ಪ್ರಜೆಗಳ ಕೈಗೆ ಅಧಿಕಾರ ನೀಡುವುದೇ ಪ್ರಜಾಕೀಯ ಉದ್ದೇಶ : ಉಪೇಂದ್ರ

ರಾಜ್ಯದ 27 ಕ್ಷೇತ್ರದಲ್ಲಿ ಉತ್ತಮ ಪ್ರಜಾಕೀಯ ಸ್ಪರ್ಧೆ

Team Udayavani, Apr 14, 2019, 10:14 AM IST

14-April-1

ಕಲಬುರಗಿ: ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಉತ್ತಮ ಪ್ರಜಾಕೀಯ ಪಕ್ಷದ ಅಧ್ಯಕ್ಷ, ನಟ ಉಪೇಂದ್ರ ಮಾತನಾಡಿದರು. ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಹೇಶ ಲಂಬಾಣಿ ಇದ್ದರು.

ಕಲಬುರಗಿ: ರಾಜಕೀಯ ಎಂದರೆ ಬಂಡವಾಳ ಹೂಡಿ ಬಂಡವಾಳ ತೆಗೆಯುವ ಕೇÒತ್ರವಾಗಿದೆ. ರಾಜಕೀಯ ನಮಗಲ್ಲ ಎನ್ನುವ ಭಯದ ಮನೋಭಾವ ಯುವಕರಲ್ಲಿದೆ. ಜನರ ಕೈ ಅಧಿಕಾರ ನೀಡಿ, ರಾಜಕೀಯದಲ್ಲಿ ವೃತ್ತಿಪರತೆ ತರುವುದೇ ಉತ್ತಮ ಪ್ರಜಾಕೀಯ ಪಕ್ಷದ ಉದ್ದೇಶ ಎಂದು ಪಕ್ಷದ ಸಂಸ್ಥಾಪಕ
ಅಧ್ಯಕ್ಷ, ಖ್ಯಾತ ನಟ ಉಪೇಂದ್ರ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ನೈಜತೆಗಾಗಿ ಪ್ರಜಾಕೀಯ ಪಕ್ಷ ಪ್ರಯತ್ನಿಸಲಿದೆ. ರಾಜಕೀಯದಲ್ಲಿ ವಿಚಾರವಂತರು, ಪ್ರಾಮಾಣಿಕರಿಗೆ ಅವಕಾಶ ಕೊಡಬೇಕು. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ನಿರ್ಧಾರವೇ ಅಂತಿಮ ಎನ್ನುವ ವ್ಯವಸ್ಥೆ ನಿರ್ಮಿಸಬೇಕಿದೆ ಎಂದರು.
ರಾಜಕೀಯ ಎನ್ನುವುದು ಮತ ಮತ್ತು ಕಾರ್ಯಕರ್ತರನ್ನು ಖರೀದಿಸುವ ದಂಧೆಯಾಗಿದೆ. ರಾಜಕೀಯ ಸೇವೆ ಎನ್ನುತ್ತಾ ವ್ಯಾಪಾರ ಮಾಡಿಕೊಂಡು 72 ವರ್ಷಗಳಿಂದ ಜನತೆಯನ್ನು ವಂಚಿಸಿಕೊಂಡು ಬರಲಾಗುತ್ತಿದೆ. ರಾಜ, ಮಹಾರಾಜರ ಜಾಗದಲ್ಲಿ ರಾಜಕಾರಣಿಗಳು ಬಂದು ಕುಳಿತಿದ್ದಾರೆ. ಎಲ್ಲಿಯವರೆಗೆ ಹಣ, ತೋಳ್ಬಲಗಳ ಮಾತು ನಡೆಯವುದೋ ಅಲ್ಲಿಯ ವರೆಗೆ ಪ್ರಜಾಪ್ರಭುತ್ವದಲ್ಲಿ ಪ್ರಜೆಗಳಿಗೆ ನಿಜವಾದ ಶಕ್ತಿ ಇರುವುದಿಲ್ಲ ಎಂದು ಹೇಳಿದರು.

ರಾಜಕೀಯದಲ್ಲಿ ಹಣದ ಹೊಳೆ ಹರಿದಾಗ ಅಲ್ಲಿ ಸೇವೆ ಅರ್ಥ ಕಳೆದುಕೊಳ್ಳುತ್ತದೆ. ಜನರು ಆಯ್ಕೆ ಮಾಡಿದವರನ್ನು ಜನಪ್ರತಿನಿಧಿ ಎನ್ನುತ್ತಾರೆ ಹೊರತು ಜನನಾಯಕ ಎನ್ನಲ್ಲ. ಜನತೆ ತಾವು ಆಯ್ಕೆ ಮಾಡಿದ ಶಾಸಕ, ಸಂಸದ ಸರಿಯಿಲ್ಲ. ಜನರಿಗೆ ಸ್ಪಂದಿಸುತ್ತಿಲ್ಲ ಎಂದರೇ ಆತನ ಅಧಿಕಾರ ವಾಪಸ್‌ ಪಡೆಯುವ ಹಕ್ಕು ಜನರಿಗೆ ನೀಡುವ ಚಿಂತನೆ ಪ್ರಜಾಕೀಯದ್ದು. ರಾಜ್ಯದ 28 ಲೋಕಸಭೆ ಕ್ಷೇತ್ರಗಳ ಪೈಕಿ ಬಳ್ಳಾರಿ ಹೊರತು ಪಡಿಸಿ 27 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಎಲ್ಲ ಅಭ್ಯರ್ಥಿಗಳ ಪೂರ್ವಾಪರ ತಿಳಿದು, ಲಿಖೀತ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗಿದೆ. ಬಳ್ಳಾರಿಯಲ್ಲಿ ಸೂಕ್ತ
ಅಭ್ಯರ್ಥಿ ದೊರೆಯದ ಕಾರಣ ಪ್ರಜಾಕೀಯ ಪಕ್ಷ ಸ್ಪರ್ಧಿಸಿಲ್ಲ ಎಂದು ವಿವರಿಸಿದರು.

ಶಾಸಕ, ಸಂಸದರಾಗಿ ಆಯ್ಕೆಯಾದವರು ನಮ್ಮ ಸೇವಕರು ಎನ್ನುವ ತತ್ವವನ್ನು ಪ್ರಜಾಕೀಯ ಹೊಂದಿದೆ. ಸೇವೆ ಮಾಡಲೆಂದೇ ನಾವು ಅವರಿಗೆ ಸಂಬಳ ಕೊಡುತ್ತೇವೆ. ಅದಕ್ಕಾಗಿಯೇ ಪ್ರಜಾಕೀಯ ಪಕ್ಷ ಈಗಾಗಲೇ ಅಭ್ಯರ್ಥಿಗಳಿಗೆ ಸಮವಸ್ತ್ರ ನೀಡಿದೆ. ಪ್ರಜೆಗಳಿಗೆ ಕೀ ಕೊಡುವ ಕೆಲಸ ಪ್ರಜಾಕೀಯ ಮಾಡಲಿದೆ. ಪ್ರಜಾಕೀಯ ಪಕ್ಷದಲ್ಲಿ ಪ್ರಣಾಳಿಕೆ ಇಲ್ಲ. ಜನರು ನೀಡುವ ಹೇಳಿಕೆಗಳು,
ಸಮಸ್ಯೆಗಳೇ ಪ್ರಣಾಳಿಕೆ ಆಗಲಿದೆ. ಜನತೆ ನೀಡುವ ಸಲಹೆ, ಸೂಚನೆಗಳಂತೆ ಅಧಿಕಾರ ನಡೆಸಲಾಗುವುದು. ಜನತೆಯೇ ತಮ್ಮ ಸಮಸ್ಯೆ ತಿಳಿಸಲಿ ಎಂದು ಅವರ ಕೈಗೆ ಖಾಲಿ ಹಾಳೆ ಕೊಡುತ್ತಿದ್ದೇವೆ ಎಂದರು.

ಸೋಲು-ಗೆಲುವಿನ ಲೆಕ್ಕಾಚಾರವನ್ನು ಪ್ರಜಾಕೀಯ ಪಕ್ಷ ಹೊಂದಿಲ್ಲ. ನಮ್ಮ ಪಕ್ಷದ ಅಭ್ಯರ್ಥಿಗಳು ಆಯ್ಕೆಯಾಗಿ ಸಂಸತ್‌ಗೆ ಪ್ರವೇಶಿಸಿದರೆ, ಸರ್ಕಾರ ರಚನೆ
ಸಂದರ್ಭದಲ್ಲಿ ಯಾವ ಪಕ್ಷವನ್ನು ಬೆಂಬಲಿಸಬೇಕು ಎನ್ನುವುದನ್ನು ಜನರಿಗೆ ಕೇಳಿಯೇ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು. ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಹೇಶ ಲಂಬಾಣಿ ಮಾತನಾಡಿ, ನಾನು ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಂಡಾದವನಾಗಿದ್ದು, ವಲಸೆ ಕುಟುಂಬದಿಂದ
ಬಂದಿದ್ದೇನೆ. ಎಂಎ ಮುಗಿದಿದ್ದು, ಪಿಎಚ್‌.ಡಿ. ಮಾಡುತ್ತಿದ್ದೇನೆ. ನಿರುದ್ಯೋಗಿಗಳ ಪರವಾಗಿ ಸಂಸತ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ ಎಂದರು.

ಮತ ಕೊಡಿ: ತಮ್ಮ ನೆಚ್ಚಿನ ನಟ ಉಪೇಂದ್ರ ಜತೆಗೆ ಸೆಲ್ಫಿ ಪಡೆಯಲು ಅಭಿಮಾನಿಗಳು, ಯುವಕರು ಮುಗಿಬಿದ್ದಿದ್ದರು. ತಾಳ್ಮೆಯಿಂದಲೇ ಎಲ್ಲರಿಗೂ
ಪೋಸು ಕೊಟ್ಟ ಉಪೇಂದ್ರ, ಯುವಕರು ಪೋಟೋ ತೆಗೆಸಿಕೊಂಡರೆ ಸಾಲದು. ಮತ ಕೊಡಬೇಕು. ರಾಜಕೀಯ ಪಕ್ಷಗಳ ಆಮಿಷಕ್ಕೊಳಗಾಗಬಾರದು. ಪ್ರಜಾಕೀಯ ಪಕ್ಷವನ್ನು ಬೆಂಬಲಿಸಿ ಎಂದು ಕರೆಕೊಟ್ಟರು.

ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಟಿ
ಸುಮಲತಾ ಅಂಬರೀಷ ದೊಡ್ಡವರು. ನಾವು ಅವರ ಬಗ್ಗೆ ಮಾತನಾಡಲು ಹೋಗಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವೆ. ಲೋಕಸಭೆ ಚುನಾವಣೆಗೆ ಎಲ್ಲವನ್ನೂ ತಯಾರು ಮಾಡಿ, ಅಭ್ಯರ್ಥಿಗಳಿಗಾಗಿ ಓಡಾಟ ನಡೆಸುವ ಕೆಲಸ ಜಾಸ್ತಿ ಇದ್ದಿದ್ದರಿಂದ ಸ್ಪರ್ಧಿಸಲು ಹೋಗಿಲ್ಲ. ಉಪೇಂದ್ರ, ಅಧ್ಯಕ್ಷರು,
ಉತ್ತಮ ಪ್ರಜಾಕೀಯ ಪಕ್ಷ

ಟಾಪ್ ನ್ಯೂಸ್

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

8

Hampankatte: ಸಿಟಿ ಮಾರ್ಕೆಟ್‌ ರಸ್ತೆಗೆ ಬೇಕಿದೆ ಕಾಯಕಲ್ಪ

7

Mangaluru: ಪಿ.ಎಂ. ರಾವ್‌ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.