ಕರಿಮೆಣಸು ಸೊರಗದಂತೆ ತಡೆಯಿರಿ

ಮಳೆಗಾಲದ ಆರಂಭದಲ್ಲೇ ಸುರಕ್ಷಾ ಕ್ರಮ ಅನುಸರಿಸಿ

Team Udayavani, Apr 14, 2019, 6:00 AM IST

j-23

ಮಲೆನಾಡು ಪ್ರದೇಶದಲ್ಲಿ ಮಿಶ್ರ ಬೆಳೆಯಾಗಿ ಕರಿಮೆಣಸು ಕೂಡ ಬೆಳೆಗಾರರ ತೋಟದ ಮಧ್ಯೆ ವಿಸ್ತರಣೆಯನ್ನು ಕಂಡಿದೆ. ಆದರೆ ಇತ್ತೀಚಿನ ದಿನಗಳಲ್ಲಿ ರೋಗ ಸೇರಿದಂತೆ ವಿವಿಧ ಕಾರಣಗಳಿಂದ ಕರಿಮೆಣಸು ಬಳ್ಳಿಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮಳೆಗಾಲದ ಆರಂಭದಲ್ಲಿ ಒಂದಷ್ಟು ಸುರಕ್ಷ ಕ್ರಮಗಳನ್ನು ಕೈಗೊಂಡರಷ್ಟೇ ಕರಿಮೆಣಸು ಕೈಹಿಡಿಯುತ್ತದೆ.

ಕರಿಮೆಣಸಿನಂತಹ ವಾಣಿಜ್ಯ ಬೆಳೆಯಲ್ಲಿ ಒಂದು ವರ್ಷ ಕಡಿಮೆಯಾದರೂ ಮತ್ತೂಂದು ವರ್ಷ ಇಳುವರಿ ಸಿಗುತ್ತದೆ. ಇದರ ನಡುವೆ ಫಸಲು ಬರುವ ಬಳ್ಳಿಗಳು ಹಳದಿ ಬಣ್ಣಕ್ಕೆ ತಿರುಗಿ ಸಾಯುತ್ತಿರುವುದು ಕೆಲವು ತೋಟಗಳಲ್ಲಿ ಕಂಡು ಬರುತ್ತಿವೆ. ಇನ್ನು ಕೆಲವೆಡೆ ಬಳ್ಳಿ ಒಣಗಿ ಫಸಲು ಉದುರುತ್ತಿದೆ. ಕರಿಮೆಣಸಿಗೆ ತಗುಲುವ ಸೊರಗು ರೋಗ ಇಳುವರಿ ಅಧಿಕ ಕಂಡುಬಂದ ಸಮಯದಲ್ಲಿ ಈ ಸೊರಗು ರೋಗ ಬೆಳೆಗಾರರನ್ನು ಕಾಡುತ್ತಿದೆ.

ಶೀಘ್ರ ಹರಡುವ ರೋಗ
ಕೇರಳ ರಾಜ್ಯದ ವಯನಾಡು ಭಾಗದಲ್ಲಿ 1920ರ ಅವಧಿಯಲ್ಲಿ ಕಾಣಿಸಿಕೊಂಡ ಈ ರೋಗ 1990ರ ಕಾಲದಲ್ಲಿ ಕರ್ನಾಟಕ ರಾಜ್ಯದಲ್ಲೂ ಕಾಣಿಸಿಕೊಂಡಿತ್ತು. ಆ ಬಳಿಕ ಇಲ್ಲಿ ತೀವ್ರವಾಗಿ ಹರಡಿದ್ದರೂ, ಇಲ್ಲಿಯವರೆಗೂ ಇದನ್ನು ಸಮರ್ಪಕವಾಗಿ ತಡೆಗಟ್ಟಲು ಸಾಧ್ಯವಾಗಿಲ್ಲ. ಹಾಗಾಗಿ ಬೆಳೆಗಾರರನ್ನು ಈ ರೋಗ ನಿರಂತರವಾಗಿ ಕಾಡುವುದು, ನಷ್ಟ ಅನುಭವಿಸುವುದು ನಿರಂತರವಾಗಿದೆ. ಈ ರೋಗ ಶೀಘ್ರವಾಗಿ ಹರಡುತ್ತದೆ. ಬಳ್ಳಿಯನ್ನು ನೆಟ್ಟು ಗೊಬ್ಬರ ಹಾಕಿ ಫಸಲು ಬರುವ ವೇಳೆಗೆ ಅಥವಾ ಫಸಲು ಬಂದ ಬಳಿಕ ರೋಗಕ್ಕೆ ತುತ್ತಾಗಿ ನಾಶವಾಗಿಬಿಡುತ್ತದೆ.

ರೋಗ ಗುರುತಿಸಬೇಕು
·  ಕರಿಮೆಣಸು ಬಳ್ಳಿಗೆ ಸೊರಗು ರೋಗ ಬಂದರೆ ಬಳ್ಳಿಗಳು ಹಳದಿ ಬಣ್ಣಕ್ಕೆ ತಿರುಗಿ ಸಾಯುತ್ತವೆ.
·  ಬಳ್ಳಿ ಒಣಗಿ ಫಸಲು ಉದುರುತ್ತದೆ.
·  ಬಳ್ಳಿಯ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿ ಬಳ್ಳಿ ಬೋರಲಾಗಿ ಸತ್ತು ಹೋಗುತ್ತದೆ.
·  ಮರವೊಂದರ ಬುಡಕ್ಕೆ ಬಳ್ಳಿನೆಟ್ಟು ಗೊಬ್ಬರ ಹಾಕಿದರೂ ಪ್ರಯೋಜನವಾಗುವುದಿಲ್ಲ.
ಹೀಗೆ ಹರಡುತ್ತದೆ
·  ಈ ರೋಗ ಪೈಟೋಫೋರಾ ಕ್ಯಾಪ್ಸಿಸಿ ಎಂಬ ಶಿಲೀಂಧ್ರದಿಂದ ಬರುತ್ತದೆ. ಈ ಶಿಲೀಂಧ್ರ ಮೊದಲು ಬಳ್ಳಿಯ ಬೇರಿಗೆ ಆಕ್ರಮಣ ಮಾಡುತ್ತದೆ. ಇದರಿಂದ ನೀರು, ಆಹಾರಗಳ ಚಲನೆಗೆ ಅಡ್ಡಿಯಾಗಿ ಬೇರು ಸಾಯುತ್ತದೆ. ಅನಂತರ ಬಳ್ಳಿ, ಎಲೆಯನ್ನು ಆಕ್ರಮಿಸುತ್ತದೆ. ಮಳೆಗಾಲದಲ್ಲಿ ಮಳೆ ಹನಿ ಬಿದ್ದು ಚಿಮ್ಮುವಾಗ ಬಳ್ಳಿ ಹಾಗೂ ಎಲೆಗಳಲ್ಲಿರುವ ಶಿಲೀಂಧ್ರದ ಬೀಜಾಣುಗಳು ಸುಲಭವಾಗಿ ಒಂದು ಗಿಡದಿಂದ ಮತ್ತೂಂದು ಗಿಡಕ್ಕೆ ಹರಡುತ್ತದೆ. ಮೆಲೋಯೆಯೋಗೈನ್‌ ಇಂಕಾಗ್ನಿಟ ಜಂತು ಹುಳದಿಂದಲೂ ಸೊರಗು ರೋಗ ಹರಡುತ್ತದೆ.
·  ಈ ಕುರಿತ ಸಂಶೋಧನೆಯ ಪ್ರಕಾರ ರೋಗವನ್ನು ಸಂಪೂರ್ಣ ತಡೆಗಟ್ಟಲು ಸಾಧ್ಯವಿಲ್ಲವಾದರೂ ಕೆಲವು ಕ್ರಮಗಳನ್ನು ಅನುಸರಿಸುವುದರಿಂದ ರೋಗವನ್ನು ಸ್ವಲ್ಪ ಮಟ್ಟಿಗೆ ನಿಯಂತ್ರಿಸಬಹುದು ಎಂಬುದನ್ನು ತೋರಿಸಿಕೊಟ್ಟಿದೆ.

ತಡೆಗಟ್ಟುವ ವಿಧಾನ
·  ತೋಟದೊಳಗೆ ಮಣ್ಣಿನ ತೇವಾಂಶ ಕಡಿಮೆಗೊಳಿಸಿಬೇಕು
·  ಕೊಳೆತ ಎಳೆ, ಹುಲ್ಲಿನ ಕಡ್ಡಿಯ ಪದರವಿರುವಂತೆ ಮಾಡಬೇಕು
·  ಬಳ್ಳಿಯ ಬುಡದಿಂದ ಚಿಗುರಿ ನೆಲದಲ್ಲಿ ಹರಡುವ ಮರಿ ಬಳ್ಳಿಗಳನ್ನು ಕತ್ತರಿಸಿ ಅಥವಾ ಮೇಲೆ ಹಬ್ಬುವಂತೆ ಮಾಡುವುದರಿಂದ ಬಳ್ಳಿಯಿಂದ ಬಳ್ಳಿಗೆ ಹರಡುವ ರೋಗವನ್ನು ತಡೆಗಟ್ಟಬಹುದು.
·  ತೋಟದಲ್ಲಿ ಬಿಸಿಲು ಹಾಯಲು ಸೂಕ್ತವಾಗುವಂತೆ ಮರದ ನೆರಳನ್ನು ತೆಗೆಯಬೇಕು.
·  ರೋಗರಹಿತ ಪಾತಿಯಿಂದಲೇ ಆಯ್ದ ಆರೋಗ್ಯವಂತ ಬಳ್ಳಿಯ ತುಂಡುಗಳನ್ನು ಸಸ್ಯಾಭಿವೃದ್ಧಿಗೆ ಉಪಯೋಗಿಸಬೇಕು
·  ತೋಟದಲ್ಲಿ ರೋಗವಿದೆ ಎಂದಾದಲ್ಲಿ ನೆಡುವ ಜಾಗವನ್ನು ಮೆಟಲಕ್ಸಿನ್‌ ಶಿಲೀಂಧ್ರ ನಾಶಕದ ಶೇ. 0.3 ದ್ರಾವಣದಿಂದ ತೋಯಿಸಬೇಕು.
·  ಮಳೆಗಾಲ ಆರಂಭವಾಗುವ ಮುನ್ನ ಶೇ. ಒಂದರ ಬೋಡೋì ಮಿಶ್ರಣವನ್ನು ಬಳ್ಳಿಗೆ ಮೊದಲು ಸಿಂಪಡಿಸಬೇಕು.

ಔಷಧದಿಂದ ರಕ್ಷಣೆ
ಅಡಿಕೆ ಬೆಳೆಗಾರರು ಕೊಳೆರೋಗಕ್ಕೆ ಔಷಧ ಸಿಂಪಡಣೆ ಮಾಡುವ ಸಮಯದಲ್ಲಿ ಮಳೆಗಾಲದ ಆರಂಭದಲ್ಲಿ ಬೋಡೋì ದ್ರಾವಣವನ್ನು ಸಿಂಪಡಿಸಬೇಕು. ಟ್ರೈಕೋಡರ್ಮ್ ಔಷಧವನ್ನು ಕರಿಮೆಣಸು ಬಳ್ಳಿಯ ಪ್ರತಿ ಬುಡಕ್ಕೆ 50 ಗ್ರಾಂ ಸ್ವಲ್ಪ ಹಳೆಯದಾದ ಪುಡಿ ಪುಡಿ ಹಟ್ಟಿಗೊಬ್ಬರ ಅಥವಾ ಬೇವಿನ ಹಿಂಡಿ ಜತೆ ಬೆರೆಸಿ ಹಾಕಬೇಕು. ಇವನ್ನು ಮಿಶ್ರಣ ಮಾಡಿ 5 ದಿನಗಳ ಕಾಲ ಇಟ್ಟು ಮತ್ತೆ ಹಾಕಿದರೆ ಉತ್ತಮ ಎನ್ನುವುದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ನಿರ್ದೇಶನ.

ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.