ಇಂದು ಸಂಜೆ 6ರಿಂದ 18ರ ಸಂಜೆ ತನಕ “ಮೌನ ಅವಧಿ’

Team Udayavani, Apr 16, 2019, 3:00 AM IST

indu-sanje

ಬೆಂಗಳೂರು: ಲೋಕಸಭೆ ಚುನಾವಣೆಗೆ ಮೊದಲ ಹಂತದಲ್ಲಿ ಏ.18ರಂದು ಮತದಾನ ನಡೆಯಲಿರುವ ದಕ್ಷಿಣ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ 6 ಗಂಟೆಯಿಂದ “ಮೌನ ಅವಧಿ’ (ಸೈಲೆನ್ಸ್‌ ಪಿರಿಯೆಡ್‌) ಜಾರಿಗೆ ಬರಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮತದಾನದ ಅವಧಿ ಮುಗಿಯುವ ದಿನದ ಹಿಂದಿನ 48 ಗಂಟೆಗಳನ್ನು ಚುನಾವಣಾ ಆಯೋಗದ ಪರಿಭಾಷೆಯಲ್ಲಿ “ಸೈಲೆನ್ಸ್‌ ಪಿರಿಯೆಡ್‌” (ಮೌನ ಅವಧಿ) ಎಂದು ಕರೆಯಲಾಗುತ್ತದೆ. ಈ ಅವಧಿಯಲ್ಲಿ ಎಲ್ಲ ರೀತಿಯ ಬಹಿರಂಗ ಚುನಾವಣಾ ಪ್ರಚಾರವನ್ನು ನಿಷೇಧಿಸಲಾಗಿರುತ್ತದೆ ಎಂದರು.

ಅದರಂತೆ ಮೊದಲ ಹಂತದಲ್ಲಿ ಏ.18ರಂದು ಮತದಾನ ನಡೆಯಲಿರುವ ದಕ್ಷಿಣ ಕರ್ನಾಟಕ ಭಾಗದ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳಲ್ಲಿ ಏ.16ರ ಸಂಜೆ 6 ಗಂಟೆಯಿಂದ ಏ.18ರ ಸಂಜೆ 6 ಗಂಟೆ ತನಕ “ಮೌನ ಅವಧಿ’ ಜಾರಿಯಲ್ಲಿ ಇರಲಿದೆ.

ಈ ವಿಚಾರದಲ್ಲಿ ಕೇಂದ್ರ ಚುನಾವಣಾ ಆಯೋಗದ ಮಾರ್ಗಸೂಚಿ ಹಾಗೂ ಮಾದರಿ ನೀತಿ ಸಂಹಿತೆಯನ್ನು ಎಲ್ಲ ರಾಜಕೀಯ ಪಕ್ಷಗಳು ಹಾಗೂ ಪ್ರತಿಯೊಬ್ಬ ಅಭ್ಯರ್ಥಿ ಕಡ್ಡಾಯವಾಗಿ ಪಾಲನೆ ಮಾಡಬೇಕು. ಉಲ್ಲಂಘನೆ ಕಂಡು ಬಂದರೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು. ಈ ವಿಚಾರ ಮಾಧ್ಯಮಗಳಿಗೂ ಅನ್ವಯವಾಗಲಿದೆ ಎಂದು ಸಂಜೀವ್‌ ಕುಮಾರ್‌ ತಿಳಿಸಿದರು.

ವೈಯಕ್ತಿಕ ನಿಂದನೆ ಬೇಡ: ಚುನಾವಣಾ ಪ್ರಚಾರದ ವೇಳೆ ರಾಜಕೀಯ ಮುಖಂಡರು, ಎದುರಾಳಿ ಪಕ್ಷದ ಮುಖಂಡರ ವೈಯಕ್ತಿಕ ಜೀವನ, ಖಾಸಗಿ ವಿಚಾರಗಳ ಕುರಿತು ಟೀಕೆ ಅಥವಾ ನಿಂದನೆ ಮಾಡಿದರೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಎಚ್ಚರಿಕೆ ನೀಡಿದ್ದಾರೆ.

ವೈಯಕ್ತಿಕ ನಿಂದನೆಯ ಅನೇಕ ಸಂಗತಿಗಳು ಆಯೋಗದ ಗಮನಕ್ಕೆ ಬಂದಿದೆ. ಈ ಬಗ್ಗೆ ಹಲವು ದೂರುಗಳು ಸಹ ದಾಖಲಾಗಿದೆ. ಈ ಬಗ್ಗೆ ರಾಜಕೀಯ ಪಕ್ಷಗಳೊಂದಿಗೆ ಸಭೆ ನಡೆಸಿ ಮುಂದೆ ಹೀಗಾಗದಂತೆ ನೋಡಿಕೊಳ್ಳಲು ಅವರಿಗೆ ತಾಕೀತು ಮಾಡಲಾಗಿದೆ. ಒಂದೊಮ್ಮೆ ಇದು ಮುಂದುವರಿದರೆ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನೂ ಕೊಡಲಾಗಿದೆ ಎಂದರು.

ಚುನಾವಣಾ ಪ್ರಚಾರದ ವೇಳೆ ಎದುರಾಳಿ ಪಕ್ಷದ ನೀತಿ, ಯೋಜನೆ ಮತ್ತು ಕಾರ್ಯಕ್ರಮಗಳ ಬಗ್ಗೆ ಟೀಕೆ ಮಾಡಬಹುದು ಅಥವಾ ಅದರ ಬಗ್ಗೆ ವಿಶ್ಲೇಷಣೆ ಮಾಡಲು ಅವಕಾಶವಿದೆ. ಆದರೆ, ವ್ಯಕ್ತಿ ನಿಂದನೆ, ವೈಯಕ್ತಿಕ ಟೀಕೆ, ಖಾಸಗಿ ವಿಚಾರಗಳ ಪ್ರಸ್ತಾಪ ಮಾಡುವುದು ಸರಿಯಲ್ಲ.

ಇದು ನೀತಿ ಸಂಹಿತೆಯ ಉಲ್ಲಂಘನೆ ಆಗುವುದರ ಜೊತೆಗೆ ಕೆಲವೊಂದು ಸಂದರ್ಭಗಳಲ್ಲಿ ಅಂತಹ ನಡವಳಿಕೆ ಗಂಭೀರ ಅಪರಾಧ ಸಹ ಆಗುತ್ತದೆ. ಆದ್ದರಿಂದ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಎಚ್ಚರಿಕೆ ವಹಿಸಬೇಕು ಎಂದು ಮುಖ್ಯ ಚುನಾವಣಾಧಿಕಾರಿ ಮನವಿ ಮಾಡಿದರು.

ಟಾಪ್ ನ್ಯೂಸ್

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.