ಕರಾವಳಿ ಅಪರಾಧ ಸುದ್ದಿಗಳು


Team Udayavani, Apr 16, 2019, 10:28 AM IST

crime-news-symbolic-750

ಕಾರು ಢಿಕ್ಕಿ: ಮಹಿಳೆ ಸಾವು; ಇಬ್ಬರಿಗೆ ಗಾಯ
ಮಂಗಳೂರು:
ನಗರದ ಹೊರವಲಯದ ಅಡ್ಯಾರ್‌ ಸೋಮನಾಥ ಕಟ್ಟೆ ಬಳಿ ಸೋಮವಾರ ಮುಂಜಾನೆ ನಡೆದ ಭೀಕರ ಅಪಘಾತದಲ್ಲಿ ಪಾದಚಾರಿ ಮಹಿಳೆ ಸಾವನ್ನಪ್ಪಿದ್ದು, ಮತ್ತಿಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ.ವಳಚ್ಚಿಲ್‌ ನಿವಾಸಿ ಮೀನಾಕ್ಷಿ (55) ಸಾವನ್ನಪ್ಪಿದವರು. ಗೀತಾ (50) ಮತ್ತು ಗೌತಮಿ (22) ಗಾಯಗೊಂಡವರು.

ಈ ಮೂವರು ಅಡ್ಯಾರ್‌ ದೇವಸ್ಥಾನದ ಜಾತ್ರೆಗೆ ಬಂದಿದ್ದರು. ಬಳಿಕ ರಾತ್ರಿ 2 ಗಂಟೆ ವೇಳೆಗೆ ಸಮೀಪದ ಮುಗಿಲಗುಡ್ಡೆಯಲ್ಲಿರುವ ಸಂಬಂಧಿಕರ ಮನೆಗೆ ಹೆದ್ದಾರಿ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಮಂಗಳೂರಿನಿಂದ ಬಿ.ಸಿ. ರೋಡ್‌ ಕಡೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮಹಿಳೆಯರಿಗೆ ಢಿಕ್ಕಿ ಹೊಡೆದಿತ್ತು. ತೀವ್ರ ಗಾಯಗೊಂಡಿದ್ದ ಮೀನಾಕ್ಷಿ ಸಾವನ್ನಪ್ಪಿದ್ದು, ಉಳಿದಿಬ್ಬರು ಗಾಯಗೊಂಡರು. ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ನಗರ ಸಂಚಾರ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರಂಬಾರು: ಮನೆ ಮಹಡಿಯಿಂದ ಬಿದ್ದು ಯುವ ಎಂಜಿನಿಯರ್‌ ಸಾವು
ಬಜಪೆ,: ಮಳವೂರು ಗ್ರಾಮ ಪಂಚಾ ಯತ್‌ ವ್ಯಾಪ್ತಿಯ ಕರಂಬಾರು ಕೊಪ್ಪಳದ ನಿವಾಸಿ ದೀಕ್ಷಿತ್‌ (22) ಎ.14ರಂದು ಮನೆಯ ಮಹಡಿ ನಿಂದ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.
ಮಳವೂರು ಗ್ರಾಮ ಪಂಚಾಯತ್‌ ಸದಸ್ಯ ಲಕ್ಷ್ಮಣ್‌ ಬಂಗೇರ ಹಾಗೂ ಶೈಲಜಾ ದಂಪತಿಯ ಇಬ್ಬರು ಪುತ್ರಲ್ಲಿ ಹಿರಿಯವರಾಗಿದ್ದ ಅವರು ಕಳೆದ ವರ್ಷ ಮೆಕ್ಯಾನಿಲ್‌ ಎಂಜಿನಿಯರಿಂಗ್‌ ಮುಗಿಸಿ, ಉದ್ಯೋಗ ತರಬೇತಿ ಪಡೆಯುತ್ತಿದ್ದರು.ಲಕ್ಷ್ಮಣ್‌ ಬಂಗೇರರ ಮನೆಯ ಎರಡನೇ ಮಹಡಿಯ ನಿರ್ಮಾಣ ಕಾರ್ಯ ಪ್ರಗತಿಯಲ್ಲಿತ್ತು. ದೀಕ್ಷಿತ್‌ ರವಿವಾರ ಸಂಜೆ ಕಾಮಗಾರಿ ಪರಿಶೀಲಿಸುತ್ತಿದ್ದ ಸಂದರ್ಭ ಆಯ ತಪ್ಪಿ ಬಿದ್ದಿದ್ದರು. ತಲೆಗೆ ಗಂಭೀರ ಏಟಾಗಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಬಜಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರು ಢಿಕ್ಕಿ: ಬೈಕ್‌ ಸವಾರ ಸಾವು
ಕಾಪು : ಮಲ್ಪೆಯಿಂದ ಕಟಪಾಡಿಗೆ ಬರುತ್ತಿದ್ದ ಬೈಕಿಗೆ ಅಪರಿಚಿತ ಕಾರು ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉದ್ಯಾವರದಲ್ಲಿ ರವಿವಾರ ರಾತ್ರಿ ಸಂಭವಿಸಿದೆ.
ಮೂಲತಃ ಪೆರ್ಡೂರು ನಿವಾಸಿ, ಪ್ರಸ್ತುತ ಕಟಪಾಡಿ ಅಗ್ರಹಾರದಲ್ಲಿ ವಾಸವಿದ್ದ ಸುರೇಶ್‌ ದೇವಾಡಿಗ (48) ಮೃತಪಟ್ಟವರು. ಅವರು ಮಲ್ಪೆಯ ಬಾರ್‌ನಲ್ಲಿ ಕೆಲಸದಲ್ಲಿದ್ದು, ಉದ್ಯಾವರ ಹಲಿಮಾ ಸಾಬುj ಸಭಾಂಗಣದ ಬಳಿ ಅಪಘಾತ ಸಂಭವಿಸಿದೆ. ಕಾರು ಚಾಲಕ ವಾಹನ ಸಹಿತ ಪರಾರಯಾಗಿದ್ದು, ಅದನ್ನು ಮಣಿಪಾಲದಲ್ಲಿ ಪೊಲೀಸರು ವಶಪಡಸಿದ್ದಾರೆ.
ಸುರೇಶ್‌ ಮಲ್ಪೆಯಲ್ಲಿ ಉದ್ಯೋಗ ದಲ್ಲಿದ್ದ ಕಾರಣ ಕಟಪಾಡಿ ಅಗ್ರಹಾರದ ಪತ್ನಿಯ ಮನೆಯಲ್ಲಿದ್ದರು. ಪತ್ನಿ ಗೃಹಿಣಿಯಾಗಿದ್ದು, ಪುತ್ರ 7ನೇ ತರಗತಿ ಮತ್ತು ಪುತ್ರಿ ನಾಲ್ಕನೇ ತರಗತಿ ಓದುತ್ತಿದ್ದಾರೆ. ಈಗ ಕುಟುಂಬದ ಆಧಾರ ಸ್ಥಂಭವೇ ಕುಸಿದಂತಾಗಿದೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.