇದೀಗ ಅಪೂರ್ಣವಾಗಿಯೇ ಉಳಿದಿದೆ.

ಊಟಕ್ಕಿಲ್ಲದ ಉಪ್ಪಿನಕಾಯಿ
ಈ ಎರಡು ಗ್ರಾಮದಲ್ಲಿ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆ ಕೈಗೆತ್ತಿಕೊಳ್ಳಲಾಗಿತ್ತು. ಆದರೆ ಇದು ಊಟಕ್ಕಿಲ್ಲದ ಉಪ್ಪಿನಕಾಯಿ ಎಂಬ ಗಾದೆಯಂತೆ ಎರಡು ಕಾಮಗಾರಿಗಳು ನಡೆದಿವೆ. ಸಣ್ಣ ನೀರಾವರಿ ಇಲಾಖೆಯಿಂದ ನಿರ್ಮಾಣಗೊಂಡ ಸೇತುವೆಯ ಅಗಲ ಕಡಿಮೆಯಾಗಿದ್ದು ಮತ್ತು ಎತ್ತರ ಕಡಿಮೆಯಾಗಿ ಮಳೆಗಾಲದಲ್ಲಿ ವಾಹನ ಸಂಚಾರ ಸಾಧ್ಯವಿಲ್ಲ. ಸೇತುವೆವರೆಗೆ ರಸ್ತೆ ಡಾಮರು ಕಾಮಗಾರಿ ನಡೆಸದೆ ಈಗ ಸಣ್ಣ ವಾಹನ ಸಂಚಾರ ಕಷ್ಟವಾಗಿದೆ. ಮಳೆಗಾಲದಲ್ಲಿ ಕೆಸರಿನಿಂದ ನಡೆದಾಡಲು ಕಷ್ಟ. ಈ ಬಗ್ಗೆ ರಸ್ತೆಯ ಗುತ್ತಿಗೆದಾರರಲ್ಲಿ ವಿಚಾರಿಸಿದಾಗ ಇದು ನನ್ನ ಕೆಲಸವಲ್ಲ ಸೇತುವೆ ನಿರ್ಮಾಣದವರ ಕೆಲಸ ಎನ್ನುವ ಉತ್ತರ ನೀಡುತ್ತಾರೆ.

ಸಾರ್ವಜನಿಕರ ಆಕ್ರೋಶ
ಸಣ್ಣ ನೀರಾವರಿ ಇಲಾಖೆಯವರಲ್ಲಿ ವಿಚಾರಿಸಿದಾಗ ಇದು ರಸ್ತೆಯ ಗುತ್ತಿಗೆ ದಾರರ ಕೆಲಸ ಎಂಬ ಉತ್ತರ ಲಭಿಸುತ್ತದೆ. ಒಟ್ಟಾರೆಯಾಗಿ ರಸ್ತೆಯ ಕಾಮಗಾರಿಗಳು ಪೂರ್ತಿಗೊಳ್ಳದಿದ್ದರೂ ಗುತ್ತಿಗೆದಾರರಿಗೆ ಬಿಲ್ಲು ಪಾವತಿ ಯಾಗಿರುವುದು ಸಾರ್ವಜನಿಕರ ಅಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಹಿಂದೆ ಜಿಲ್ಲಾ ಪಂಚಾಯತ್‌ ಉಪಾಧ್ಯಕ್ಷೆ ಕಸ್ತೂರಿ ಪಂಜ ಅವರು ಸಂಬಂಧ ಪಟ್ಟ ಅಧಿ ಕಾರಿಗಳನ್ನು ಕರೆಯಿಸಿ ಸರಿಪಡಿಸಲು ಹೇಳಿದ್ದರು. ಆದರೆ ಅ ಧಿಕಾರಿಗಳು ಮತ್ತು ಗುತ್ತಿಗೆದಾರರು ಇತ್ತ ಗಮನ ಹರಿಸಲಿಲ್ಲ. ಈ ಬಗ್ಗೆ ಶಾಸಕರಾದ ಉಮಾನಾಥ ಕೋಟ್ಯಾನ್‌ ಗಮನ ಹರಿಸಿ ಮುಂದಿನ ಮಳೆಗಾಲದ ಒಳಗೆ ಸರಿಪಡಿಸುವಲ್ಲಿ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸುವುದು ಅನಿವಾರ್ಯ ಎನ್ನುತ್ತಿದ್ದಾರೆ ಸ್ಥಳೀಯ ಗ್ರಾಮಸ್ಥರು. ಒಟ್ಟಿನಲ್ಲಿ ಕೋಟ್ಯಂತರ ರೂ. ವೆಚ್ಚ ಮಾಡಿ ಈ ರಸ್ತೆ, ಸೇತುವೆ ನಿರ್ಮಾಣಗೊಂಡಿದ್ದು ಗ್ರಾಮಸ್ಥರಿಗೆ ಮಾತ್ರ ಇದರ ಉಪಯೋಗ ಕಷ್ಟಕರವಾಗಿದೆ.

 ಪರಿಶೀಲಿಸಿ ಕ್ರಮ
ಸೇತುವೆ ಭಾಗದಲ್ಲಿ ಸ್ವಲ್ಪ ಖಾಸಗಿ ಜಮೀನು ಮತ್ತು ತಾಂತ್ರಿಕ ಅಡಚಣೆಯಿದೆ. ಇದನ್ನು ಸರಿಪಡಿಸಿಕೊಂಡು ಯಾವ ರೀತಿ ಮಾಡಬಹುದು ಎಂದು ತಿಳಿದುಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು.
 - ವಿಶ್ವನಾಥ್‌
ಪಿಡಿಒ, ಚೇಳಾçರು

ಟಾಪ್ ನ್ಯೂಸ್

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ

5(1

Mangaluru: 7 ಕೆರೆ, ಪಾರ್ಕ್‌ ಅಭಿವೃದ್ಧಿಗೆ ಅಮೃತ 2.0

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

1-qeqwewq

Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.