ಅಂಬೇಡ್ಕರ್ ಮಹಾನ್ ಮಾನವತಾವಾದಿ: ಜಿಲ್ಲಾಧಿಕಾರಿ
ಜಿಲ್ಲಾಡಳಿತದಿಂದ ಅಂಬೇಡ್ಕರ್ ಜಯಂತಿ ಆಚರಣೆ
Team Udayavani, Apr 15, 2019, 6:23 AM IST
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಮಾತನಾಡಿದರು.
ಮಹಾನಗರ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ| ಬಿ.ಆರ್. ಅಂಬೇಡ್ಕರ್ ಅವರು ಮಹಾನ್ ಮಾನವತಾವಾದಿಯಾಗಿದ್ದರು. ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರಕ್ಕೆ ಸಂವಿಧಾನವನ್ನು ನೀಡಿ ಸಮಸಮಾಜ ನಿರ್ಮಾಣಕ್ಕೆ ಕಾರಣಕರ್ತರಾದರು ಎಂದು ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಎಸ್. ಶಶಿಕಾಂತ್ ಸೆಂಥಿಲ್ ಹೇಳಿದರು.
ನಗರದ ಪುರಭವನದ ಆವರಣದಲ್ಲಿ ರವಿವಾರ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾದ 128ನೇ ಅಂಬೇಡ್ಕರ್ ಜನ್ಮ ದಿನಾಚರಣೆಯಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮಿಸಿ ಅವರು ಮಾತನಾಡಿದರು.
ಎಲ್ಲ ವಯಕ್ತಿಕ ಮತ್ತು ಸಾಮೂಹಿಕ ಚಟುವಟಿಕೆಗಳಲ್ಲಿ ಉನ್ನತಿಯನ್ನು ಸಾಧಿಸಲು ಪ್ರಯತ್ನಿಸಿ ದೇಶದ ಪ್ರಗತಿಗಾಗಿ ಶ್ರಮಿಸುವುದು ಪ್ರತಿಯೊಬ್ಬ ಭಾರತೀಯನ ಸಂವಿಧಾನ ಬದ್ಧ ಕರ್ತವ್ಯ ಎಂಬುದನ್ನು ಆಚರಣೆಯ ಮೂಲಕ ಮಾಡಿ ತೋರಿಸಿದ ಮಹಾನ್ ಚೇತನ ಅಂಬೇಡ್ಕರ್. ನಾವಿಂದು ಆ ಮಹಾನ್ ಚೇತನ ನೀಡಿದ ಸಂವಿಧಾನದ ಸ್ಫೂರ್ತಿಯನ್ನು ಎತ್ತಿ ಹಿಡಿಯುವ ಮುಖಾಂತರ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಆಚರಿಸಬೇಕು ಎಂದರು.
ಅಂಬೇಡ್ಕರ್ ಭಾರತದ ಭಾಗ್ಯ ವಿಧಾತ
ಪಶ್ಚಿಮವಲಯ ಐಜಿಪಿ ಅರುಣ್ ಚಕ್ರವರ್ತಿ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಅಂಬೇಡ್ಕರ್ ಅವರು ಭಾರತದ ಭಾಗ್ಯ ವಿಧಾತ. ವೈವಿಧ್ಯತೆಯಲ್ಲಿ ಏಕತೆಯನ್ನು ಸಾಧಿಸಿದ ದೇಶ ಇಂದು ಅಭಿವೃದ್ಧಿಯ ಪಥದಲ್ಲಿ ಸಾಗಲು ಮೂಲ ಕಾರಣ ಅಂಬೇಡ್ಕರ್. ನಮ್ಮ ದೇಶಕ್ಕೆ ನೀಡಿದ ಸಂವಿಧಾನ. ನಮ್ಮ ಸಂವಿಧಾನವೆ ನಮ್ಮೆಲ್ಲರನ್ನು ಒಗ್ಗೂಡಿಸಿಕೊಂಡು ಮುಂದಕ್ಕೆ ಕೊಂಡೊಯ್ಯುತ್ತಿರುವುದು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಸಿಇಒ ಡಾ| ಸೆಲ್ವಮಣಿ ಆರ್, ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ ಲಕ್ಷಿ$¾àಪ್ರಸಾದ್, ಕಮಿಷನರ್ ಸಂದೀಪ್ ಪಾಟೇಲ್, ಡಿಸಿಪಿ ಹನುಮಂತರಾಯ, ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಅಧೀಕ್ಷಕರಾದ ವೇದಮೂರ್ತಿ, ಮಹಾನಗರಪಾಲಿಕೆ ಆಯುಕ್ತರಾದ ಬಿ.ಎಚ್. ನಾರಾಯಣಪ್ಪ, ತಹಶೀಲ್ದಾರ್ ಗುರುಪ್ರಸಾದ್, ಎಸಿಪಿ ಸುಧೀರ್ ಹೆಗ್ಡೆ, ಸಮಾಜ ಕಲ್ಯಾಣ ಅಧಿಕಾರಿ ಮತ್ತು ಸಿಬಂದಿ, ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullal: ಎಂಡಿಎಂಎ ಸಾಗಾಟ: ಮೂವರ ಬಂಧನ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ
Mangaluru: ಭಾರತ ಬಲಿಷ್ಠವಾಗಲು ಕೌಶಲಯುತ ಶಿಕ್ಷಣ ಅಗತ್ಯ: ಡಾ| ನಿರ್ಮಲಾನಂದನಾಥ ಸ್ವಾಮೀಜಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.