ಮತ ನೀಡಿ ಬಾಬಾ ಕನಸು ನನಸಾಗಿಸಿ
ಎಲ್ಲ ಕ್ಷೇತ್ರಗಳಿಗೂ ಬಾಬಾಸಾಹೇಬ ಕೊಡುಗೆ ಅಪಾರ: ವೆಂಕಟೇಶಕುಮಾರ
Team Udayavani, Apr 15, 2019, 11:10 AM IST
ಕಲಬುರಗಿ: ಅಂಬೇಡ್ಕರ್ ದಿನಾಚರಣೆ ನಿಮಿತ್ತ ಜಗತ್ ವೃತ್ತದಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಮಾಲಾರ್ಪಣೆ ಮಾಡಿದರು.
ಕಲಬುರಗಿ: ಸಂವಿಧಾನ ಶಿಲ್ಪಿ ಡಾ| ಬಿ.ಆರ್.ಅಂಬೇಡ್ಕರ್ ಚುನಾವಣೆ ಮೂಲಕ ದೇಶದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಿ ನೆಲೆಗೊಳ್ಳಬೇಕೆಂಬ ಕನಸು ಕಂಡಿದ್ದರು. ಅವರ ಕನಸು ನನಸಾಗಿಸಲು ಏ.23ರಂದು ನಡೆಯುವ ಲೋಕಸಭೆ ಚುನಾವಣೆ ದಿನದಂದು ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಬಲಗೊಳಿಸಬೇಕೆಂದು ಜಿಲ್ಲಾ ಧಿಕಾರಿ ಆರ್.ವೆಂಕಟೇಶಕುಮಾರ ಕರೆ ನೀಡಿದರು.
ನಗರದ ಜಗತ್ ವೃತ್ತದಲ್ಲಿ ರವಿವಾರ ಜಿಲ್ಲಾಡಳಿತ, ಜಿಪಂ, ಸಮಾಜ
ಕಲ್ಯಾಣ ಇಲಾಖೆ ಹಾಗೂ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಭಾರತರತ್ನ ಡಾ| ಬಾಬಾಸಾಹೇಬ್ ಅಂಬೇಡ್ಕರ್ ಅವರ 128ನೇ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ಅನೇಕ ಭಾಷೆ, ಧರ್ಮ, ಸಂಸ್ಕೃತಿಗಳಿದ್ದರೂ ಎಲ್ಲರೂ ಒಗ್ಗಟ್ಟಾಗಿ ಬಾಳುತ್ತಿರುವುದಕ್ಕೆ ಸಂವಿಧಾನವೇ ಮೂಲ ಕಾರಣವಾಗಿದೆ. ಪ್ರಜಾಪ್ರಭುತ್ವ ದೇಶದಲ್ಲಿ ಸಂವಿಧಾನ ಇರದಿದ್ದರೆ ಯಾರೂ ಸ್ವತಂತ್ರರಾಗಿ ಹಾಗೂ ಸಮಾನರಾಗಿ ಬದುಕುತ್ತಿರಲಿಲ್ಲ ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿಪಂ ಮುಖ್ಯ ಕಾರ್ಯನಿರ್ವಾಹಣಾ ಅಧಿ
ಕಾರಿ ಡಾ| ಪಿ.ರಾಜಾ ಮಾತನಾಡಿ, ಅಂಬೇಡ್ಕರ್ ಎಲ್ಲ ಕ್ಷೇತ್ರಗಳಿಗೂ
ತಮ್ಮ ಕೊಡುಗೆ ನೀಡಿದ್ದಾರೆ. ಎಲ್ಲರಿಗೂ ಆರ್ಥಿಕ, ಸಾಮಾಜಿಕ,
ರಾಜಕೀಯ, ಶೈಕ್ಷಣಿಕವಾಗಿ ಸಮಾನತೆ ತರುವಲ್ಲಿ ಶ್ರಮಿಸಿದ್ದಾರೆ.
ಅಸ್ಪೃಶ್ಯತೆ ಹೋಗಲಾಡಿಸಲು ಹಾಗೂ ಮಹಿಳೆಯರ ಹಕ್ಕುಗಳಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು ಎಂದರು.
ಕಲಬುರಗಿ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯ ಸಹಾಯಕ ಪ್ರಾಧ್ಯಾಪಕಿ ಡಾ| ಪುಟ್ಟಮಣಿ ದೇವಿದಾಸ ಉಪನ್ಯಾಸ ನೀಡಿ, ಡಾ| ಬಿ.ಆರ್. ಅಂಬೇಡ್ಕರ್ ಬದುಕಿನ ಪ್ರತಿಯೊಂದು ಕ್ಷಣವೂ ಅರ್ಥ ಗರ್ಭಿತವಾಗಿತ್ತು. ಸದಾ ಸಮಾಜದ ಒಳಿತಿನ ಬಗ್ಗೆ ಅವರು ಚಿಂತನೆ ಮಾಡುತ್ತಿದ್ದರು. ಅಂದಿನ ಕಾಲದ ಅಸಾಧ್ಯತೆಗಳ ಮಧ್ಯೆ ಅವರು ಸಮಾಜದಲ್ಲಿ ಸಮಾನತೆ ಸಾಧಿಸಲು ಪ್ರಯತ್ನಿಸಿದರು ಎಂದು ಹೇಳಿದರು.
ಸಿದ್ಧಾರ್ಥ ವಿಹಾರ ಟ್ರಸ್ಟ್‌ನ ಪೂಜ್ಯ ಸಂಘಾನಂದ ಭಂತೇಜಿ, ಐಜಿಪಿ ಮನೀಷ ಖರ್ಬೀಕರ್, ಎಸ್‌ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಪಾಲಿಕೆ ಆಯುಕ್ತೆ ಬಿ. ಫೌಜಿಯಾ ತರನ್ನುಮ್, ಸಹಾಯಕ ಆಯುಕ್ತ ರಾಹುಲ್ ತುಕಾರಾಂ ಪಾಂಡ್ವೆ, ಐಎಎಸ್ ಪ್ರೊಬೇಷನರಿ ಅ ಧಿಕಾರಿ ಸ್ನೇಹಲ್ ಸುಧಾಕರ ಲೋಖಂಡೆ,
ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ, ಹೆಚ್ಚುವರಿ ಎಸ್‌ಪಿ ಪ್ರಸನ್ನ
ದೇಸಾಯಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೆ.ಹೆಚ್. ಸತೀಶ, ಮುಖಂಡರಾದ ಅವಿನಾಶ ಗಾಯಕವಾಡ, ಸೋಮಶೇಖರ ಮದನಕರ, ಬಾಬು ಮೋರೆ ಮುಂತಾದವರು ಪಾಲ್ಗೊಂಡಿದ್ದರು.
ದೇಶಕ್ಕೆ ವೇದಗಳ ಅವಶ್ಯಕತೆಯಿದ್ದಾಗ ವೇದವ್ಯಾಸರು
ವೇದ ಬರೆದಿದ್ದಾರೆ. ದೇಶಕ್ಕೆ ಪುರಾಣದ ಅವಶ್ಯಕತೆಯಿದ್ದಾಗ
ವಾಲ್ಮೀಕಿ ಪುರಾಣ ಬರೆದಿದ್ದಾರೆ. ಅದೇ ರೀತಿ ದೇಶಕ್ಕೆ ಸಂವಿಧಾನ
ಅವಶ್ಯಕತೆಯಿದ್ದಾಗ ಡಾ| ಬಿ.ಆರ್. ಅಂಬೇಡ್ಕರ್ ಸಂವಿಧಾನ
ರಚಿಸಿದ್ದಾರೆ. ಇದುವೇ ತಳಸಮುದಾಯದ ವಿಶೇಷತೆ.
ತಳ ಸಮುದಾಯ ಎಂದರೆ ದೇಶದಲ್ಲಿ ಸಮಾಜ ಕಟ್ಟುವ
ಸಮುದಾಯವಾಗಿದೆ. ಕಾರಣ ತಳ ಸಮುದಾಯದವರು
ಯಾರೂ ತಮ್ಮ ಜಾತಿಯನ್ನು ಮುಚ್ಚಿಡಬಾರದು.
ಡಾ| ಪುಟ್ಟಮಣಿ ದೇವಿದಾಸ, ಪ್ರಾಧ್ಯಾಪಕಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.