“ಮೋದಿ ಸರಕಾರದಿಂದ ದೇಶದ ಆರ್ಥಿಕತೆ ಸರ್ವನಾಶ’
Team Udayavani, Apr 15, 2019, 6:16 AM IST
ಮಹಾನಗರ: ಐದು ವರ್ಷಗಳ ಹಿಂದೆ ಕಪ್ಪು ಹಣ ತರುವುದಾಗಿ, ಭ್ರಷ್ಟಾಚಾರ ನಿಗ್ರಹಿಸುವುದಾಗಿ, ಅಚ್ಛೇದಿನ್, ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮುಂತಾದ ಭರವಸೆಗಳನ್ನು ನೀಡಿ, ತನ್ನನ್ನು ತಾನು ಚಾಯ್ವಾಲಾ, ಫಕೀರ ಮುಂತಾದ ಹೆಸರಿನಿಂದ ಕರೆಸಿಕೊಂಡು ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಯಾವುದೇ ಭರವಸೆಗಳನ್ನು ಈಡೇರಿಸದೆ ದೇಶದ ಜನರಿಗೆ ಮಂಕುಬೂದಿ ಎರಚಿ ಇಡೀ ದೇಶದ ಆರ್ಥಿಕತೆಯನ್ನೇ ಸರ್ವನಾಶ ಮಾಡಿದ್ದಾರೆ. ಇದೀಗ ಮತ್ತೂಮ್ಮೆ ಚೌಕಿದಾರ್ ಹೆಸರಿನಲ್ಲಿ ಅಧಿಕಾರಕ್ಕೇರಿ ದೇಶವನ್ನೇ ಲೂಟಿ ಮಾಡಲು ಹೊರಟಿದ್ದಾರೆ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಸುನಿಲ್ಕುಮಾರ್ ಬಜಾಲ್ ಆರೋಪಿಸಿದರು.
ಉರ್ವಸ್ಟೋರಿನಲ್ಲಿ ನಡೆದ ಸಿಪಿಎಂ ಕಾರ್ಯಕರ್ತರ ಮತ್ತು ಹಿತೈಷಿಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳಿದ್ದರೂ 25 ವರ್ಷಗಳಿಂದ ಬಿಜೆಪಿ ಗೆದ್ದು ಬಂದಿದ್ದರೂ, 10 ವರ್ಷಗಳಿಂದ ನಳಿನ್ಕುಮಾರ್ ಸಂಸದರಾಗಿದ್ದರೂ ಜಿಲ್ಲೆಯ ಅಭಿವೃದ್ಧಿಗೆ ಕಿಂಚಿತ್ತೂ ಶ್ರಮ ವಹಿಸಿಲ್ಲ. ಇಂತಹ ಸಂಸದರು ಪ್ರಜ್ಞಾವಂತ ಜಿಲ್ಲೆಯ ಪ್ರತಿಷ್ಠೆಗೆ ಕಪ್ಪು ಚುಕ್ಕೆ. ಅಂತಹವರನ್ನು ಹೀನಾಯವಾಗಿ ಸೋಲಿಸುವ ಮೂಲಕ ಪ್ರಬಲ ಜಾತ್ಯತೀತ ಶಕ್ತಿಗಳ ಗೆಲುವಿಗೆ ಶ್ರಮಿಸಬೇಕು ಎಂದ ರು. ಮನೋಜ್ ಉರ್ವಸ್ಟೋರ್ ಅಧ್ಯಕ್ಷತೆ ವಹಿಸಿದ್ದರು. ಪ್ರದೀಪ್, ರಘುವೀರ್, ಕಿಶೋರ್,ಇಕ್ಬಾಲ್, ನಾಗೇಂದ್ರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.