ಗೃಹ ಪ್ರವೇಶ: ಜಾಗೃತ ದಳದಿಂದ ಪರಿಶೀಲನೆ
Team Udayavani, Apr 14, 2019, 6:00 AM IST
ಚುನಾವಣ ಜಾಗೃತ ದಳದವರು ಮಾಹಿತಿ ಪಡೆದರು.
ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದ ಕ್ವಾರ್ಟರ್ಸ್‌ನಲ್ಲಿ ಗೃಹಪ್ರವೇಶ ನಡೆಯುತ್ತಿರುವ ಮನೆ ಪಕ್ಕದಲ್ಲಿ ರಾಜಕೀಯ ಪಕ್ಷವೊಂದರ ಕಾರ್ಯಕರ್ತರಿಗೆ ಬಾಡೂಟ ನೀಡಲಾ ಗುತ್ತಿದೆ ಎಂಬ ದೂರು ಬಂದ ಹಿನ್ನೆಲೆ ಯಲ್ಲಿ ಚುನಾವಣ ಜಾಗೃತ ದಳ ಆಗಮಿಸಿ ಪರಿಶೀಲನೆ ನಡೆಸಿದ ಘಟನೆ ಎ. 12ರಂದು ಸಂಭವಿಸಿದೆ.
ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದ ಕ್ವಾರ್ಟರ್ಸ್‌ನಲ್ಲಿ ನೂತನ ಮನೆಯ ಗೃಹಪ್ರವೇಶ ಪ್ರಯುಕ್ತ ಮಧ್ಯಾಹ್ನ ಭೋಜನ ವ್ಯವಸ್ಥೆ ಮಾಡ ಲಾಗಿತ್ತು. ಇಲ್ಲಿನ ಅಂಗಳದಲ್ಲಿ ಸ್ಥಳಾವಕಾಶ ಇಲ್ಲದೆ ಪಕ್ಕದ ಮನೆಯ ಅಂಗಳದಲ್ಲಿ ಸಸ್ಯಾಹಾರ ಅಡುಗೆ ಸಿದ್ಧಪಡಿಸಿ ಹೊಸ ಮನೆಯ ಅಂಗಳದಲ್ಲಿ ಊಟೋಪಚಾರ ವ್ಯವಸ್ಥೆ ಮಾಡಲಾಗಿತ್ತು.
ಆದರೆ ಇಲ್ಲಿನ ಗೃಹಪ್ರವೇಶದ ಸಮೀಪದ ಮನೆಯಲ್ಲಿ ರಾಜಕೀಯ ಪಕ್ಷವೊಂದರ ಕಾರ್ಯಕರ್ತರಿಗೆ ಬಾಡೂಟ ನೀಡಲಾಗುತ್ತಿದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಚುನಾವಣ ಜಾಗೃತ ದಳ ಪರಿಶೀಲನೆ ನಡೆಸಿತು. ಈ ಪ್ರದೇಶದಲ್ಲಿ ಪರಿಶೀಲನೆ ನಡೆಸ ಲಾಗಿದ್ದು, ಬಾಡೂಟ ನೀಡಿರುವುದು ಕಂಡು ಬಂದಿಲ್ಲ ಎಂದು ಚುನಾವಣ ಜಾಗೃತ ದಳದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.