ಆರೋಪಗಳೇ ಜಾಸ್ತಿ, ಅಭಿವೃದ್ಧಿ ನಾಸ್ತಿ


Team Udayavani, Apr 14, 2019, 4:18 PM IST

hav-2
ಹಾವೇರಿ: ಬಿಸಿಲಿನ ಪ್ರಖರತೆಗೆ ಪೈಪೋಟಿ ನೀಡುವಂತೆ ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆ ಕಾವು ಸಹ ಏರುತ್ತಿದೆ. ಕಣದಲ್ಲಿರುವ ಕಲಿಗಳ ನಡುವೆ ಆರೋಪ-ಪ್ರತ್ಯಾರೋಪಗಳೇ ಜಾಸ್ತಿಯಾಗಿದ್ದು, ಕ್ಷೇತ್ರದ ಸಮಸ್ಯೆ ಅಕ್ಷರಶಃ ನಾಸ್ತಿಯಾಗಿದೆ.
ಕ್ಷೇತ್ರದಲ್ಲಿ ಪ್ರಮುಖವಾಗಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳು ಪಕ್ಷದ ನಾಯಕರನ್ನು ಜಿಲ್ಲೆಗೆ ಪ್ರಚಾರಾರ್ಥ ಕರೆತರುವ ಯತ್ನ ಮುಂದುವರಿಸಿದ್ದಾರೆ. ರಾಜ್ಯ ಮುಖಂಡರಾಗಲಿ. ಕ್ಷೇತ್ರದ ಅಭ್ಯರ್ಥಿಯಾಗಲಿ ಇಲ್ಲವೇ ಜಿಲ್ಲೆಯ ಮುಖಂಡರಾಗಲಿ ಯಾರೂ ಕ್ಷೇತ್ರದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುತ್ತಿಲ್ಲ. ಕೇಂದ್ರ ಸರ್ಕಾರ ಮಟ್ಟದಲ್ಲಿ ಗಮನಸೆಳೆದು ಕ್ಷೇತ್ರಕ್ಕೆ ವಿಶೇಷ ಯೋಜನೆ, ವಿಶೇಷ ಅನುದಾನ ತರುವ ಬಗ್ಗೆ ಪ್ರಚಾರದಲ್ಲಿ ಪ್ರಸ್ತಾಪಿಸುತ್ತಿಲ್ಲ. ಒಟ್ಟಾರೆ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಯಾರೂ ಮಾತನಾಡದಿರುವುದು ಪ್ರಜ್ಞಾವಂ ತಮತದಾರರಲ್ಲಿ ಅಸಮಾಧಾನ ಮೂಡಿಸಿದೆ.
ಸ್ಥಳೀಯ ಕಣದಲ್ಲೂ ಮೋದಿ-ರಾಹುಲ್‌ ಸ್ಪರ್ಧೆ!: ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಚಾರ ವೈಖರಿ ನೋಡಿದರೆ ಸ್ಪರ್ಧೆ ಕಣದಲ್ಲಿರುವ ಅಭ್ಯರ್ಥಿಗಳ ನಡುವೆ ನಡೆಯುತ್ತಿಲ್ಲ. ಬದಲಾಗಿ ಮೋದಿ ಹಾಗೂ ಕಾಂಗ್ರೆಸ್‌ ನಡುವೆ ಸ್ಪರ್ಧೆ ನಡೆಯುತ್ತಿರುವಂತೆ ಭಾಸವಾಗುತ್ತಿದೆ. ಕಾಂಗ್ರೆಸ್‌ನವರು ಮೋದಿಯನ್ನೇ ಗುರಿಯಾಗಿಸಿಕೊಂಡು ಟೀಕಾಸ್ತ್ರ ಬಿಡುತ್ತಿದ್ದರೆ, ಬಿಜೆಪಿಯವರು ಈ ಹಿಂದೆ ಆಡಳಿತ ಮಾಡಿದ ಕಾಂಗ್ರೆಸ್‌ ಸರ್ಕಾರ ಮತ್ತು ರಾಹುಲ್‌ ಗಾಂಧಿಯನ್ನು ಮುಖ್ಯವಾಗಿಸಿಕೊಂಡು ಟೀಕಾ ಪ್ರಹಾರ ಮಾಡುತ್ತಿದ್ದಾರೆ. ಹೀಗಾಗಿ ಕಣದಲ್ಲಿ ಮೋದಿ-ರಾಹುಲ್‌ ಅವರೇ ಸ್ಪರ್ಧೆಗೆ ನಿಂತಂತಾಗಿದೆ.
“ಮೋದಿ ಮೊತ್ತೂಮ್ಮೆ’, “ದೇಶದ ರಕ್ಷಣೆಗೆ ಮೋದಿ ಅವಶ್ಯ’ ಎಂದು ಬಿಜೆಪಿಯವರು ಘೋಷಣೆ ಹಾಕುತ್ತಿದ್ದರೆ, ಕಾಂಗ್ರೆಸ್‌ನವರು “ಪ್ರಜಾಪ್ರಭುತ್ವದ ಉಳಿವಿಗೆ ಕಾಂಗ್ರೆಸ್‌ ಅವಶ್ಯ’, “ಕೋಮುವಾದಿ ಬಿಜೆಪಿಯನ್ನು ದೂರವಿಟ್ಟರೆ ಮಾತ್ರ ದೇಶದಲ್ಲಿ ಐಕ್ಯತೆ, ಸರ್ವ ಜನಾಂಗದ ನೆಮ್ಮದಿ ಸಾಧ್ಯ’ ಎಂದು ಪ್ರಚಾರ ಮಾಡುತ್ತಿದ್ದಾರೆ. ಇತ್ತ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ, ಮೋದಿಯ ಗುಣಗಾನ, ಬಿಜೆಪಿ ಸರ್ಕಾರದ ಸಾಧನೆ ಬಗ್ಗೆ ಮಾತನಾಡುತ್ತಿದ್ದರೆ ಕಾಂಗ್ರೆಸ್‌ ಅಭ್ಯರ್ಥಿ ಡಿ.ಆರ್‌. ಪಾಟೀಲ, ಮೋದಿಯನ್ನು ತೆಗಳುವುದು, ಕಾಂಗ್ರೆಸ್‌ ಸರ್ಕಾರದ ಸಾಧನೆ ಹೊಗಳುವುದು ಮಾಡುತ್ತಿದ್ದಾರೆ.
ಯೋಜನೆ, ಯೋಚನೆ ಇಲ್ಲ: ಕ್ಷೇತ್ರದ ಅಭ್ಯರ್ಥಿಗಳು ತಮ್ಮ ವಿಚಾರ, ಯೋಜನೆ, ಆಲೋಚನೆಗಳ ಬಗ್ಗೆ ಜನರಿಗೆ ತಿಳಿಸುತ್ತಿಲ್ಲ. ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ತಮಗಿರುವ ಅವಕಾಶ ಬಳಸಿಕೊಂಡು ಅಭಿವೃದ್ಧಿ ಮಾಡುತ್ತೇನೆ ಎನ್ನುತ್ತಾರೆಯೇ ಹೊರತು ನಿರ್ದಿಷ್ಟವಾಗಿ ಏನು ಮಾಡುತ್ತಾರೆ. ಏನು ಯೋಜನೆ ಹಾಕಿಕೊಂಡಿದ್ದಾರೆ ಎಂಬ ಬಗ್ಗೆ ಹೆಚ್ಚಾಗಿ ಪ್ರಸ್ತಾಪಿಸುತ್ತಿಲ್ಲ. ಕಾಂಗ್ರೆಸ್‌ ಅಭ್ಯರ್ಥಿ ಡಿ.ಆರ್‌. ಪಾಟೀಲ ಮಾದರಿ ಕ್ಷೇತ್ರ ಮಾಡುತ್ತೇನೆ ಎನ್ನುತ್ತಾರಾದರೂ ಏನು ಮಾಡುತ್ತೇನೆ, ಯೋಚನೆ, ಯೋಜನೆ ಏನಿದೆ ಎಂಬ ಬಗ್ಗೆ ಪ್ರಸ್ತಾಪಿಸುತ್ತಿಲ್ಲ. ಒಟ್ಟಾರೆ ಪ್ರಮುಖ ಪೈಪೋಟಿ ನಡೆಸಿರುವ ಬಿಜೆಪಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿಗಳು ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲೇ ಪ್ರಚಾರದ ಅಸ್ತ್ರವನ್ನಾಗಿಸಿಕೊಂಡಿದ್ದಾರೆ. ಹೀಗಾಗಿ ಕ್ಷೇತ್ರದಲ್ಲಿ ಎರಡೂ ಪಕ್ಷಗಳಿಂದ ಆರೋಪ- ಪ್ರತ್ಯಾರೋಪಗಳೇ ಜಾಸ್ತಿಯಾಗಿದ್ದು ಅಭಿವೃದ್ಧಿ ನಾಸ್ತಿಯಾಗಿ¨
„ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.