ಪಿಯು: ಉಡುಪಿ ಪ್ರಥಮ, ದ.ಕ. ದ್ವಿತೀಯ
ಶೇ. 61.73ರಷ್ಟು ಫಲಿತಾಂಶ; ಶೇ. 55.29 ಬಾಲಕರು, ಶೇ. 68.24 ಬಾಲಕಿಯರು ಪಾಸ್
Team Udayavani, Apr 16, 2019, 4:05 AM IST
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶವು ದಶಕದ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಬರೆದಿದೆ. 2018-19ನೇ ಸಾಲಿನಲ್ಲಿ ವಾರ್ಷಿಕ ಪರೀಕ್ಷೆ ಬರೆದಿದ್ದ 6.71 ಲಕ್ಷ ವಿದ್ಯಾರ್ಥಿಗಳಲ್ಲಿ 4.14 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಶೇ.61.73ರಷ್ಟು ಫಲಿತಾಂಶ ದಾಖಲಾಗಿದೆ. ಉಡುಪಿ ಜಿಲ್ಲೆ ಪ್ರಥಮ ಸ್ಥಾನಕ್ಕೆ ಏರಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನಕ್ಕಿಳಿದಿದೆ.
ಕಳೆದ ಬಾರಿಗಿಂತ ಶೇ. 2.17ರಷ್ಟು ಹೆಚ್ಚು ಫಲಿತಾಂಶ ಬಂದಿದೆ. 2015ರ ಶೇ. 60.54 ಫಲಿತಾಂಶವೇ ಈವರೆಗೂ ದಾಖಲೆಯಾಗಿತ್ತು.
ಉಡುಪಿ, ದಕ್ಷಿಣ ಕನ್ನಡದ ಬಳಿಕ ಕೊಡಗು, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಕ್ರಮವಾಗಿ ಮೂರರಿಂದ ಐದನೇ ಸ್ಥಾನದಲ್ಲಿವೆ. ಕಳೆದ ಬಾರಿ ಕೊನೆಯ ಸ್ಥಾನದಲ್ಲಿದ್ದ ಚಿಕ್ಕೋಡಿ ಈ ಬಾರಿ 25ನೇ ಸ್ಥಾನಕ್ಕೆ ಏರಿದೆ. ಬೀದರ್, ಯಾದಗಿರಿ ಹಾಗೂ ಚಿತ್ರದುರ್ಗ ಕ್ರಮವಾಗಿ ಕೊನೆಯ ಮೂರು ಸ್ಥಾನಗಳಿಗೆ ಇಳಿದಿವೆ.
ಪರೀಕ್ಷೆ ಬರೆದಿದ್ದ ಒಟ್ಟು ವಿದ್ಯಾರ್ಥಿಗಳಲ್ಲಿ ಶೇ. 55.29 ಬಾಲಕರು ಹಾಗೂ ಶೇ. 68.24ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದು, ನಗರ ಪ್ರದೇಶದ ಶೇ. 61.38 ಹಾಗೂ ಗ್ರಾಮೀಣ ಪ್ರದೇಶದ ಶೇ. 62.88ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಕಲಾ ವಿಭಾಗ: 10ರಲ್ಲಿ 9 ಸ್ಥಾನ ಇಂದು ಕಾಲೇಜಿಗೆ ಕಳೆದ ಬಾರಿಯಂತೆಯೇ ಬಳ್ಳಾರಿ ಜಿಲ್ಲೆಯ ಕೊಟ್ಟೂರಿನ ಇಂದು ಕಾಲೇಜು ಕಲಾ ವಿಭಾಗದ ಅಗ್ರಸ್ಥಾನದಲ್ಲಿ ಅಮೋಘ ಸಾಧನೆ ಮಾಡಿದೆ. ಮೊದಲ 10 ಸ್ಥಾನದಲ್ಲಿ 9 ಸ್ಥಾನ ಈ ಕಾಲೇಜಿಗೇ ಸಂದಿವೆ.
ಉಡುಪಿ: ಶೇ. 92.02
ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಈ ಬಾರಿ ಶೇ. 92.02 ಫಲಿತಾಂಶ ಗಳಿಸಿರುವ ಉಡುಪಿ ಜಿÇÉೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಕಳೆದ ಬಾರಿ ಶೇ. 90.67ರಷ್ಟು ಫಲಿತಾಂಶ ಪಡೆದಿರುವ ಜಿÇÉೆ ಈ ಬಾರಿ ಶೇ. 1.53 ಹೆಚ್ಚು ಫಲಿತಾಂಶ ಪಡೆದು ಮುನ್ನಡೆ ಸಾಧಿಸಿದೆ. ಈ ಬಾರಿ ಒಟ್ಟು 15,397 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 13,485 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ದ.ಕ.: ಶೇ. 90.91
ಮಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಳೆದ ವರ್ಷ ಪ್ರಥಮ ಸ್ಥಾನದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆ ಈ ಬಾರಿ ಎರಡನೇ ಸ್ಥಾನಕ್ಕೆ ಇಳಿದಿದೆ. ಜಿಲ್ಲೆಯಲ್ಲಿ ಪರೀಕ್ಷೆ ಬರೆದ ಒಟ್ಟು 38,069 ಮಂದಿ ವಿದ್ಯಾರ್ಥಿಗಳಲ್ಲಿ 33,088 ಮಂದಿ ಉತ್ತೀರ್ಣರಾಗಿದ್ದು, ಶೇ. 90.91 ಫಲಿತಾಂಶ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.