ಕ್ರೈಸ್ತರಿಂದ ಗರಿಗಳ ರವಿವಾರ ಆಚರಣೆ
Team Udayavani, Apr 15, 2019, 6:30 AM IST
ಮಂಗಳೂರು/ಉಡುಪಿ: ಎರಡು ಸಾವಿರ ವರ್ಷಗಳ ಹಿಂದೆ ಯೇಸು ಕಿಸ್ತರು ಜೆರುಸಲೆಮಿಗೆ ಪ್ರವೇಶ ಮಾಡುವಾಗ ಅಲ್ಲಿನ ಜನರು “ಒಲಿವ್’ ಮರದ ಗರಿಗಳನ್ನು ಹಿಡಿದು ವೈಭವದಿಂದ ಸ್ವಾಗತಿಸಿ ಬರ ಮಾಡಿಕೊಂಡಿದ್ದರ ಸ್ಮರಣಾರ್ಥ ರವಿವಾರ ಕ್ರೈಸ್ತ ಸಮುದಾಯದವರು ತೆಂಗಿನ ಗರಿಗಳನ್ನು ಹಿಡಿದುಕೊಂಡು ಮೆರವಣಿಗೆ ಮತ್ತು ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಮಂಗಳೂರು ಧರ್ಮ ಪ್ರಾಂತದ ಬಿಷಪ್ ರೆ| ಡಾ| ಪೀಟರ್ ಪಾವ್É ಸಲ್ಡಾನ್ಹಾ ಅವರು ಕೊಡಿಯಾಲ್‌ಬೈಲ್‌ನ ಬಿಷಪ್ಸ್ ಹೌಸ್ ಚಾಪೆಲ್‌ನಲ್ಲಿ ನಡೆದ ವಿಶೇಷ ಪ್ರಾರ್ಥನೆ ಮತ್ತು ಬಲಿ ಪೂಜೆಯಲ್ಲಿ ಪಾಲ್ಗೊಂಡು ಸಂದೇಶ ನೀಡಿದರು. ಮಂಗಳೂರಿನ ರೊಜಾರಿಯೋ ಕೆಥೆಡ್ರಲ್‌ನಲ್ಲಿ ಧರ್ಮಪ್ರಾಂತದ ಪ್ರಧಾನ ಗುರು ಮೊ| ಮ್ಯಾಕ್ಸಿಂ ನೊರೋನ್ಹಾ ಅವರ ನೇತೃತ್ವದಲ್ಲಿ ಗರಿಗಳ ರವಿವಾರದ ಕಾರ್ಯಕ್ರಮಗಳು ಜರಗಿದವು. ಕೆಥೆಡ್ರಲ್‌ನ ರೆಕ್ಟರ್ ಫಾ| ಜೆ.ಬಿ.ಕ್ರಾಸ್ತಾ ಮತ್ತು ಇತರ ಗುರುಗಳು ಉಪಸ್ಥಿತರಿದ್ದರು.
ಎಲ್ಲ ಚರ್ಚ್‌ಗಳಲ್ಲಿ ಸ್ಥಳೀಯ ಧರ್ಮಗುರುಗಳ ನೇತೃತ್ವದಲ್ಲಿ ದಿನದ ಕಾರ್ಯಕ್ರಮಗಳು ಜರಗಿದವು.
ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ರೈ| ರೆ| ಫಾ| ಡಾ| ಜೆರಾಲ್ಡ… ಐಸಾಕ್ ಲೋಬೊ ಅವರು ಕಾರ್ಕಳ ಸಮೀಪದ ನಕ್ರೆ ಇಮ್ಯಾಕ್ಯುಲೇಟ್ ಹಾರ್ಟ್ ಚರ್ಚ್‌ನಲ್ಲಿ ನಡೆದ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸಿದರು. ಪ್ರಧಾನ ಧರ್ಮಗುರು ರೆ|ಫಾ| ವಿನ್ಸೆಂಟ್ ಕ್ರಾಸ್ತಾ ಉಪಸ್ಥಿತರಿದ್ದರು.
ಜಿÇÉೆಯ ಎಲ್ಲ ಚರ್ಚ್‌ಗಳಲ್ಲಿ ಕ್ರೈಸ್ತರು ಬೆಳಗ್ಗಿನ ಪ್ರಾರ್ಥನ ವಿಧಿಯಲ್ಲಿ ಪಾಲ್ಗೊಂಡರಲ್ಲದೆ, ತೆಂಗಿನ ಗರಿಗಳನ್ನು ಹಿಡಿದುಕೊಂಡು ಮುಖ್ಯ ರಸ್ತೆಗಳಲ್ಲಿ ಮೆರವಣಿಗೆಯ ಮೂಲಕ ಸಾಗಿ ಚರ್ಚ್‌ಗಳಲ್ಲಿ ಯೇಸುವಿನ ಕಷ್ಟದ ದಿನಗಳನ್ನು ನೆನಪು ಮಾಡಿಕೊಂಡು ಬಲಿಪೂಜೆಯಲ್ಲಿ ಭಾಗವಹಿಸಿದರು.
ಕಲ್ಯಾಣಪುರ ಮಿಲಾಗ್ರಿಸ್ ಕೆಥೆಡ್ರಲ್‌ನಲ್ಲಿ ಪ್ರಧಾನ ಧರ್ಮಗುರು ವಂ| ಡಾ| ಲಾರೆ®Õ… ಡಿ’ಸೋಜಾ ಧಾರ್ಮಿಕ ವಿಧಿವಿಧಾನದ ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ
Mangaluru: ಭಾರತ ಬಲಿಷ್ಠವಾಗಲು ಕೌಶಲಯುತ ಶಿಕ್ಷಣ ಅಗತ್ಯ: ಡಾ| ನಿರ್ಮಲಾನಂದನಾಥ ಸ್ವಾಮೀಜಿ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.