ನೈತಿಕ ಮತದಾನದಿಂದ ಪ್ರಜಾಪ್ರಭುತ್ವದ ಗೆಲುವು
Team Udayavani, Apr 15, 2019, 3:00 AM IST
ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯನ್ನು ಪಾರದರ್ಶಕವಾಗಿ ನ್ಯಾಯ ಸಮ್ಮತವಾಗಿ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಂಡಿದ್ದು, ಮತದಾರರು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ನಿರ್ಭೀತಿಯಿಂದ ನೈತಿಕವಾಗಿ ಮತದಾನ ಮಾಡಿದರೆ ಮಾತ್ರ ಪ್ರಜಾಪ್ರಭುತ್ವದ ನೈಜ ಗೆಲುವು ಸಾಧ್ಯ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಗುರುದತ್ತ ಹೆಗಡೆ ತಿಳಿಸಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ಸಂಜೆ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಲೋಕಸಭಾ ಚುನಾವಣೆ-2019ರ ಭಾಗವಾಗಿ ಆಯೋಜಿಸಿರುವ ಎರಡು ದಿನಗಳ ಹೊನಲು ಬೆಳಕಿನ ಬಾಲಿಬಾಲ್ ಪಂದ್ಯಾವಳಿಯ ಅಂತಿಮ ಸ್ಪರ್ಧೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಶ್ರೇಷ್ಠ ಹಕ್ಕು: ರಾಜಕೀಯ ಪಕ್ಷಗಳು ನೀಡುವ ಅಥವಾ ಕೊಡುವ ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೇ ತಮ್ಮ ಸ್ವಂತ ವಿವೇಚನೆಯಿಂದ ದೇಶದ ಅಭಿವೃದ್ಧಿಗೆ ಪೂರಕವಾಗುವ ಒಳ್ಳೆಯ ವ್ಯಕ್ತಿಯನ್ನು ಚುನಾವಣೆಯಲ್ಲಿ ಆರಿಸಬೇಕೆಂದರು.
ಕಡ್ಡಾಯವಾಗಿ ಮತದಾನ ಮಾಡಿ: ಈ ಬಾರಿ ಶೇ.100ಕ್ಕೆ ನೂರರಷ್ಟು ಮತದಾನ ಆಗಬೇಕೆಂದು ಜಿಲ್ಲಾ ಸ್ವೀಪ್ ಸಮಿತಿ ಅನೇಕ ಮತ ಜಾಗೃತಿಗಾಗಿ ಕಾರ್ಯಕ್ರಮ ರೂಪಿಸಿದ್ದು, ಯುವಕರು, ಮಹಿಳೆಯರು ಕಡ್ಡಾಯವಾಗಿ ಮತದಾನ ಮಾಡಬೇಕೆಂದರು.
ಜಿಲ್ಲಾ ಯುವ ಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಉಪ ನಿರ್ದೇಶಕರಾದ ರುದ್ರಪ್ಪ ಮಾತನಾಡಿ, ಇದೇ ಮೊದಲ ಬಾರಿಗೆ ಚುನಾವಣೆ ಸಂದರ್ಭದಲ್ಲಿ ಜಿಲ್ಲೆಯ ಯುವ ಜನತೆಗೆ ಕ್ರೀಡೆಗಳನ್ನು ಆಯೋಜಿಸಿದ್ದು, ನಿರೀಕ್ಷೆಗೂ ಮೀರಿ ಉತ್ತಮ ಸ್ಪಂದನೆ ಸಿಕ್ಕಿದೆ ಎಂದರು.
ತಾಪಂ ಇಒ ಕೆ.ಪಿ.ಸಂಜೀವಪ್ಪ, ಜಿಲ್ಲಾ ಸ್ವೀಪ್ ಸಮಿತಿ ಸದಸ್ಯರಾದ ಮುನಿರಾಜು, ರವಿಕುಮಾರ್, ಡಾ.ಸತೀಶ್ ಕುಮಾರ್, ದೈಹಿಕ ಶಿಕ್ಷಕರಾದ ಮಾರುತಿ, ಶಿವಪುತ್ರಪ್ಪ ಸೇರಿದಂತೆ ಜಿಲ್ಲಾ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
ಸಿವಿವಿ ನ್ಪೋರ್ಟ್ಸ್ ಕ್ಲಬ್‌ಗೆ ಮೊದಲ ಬಹುಮಾನ: ಎರಡು ದಿನಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಚಿಕ್ಕಬಳ್ಳಾಪುರದ ಸಿವಿವಿ ನ್ಪೋರ್ಟ್ಸ್ ಕ್ಲಬ್ ಮೊದಲ ಸ್ಥಾನ ಪಡೆಯುವ ಮೂಲಕ 15 ಸಾವಿರ ರೂ, ನಗದು ಬಹುಮಾನ ತನ್ನದಾಗಿಸಿಕೊಂಡಿದೆ. ಎರಡನೇ ಸ್ಥಾನವನ್ನು ಚಿಕ್ಕಬಳ್ಳಾಪುರದ ಫ್ರೆಂಡ್ಸ್ ವಾಲಿಬಾಲ್ ಕ್ಲಬ್ ಪಡೆದು 10 ಸಾವಿರ ರೂ. ನಗದು ಹಾಗೂ ಮೂರನೇ ಸ್ಥಾನಕ್ಕೆ ಬಾಪೂಜಿ ನ್ಪೋರ್ಟ್ಸ್ ಕ್ಲಬ್ ತೃಪ್ತಿ ಪಟ್ಟುಕೊಂಡಿದೆ.
ಉಳಿದಂತೆ ಪಾಲ್ಗೊಂಡಿದ್ದ ಎಲ್ಲಾ ತಂಡಗಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು. ವಿಜೇತ ಮೊದಲ ಎರಡು ತಂಡಗಳಿಗೆ ಜಿಪಂ ಸಿಇಒ ಗುರದತ್ ಹೆಗಡೆ ಟ್ರೋಫಿ ಹಾಗೂ ನಗದು ಬಹುಮಾನದ ಚೆಕ್‌ಗಳನ್ನು ವಿತರಿಸಿದರು. ಜಿಲ್ಲೆಯ ವಿವಿಧ ತಾಲೂಕುಗಳಿಂದ ಸುಮಾರು 20 ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.