ಧ್ರುವನಾರಾಯಣ್‌ಗೆ ಮತ ನೀಡಿ: ಸುನೀಲ್‌ಬೋಸ್‌


Team Udayavani, Apr 16, 2019, 3:00 AM IST

dhruva-mata

ತಿ.ನರಸೀಪುರ: ಕೇಂದ್ರದಲ್ಲಿ ಮತ್ತೆ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾದರೆ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಎರಡೂ ಅಪಾಯಕ್ಕೆ ಸಿಲುಕುವ ಅಪಾಯ ಇರುವುದರಿಂದ ಜನರು ಎಚ್ಚೆತ್ತುಕೊಂಡು ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರವನ್ನು ಅಧಿಕಾರಕ್ಕೆ ತರಲು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿಸಬೇಕು ಎಂದು ಯುವ ಮುಖಂಡ ಹಾಗೂ ವಸತಿ ಯೋಜನೆ ಜಾಗೃತಿ ಸಮಿತಿ ಮಾಜಿ ಅಧ್ಯಕ್ಷ ಸುನೀಲ್‌ ಬೋಸ್‌ ಹೇಳಿದರು.

ತಾಲೂಕಿನ ಮುಸುನಕೊಪ್ಪಲು ಗ್ರಾಮದಲ್ಲಿ ಸೋಮವಾರ ಚಾಮರಾಜನಗರ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಬೆಂಬಲಿತ ಕಾಂಗ್ರೆಸ್‌ ಅಭ್ಯರ್ಥಿ ಆರ್‌.ಧ್ರುವನಾರಾಯಣ ಅವರ ಪರ ಮತಯಾಚಿಸಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 5ವರ್ಷಗಳ ಅವಧಿಯಲ್ಲಿ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಸರ್ಕಾರದ ಸಚಿವನೋರ್ವ ಬಹಿರಂಗವಾಗಿ ಸಂವಿಧಾನ ಬದಲಿಸುತ್ತೇವೆ ಅಂದರೂ ಕೇಳದ ಧೋರಣೆಯೇ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಪ್ರಯತ್ನ ಎಂಬುದನ್ನು ಸೂಕ್ಷ್ಮವಾಗಿ ಗಮನಿಸಬೇಕೆಂದರು.

ರೈತರು, ಬಡವರು ಹಾಗೂ ಹಿಂದುಳಿದ ವರ್ಗಗಳ ಸಾಮಾಜಿಕ ಅಭಿವೃದ್ಧಿಗೆ ಕೇಂದ್ರದಲ್ಲಿ ಮತ್ತೆ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಬೇಕು. ರಾಜ್ಯದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಜಿಲ್ಲೆಯಲ್ಲಿ ಮಾಜಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ನಾಯಕತ್ವ ಬಲಪಡಿಸಲು ಚಾಮರಾಜನಗರ ಕ್ಷೇತ್ರದಲ್ಲಿ ಆರ್‌.ಧ್ರುವನಾರಾಯಣ ಅವರನ್ನು ಅತ್ಯಧಿಕ ಮತಗಳ ಅಂತರದಲ್ಲಿ ಗೆಲ್ಲಿಸಬೇಕು. ಅನಾರೋಗ್ಯದಿಂದಾಗಿ ಕೆಲವು ದಿನ ಪ್ರಚಾರಕ್ಕೆ ಬರಲಾಗಿಲ್ಲ. ಈ ಬಗ್ಗೆ ಕಾರ್ಯಕರ್ತರಲ್ಲಿ ಯಾವುದೇ ಗೊಂದಲ ಬೇಡ ಎಂದು ಹೇಳಿದರು.

ಸೋಸಲೆ ಗ್ರಾಮದಿಂದ ಆರಂಭಗೊಂಡ ಚುನಾವಣಾ ಪ್ರಚಾರ ಬೆನಕನಕನಹಳ್ಳಿ, ಎಂ.ಕೆಬ್ಬೇಹುಂಡಿ, ದೊಡ್ಡೇಬ್ಟಾಗಿಲು, ಕೊಳತ್ತೂರು, ಚಿದರವಳ್ಳಿ, ಉಕ್ಕಲಗೆರೆ ಹಾಗೂ ಅತ್ತಹಳ್ಳಿ ಗ್ರಾಮಗಳಲ್ಲಿ ಬಿರುಸಿನಿಂದ ನಡೆಯಿತು. ಪಿಕಾರ್ಡ್‌ ಬ್ಯಾಂಕ್‌ ಮಾಜಿ ಅಧ್ಯಕ್ಷ ಕೆ.ವಜ್ರೆಗೌಡ, ಜಿಪಂ ಮಾಜಿ ಸದಸ್ಯೆ ಎಂ.ಸುಧಾ,

ತಾಪಂ ಸದಸ್ಯ ಕುಕ್ಕೂರು ಗಣೇಶ, ಮಾಜಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನಸ್ವಾಮಿ, ಗ್ರಾಪಂ ಮಾಜಿ ಅಧ್ಯಕ್ಷ ಶಿವರಾಮು, ಕೆಬ್ಬೆ ನಾಗರಾಜು, ಅಕ್ಕೂರು ಗುರುಮೂರ್ತಿ, ಪುರಸಭಾ ಸದಸ್ಯ ಬಾದಾಮಿ ಮಂಜು, ಮುಖಂಡರಾದ ಕಾರ್ಗಳ್ಳಿ ಶಿವಸ್ವಾಮಿ ಕೆಬ್ಬೇಹುಂಡಿ ಮಹೇಶ, ವೀರಪ್ಪಒಡೆಯರಹುಂಡಿ ಬಸವರಾಜು, ಜೆ.ಅನೂಪ್‌ಗೌಡ ಮತ್ತಿತರರಿದ್ದರು.

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.