ವನಿತಾ ಹಾಕಿ: ಭಾರತಕ್ಕೆ 4-0 ಸರಣಿ
Team Udayavani, Apr 13, 2019, 9:59 AM IST
ಕೌಲಾಲಂಪುರ: ಮಲೇಶ್ಯ ವಿರುದ್ಧದ 5 ಪಂದ್ಯಗಳ ಸರಣಿಯ ಕೊನೆಯ ಪಂದ್ಯದಲ್ಲೂ ಪ್ರಾಬಲ್ಯ ಮೆರೆದ ಭಾರತೀಯ ವನಿತಾ ಹಾಕಿ ತಂಡ 4-0 ಅಂತರದಿಂದ ಸರಣಿ ಕೈವಶ ಮಾಡಿಕೊಂಡಿದೆ.
ಗುರುವಾರ ನಡೆದ ಹಾಕಿ ಟೆಸ್ಟ್ ನ ಕೊನೆಯ ಪಂದ್ಯದಲ್ಲಿ ಭಾರತ 1-0 ಗೋಲಿನಿಂದ ಮಲೇಶ್ಯವನ್ನು ಸೋಲಿಸಿದೆ. ಈ ಗೋಲು ನವಜೋತ್ ಕೌರ್ ಅವರಿಂದ ದಾಖಲಾಯಿತು.
ಪಂದ್ಯದ ಆರಂಭದಿಂದಲೇ ಎರಡೂ ತಂಡಗಳು ರಕ್ಷಣಾತ್ಮಕ ಆಟವಾಡಿದವು. ಹೀಗಾಗಿ ಮೊದಲೆರಡು ಕ್ವಾರ್ಟರ್ನಲ್ಲಿ ಯಾವುದೇ ಗೋಲು ದಾಖಲಾಗಲಿಲ್ಲ.
3ನೇ ಕ್ವಾರ್ಟರ್ನ 35ನೇ ನಿಮಿಷದಲ್ಲಿ ನವಜೋತ್ ಕೌರ್ ಫೀಲ್ಡ್ ಗೋಲು ಬಾರಿಸುವ ಮೂಲಕ ಭಾರತಕ್ಕೆ 1-0 ಮುನ್ನಡೆ ತಂದುಕೊಟ್ಟರು. ಇದಾದ ಅನಂತರ ಗೋಲು ಬಾರಿಸಲು ಭಾರತಕ್ಕೆ ಅನೇಕ ಅವಕಾಶ ದೊರಕಿತಾದರೂ ಮಲೇಶ್ಯ ರಕ್ಷಣಾ ಪಡೆ ತಡೆಯೊಡ್ಡುವಲ್ಲಿ ಯಶಸ್ವಿಯಾಯಿತು.
ಒಂದು ಗೋಲು ಬಾರಿಸಿ ಉತ್ಸಾಹದಲ್ಲಿದ್ದ ಭಾರತ ಎದುರಾಳಿ ತಂಡಕ್ಕೆ ಗೋಲು ಬಾರಿಸಲು ಯಾ ವುದೇ ಅವಕಾಶ ನೀಡಲಿಲ್ಲ. ಕೊನೆಯ ಕ್ಷಣದವರೆಗೂ ಪಂದ್ಯದ ಮೇಲೆ ಹಿಡಿತ ಸಾಧಿಸಿಕೊಂಡ ಭಾರತ ಜಯ ಸಾಧಿಸಿ ಅಜೇಯವಾಗಿ ಮಲೇಶ್ಯ ಪ್ರವಾಸವನ್ನು ಕೊನೆಗೊಳಿಸಿದೆ.
“ಡಿಫೆನ್ಸಿವ್ ತಂಡಗಳಲ್ಲಿ ಒಂದಾಗಿರುವ ಮಲೇಶ್ಯ ವಿರುದ್ಧ ನಮ್ಮ ಆಟ ಹೇಗಿರುತ್ತದೆ ಎಂಬುದನ್ನು ಅರಿತುಕೊಳ್ಳಲು ಈ ಸರಣಿ ಬಹಳಷ್ಟು ನೆರವಾಗಿದೆ. ಯುವ ಆಟಗಾರ್ತಿಯರು ಈ ಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ’ ಎಂದು ಪ್ರಧಾನ ಕೋಚ್ ಜೋರ್ಡ್ ಮರಿಜ್ನೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.