ನಿರುದ್ಯೋಗ-ನೀರಾವರಿ ಚರ್ಚೆಯೇ ಇಲ್ಲ
ಪ್ರಚಾರದ ಭರಾಟೆ, ಕಾಂಗ್ರೆಸ್-ಬಿಜೆಪಿ ಮಧ್ಯೆ ಪೈಪೋಟಿ ಅಭ್ಯರ್ಥಿಗಳ ಪೂರ್ವಾಪರ ಚರ್ಚೆಗಳು ಶುರು
Team Udayavani, Apr 15, 2019, 11:27 AM IST
ಬೀದರ: ಬೀದರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಪತ್ನಿ ಡಾ| ಗೀತಾ ಖಂಡ್ರೆ ಪ್ರಚಾರ ನಡೆಸಿದ ಸಂದರ್ಭ.
ಬೀದರ: ಕಳೆದ ಎರಡು ಲೋಕಸಭೆ ಚುನಾವಣೆಯಲ್ಲಿ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಬೆಂಬಲ ನೀಡುತ್ತಿರುವ ಬೀದರ್ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ಪ್ರಚಾರದ ಭರಾಟೆ ಜೋರಾಗಿ ನಡೆಯುತ್ತಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಬೀದರ್ ವಿಧಾನಸಭಾ ಕ್ಷೇತ್ರದಲ್ಲಿ 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ನಡೆಸಿದ ಮಾಜಿ
ಮುಖ್ಯಮಂತ್ರಿ ಎನ್.ಧರ್ಮಸಿಂಗ್ ಅವರಿಗೆ 57,109 ಮತ ಹಾಗೂ
ಬಿಜೆಪಿಯ ಭಗವಂತ ಖೂಬಾ ಅವರಿಗೆ 44,225 ಮತಗಳು
ದೊರಕಿದ್ದವು. ಸದ್ಯ ರಹೀಂಖಾನ್ ಇಲ್ಲಿನ ಶಾಸಕರಾಗಿದ್ದು, ಮೈತ್ರಿ ಸರ್ಕಾರದಲ್ಲಿ ಕ್ರೀಡಾ ಸಚಿವರಾಗಿದ್ದಾರೆ. ಈ ಕ್ಷೇತ್ರದಲ್ಲಿ ನಾಗಮಾರಪಳ್ಳಿ ಕುಟುಂಬ ಪ್ರಾಬಲ್ಯ ಹೊಂದಿದೆ. ಕಳೆದ ವಿಧಾನ
ಸಭೆ ಚುನಾವಣೆಯಲ್ಲಿ ರಹೀಮ್ ಖಾನ್ 73,270 ಮತಗಳನ್ನು ಪಡೆದುಕೊಂಡಿದ್ದರು. ಬಿಜೆಪಿ ಅಭ್ಯರ್ಥಿ ಸೂರ್ಯಕಾಂತ ನಾಗಮಾರಳ್ಳಿ 63,025 ಮತಗಳನ್ನು ಪಡೆದು 10,245 ಮತಗಳ ಅಂತರದಿಂದ ಸೋಲು ಅನುಭವಿಸಿದರು.
ಏನಂತಾರೆ ಜನರು?: ಕ್ಷೇತ್ರದ ಎಲ್ಲಾ ಕಡೆಗಳಲ್ಲಿ ಲೋಕಸಭೆ ಚುನಾವಣೆಯ ಚರ್ಚೆಗಳು ಜೋರಾಗಿದೆ. ಗ್ರಾಮೀಣ ಭಾಗದ ಜನರು ಕೂಡ ಯಾರಿಗೆ ಮತ ಹಾಕಿದರೆ ಹೇಗೆ ಎಂದು ಪರಸ್ಪರ ಮಾತನಾಡಿಕೊಳ್ಳುತಿದ್ದಾರೆ.ಯಾವ ಪಕ್ಷದ ಸಾಧನೆ ಏನು?, ಅಭ್ಯರ್ಥಿಗಳ ಪೂರ್ವಾಪರ ಬಗ್ಗೆಯೂ ಚರ್ಚೆಗಳು ಶುರುವಾಗಿವೆ.
ಇದೀಗ ನಡೆಯುವ ಚುನಾವಣೆಯಲ್ಲಿ ಯಾವ ಅಭ್ಯರ್ಥಿ ಸೂಕ್ತ ಎಂದು ಗ್ರಾಮೀಣ ಭಾಗದ ಜನರು ಕಟ್ಟೆ ಮೇಲೆ ಕುಳಿತು ಚರ್ಚೆ ನಡೆಸುತ್ತಿರುವುದು ಸಾಮಾನ್ಯವಾಗಿದೆ. ಈ ಮಧ್ಯೆ ಪರಸ್ಪರ
ಬೈದಾಡಿಕೊಳ್ಳುವುದು, ವಾದ-ವಾಗ್ವಾದ ಸಹಜವಾಗಿವೆ.
ಇತ್ತೀಚೆಗೆ ನಡೆದ ಸರ್ಜಿಕಲ್ ಸ್ಟ್ರೈಕ್ ನಂತರ ಯುವಕರು ದೇಶ ಪ್ರೇಮದ ಭಾವನೆಗೆ ಒಳಗಾಗಿದ್ದಾರೆ. ಹಾಗಂತ ಎದುರಾಳಿ ಪಕ್ಷದವರು ಕೂಡ ಅನೇಕ ಕಡೆಗಳಲ್ಲಿ ಭಾಷಣ ಮಾಡಿ, ಭಾರತ-ಪಾಕಿಸ್ತಾನದ ಯುದ್ಧ ನಡೆದಾಗ ಯಾವ ಸರ್ಕಾರ ಇತ್ತು ಎಂದು ಕೂಡ ಪ್ರಶ್ನಿಸುತ್ತಿದ್ದಾರೆ.
ಸೈನಿಕರ ಹೆಸರಲ್ಲಿ ರಾಜಕೀಯ ಸಲ್ಲ ಎಂದು ಕಾಂಗ್ರೆಸ್ ಪಕ್ಷದವರು ಹೇಳುತ್ತಿದ್ದರೆ, ದೇಶದ ಸುರಕ್ಷತೆಗೆ ಬಿಜೆಪಿಗೆ ಹಾಗೂ ಮೋದಿಗೆ ಬೆಂಬಲಿಸಿ ಎಂದು ಬಿಜೆಪಿಯವರು ಹೇಳುತ್ತಿರುವುದು ಸಾಮಾನ್ಯವಾಗಿದೆ.
ಕ್ಷೇತ್ರದ ಸಮಸ್ಯೆ: ಸದ್ಯ ಬೀದರ್ ವಿಧಾನ ಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರಿದ್ದಾರೆ. ಪ್ರಮಖವಾಗಿ ಬೀದರ್ ನಗರದಲ್ಲಿ ಬೇಸಿಗೆ ಅವ ಧಿಯಲ್ಲಿ ಕುಡಿವ ನೀರಿಗೆ ಹಾಹಾಕಾರ ಉಂಟಾಗುತ್ತಿದೆ. ಪದೇಪದೆ ಬೀದರ್ ತಾಲೂಕು ಬರಪೀಡಿತ ಪ್ರದೇಶವೆಂದು ಗುರುತಿಸಿಕೊಳ್ಳುತ್ತಿದೆ. ಯುಜಿಡಿ ಕಾಮಗಾರಿ ಹೆಸರಲ್ಲಿ ಅನೇಕ ಬಡಾವಣೆಗಳಲ್ಲಿ ರಸ್ತೆಗಳನ್ನು ಅಗೆದು ಹಾಳುಮಾಡಿರುವುದು ಜನರ ಆಕ್ರೋಷಕ್ಕೆ ಕಾರಣವಾಗಿದೆ. ಹೆಚ್ಚು ಯುವಕರು ನೀರುದ್ಯೋಗ ಸಮಸ್ಯೆ ಎದುರಿಸುತ್ತಿದ್ದಾರೆ. ನೀರಾವರಿ ಯೋಜನೆಗಳು ಇಲ್ಲದೆ ರೈತರು ಕಂಗಾಲು ಆಗಿದ್ದರೂ ಚುನಾವಣೆಯಲ್ಲಿ ಈ ಎಲ್ಲಾ ವಿಷಯಗಳು ಚರ್ಚೆಗೆ ಬರದಿರುವುದು ವಿಪರ್ಯಾಸ ಎನ್ನುತ್ತಾರೆ ಪ್ರಜ್ಞಾವಂತ ಮತದಾರರು.
ನಾಯಕರ ಭೇಟಿ: ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಸಿ.ಎಂ. ಇಬ್ರಾಹಿಂ, ಎಚ್.ಕೆ ಪಾಟೀಲ, ಸಚಿವ ಶಿವಾನಂದ ಪಾಟೀಲ, ಸಚಿವ ರಾಜಶೇಖರ ಪಾಟೀಲ, ರಹೀಂ ಖಾನ್ ಭಾಗವಹಿಸಿ ಈಶ್ವರ ಖಂಡ್ರೆ ಪರ ಮತಯಾಚನೆ ಮಾಡಿದ್ದಾರೆ.
ಅದೇ ರೀತಿ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಎಂಎಲ್‌ಸಿ ಅಮರನಾಥ ಪಾಟೀಲ ಸೇರಿದಂತೆ ಕ್ಷೇತ್ರದ ಮುಖಂಡರು ಇದ್ದರು. ನಂತರ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಬೀದರ್, ದುಬಲಗುಂಡಿ, ಗಾದಗಿ ಗ್ರಾಮಗಳಿಗೆ ಭೇಟಿ ನೀಡಿ
ಪ್ರಚಾರ ಮಾಡಿದ್ದಾರೆ.
ಜನರ ಒಲವು
ಮೇಲ್ವರ್ಗದ ಸಮುದಾಯಗಳು ಮೋದಿ ಪರ ಒಲವು ಹೊಂದಿರುವುದು ಮೇಲ್ನೋಟಕ್ಕೆ ಕಾಣುತ್ತಿವೆ. ಕಳೆದ ಐದು
ವರ್ಷಗಳ ಆಡಳಿತ ಉತ್ತಮವಾಗಿತ್ತು ಎಂಬುದು ಬಿಜೆಪಿ ಮುಖಂಡರ ಅಭಿಮತ. ಆದರೆ, ಅಲ್ಪಸಂಖ್ಯಾತ, ದಲಿತ, ಹಿಂದುಳಿದ ವರ್ಗಗಗಳು ಕಾಂಗ್ರೆಸ್ ಪರ ಒಲವು ಹೊಂದಿದ್ದು, ಸಂವಿಧಾನ ಬದಲಾವಣೆ ವಿಷಯದ ಬಗ್ಗೆಯೂ ಭಾರೀ ಚರ್ಚೆಗಳು
ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.