ಇದೇ ವರ್ಷ ಸರಕಾರಿ ಶಾಲೆಗಳಲ್ಲಿಯೂ ಆಂಗ್ಲ ಮಾಧ್ಯಮ ಶಿಕ್ಷಣ
Team Udayavani, Apr 17, 2019, 6:30 AM IST
ಉಡುಪಿ: ಜಿಲ್ಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಪ್ರಾರಂಭಿಸಲು ಶಿಕ್ಷಣ ಇಲಾಖೆಯಿಂದ ಸದ್ದಿಲ್ಲದೆ ಸಿದ್ಧತೆಗಳು ಆರಂಭಗೊಂಡಿದೆ.
ಜಿಲ್ಲೆಯಲ್ಲಿ ಒಟ್ಟು 599 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿದ್ದು, ಅವುಗಳಲ್ಲಿ ಒಟ್ಟು 26 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಹೆಸರನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿಗೆ ಇಲಾಖೆಗೆ ಕಳುಹಿಸಲಾಗಿದ್ದು, ಅದರಲ್ಲಿ ಒಟ್ಟು 21 ಶಾಲೆಗಳು ಆಯ್ಕೆಯಾಗಿವೆ. ಆ ಶಾಲೆಗಳಲ್ಲಿರುವ ಸೌಲಭ್ಯಗಳ ಕುರಿತು ಮರು ಪರಿಶೀಲನೆ ಮಾಡುವಂತೆ ಜಿÇÉಾ ಶೈಕ್ಷಣಿಕ ತರಬೇತಿ ಸಂಸ್ಥೆಗೆ ಜವಾಬ್ದಾರಿ ವಹಿಸಲಾಗಿದೆ.
ಸರಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಆಕರ್ಷಿಸಲು ಮತ್ತು ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ ಸಿಗುವ ಗುಣಮಟ್ಟದ ಶಿಕ್ಷಣ ಸರಕಾರಿ ಶಾಲೆಗಳಲ್ಲಿಯೂ ಸಿಗಬೇಕೆಂಬ ನಿಟ್ಟಿನಲ್ಲಿ ಈ ಹಿಂದೆ ಕರ್ನಾಟಕ ಪಬ್ಲಿಕ್ ಶಾಲೆಗಳಡಿ (ಕೆಪಿಸಿ) ನೋಂದಾಯಿಸಲ್ಪಟ್ಟ ಸರಕಾರಿ ಶಾಲೆಗಳಲ್ಲಿ ಮಾತ್ರ ಆಂಗ್ಲ ಮಾಧ್ಯಮವನ್ನು ಆರಂಭಿಸಲಾಗುತ್ತದೆ.
ಆಯ್ಕೆ ಪ್ರಕಿಯೆ
ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭಿಸಲು ಅವಕಾಶ ನೀಡಲಾಗುತ್ತದೆ. ಇಂಗ್ಲಿಷ್ ಪರಿಣಿತಿ ಹೊಂದಿರುವ ಕಾರ್ಯನಿರತ ಶಿಕ್ಷಕರಿಗೆ ಆಯ್ಕೆ ಪರೀಕ್ಷೆ ನಡೆಸಿ ಆಂಗ್ಲ ಮಾಧ್ಯಮ ತರಗತಿಗಳನ್ನು ಬೋಧಿಸಲು ಶಿಕ್ಷಕರನ್ನು ಸಿದ್ಧಗೊಳಿಸಲಾಗುತ್ತಿದೆ.
ಏನಿದು ಕೆಪಿಸಿ ಶಾಲೆ?
ಕೆಪಿಸಿಗಳಲ್ಲಿ ಶಾಲಾ ಹಂತದಲ್ಲಿಯೇ ಮಕ್ಕಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರನ್ನು ನೇಮಕ ಮಾಡಲಾಗುತ್ತದೆ. ಗುಣಮಟ್ಟದ ಶಿಕ್ಷಣಕ್ಕೆ ಒತ್ತು, ವಿದ್ಯಾರ್ಥಿಗಳ ಬೋಧನೆಗೆ ಸುಸಜ್ಜಿತ ಕೊಠಡಿ, ವ್ಯವಸ್ಥಿತ ಪ್ರಯೋಗಾಲಯ, ಪ್ರತ್ಯೇಕ ಕಂಪ್ಯೂಟರ್ ಲ್ಯಾಬ್, ಗುಣಮಟ್ಟದ ಗ್ರಂಥಾಲಯ, ಶುದ್ಧ ಕುಡಿಯುವ ನೀರು, ಆಟದ ಮೈದಾನ, ಬಾಲಕರು ಮತ್ತು ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಹೊಂದಿರುವುದರಿಂದ ಇದೇ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭಿಸಿದರೆ ಸರಕಾರದ ಮೇಲೆ ಹೊರೆ ಬೀಳುವುದಿಲ್ಲ ಎನ್ನುವ ಚಿಂತನೆ ಇದೆ.
ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳ
ಬ್ರಹ್ಮಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯು ಸರಕಾರಿ ಆಂಗ್ಲ ಮಾಧ್ಯಮದ ಆಯ್ಕೆ ಪಟ್ಟಿಯಲ್ಲಿದೆ. ಇಲ್ಲಿ ಸುಮಾರು 398 ವಿದ್ಯಾರ್ಥಿಗಳಿದ್ದಾರೆ. ಸರಕಾರದಿಂದ 11 ಶಿಕ್ಷಕರು, ಎಸ್‌ಡಿಎಂಸಿಯಿಂದ 7 ಮಂದಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಈಗಾಗಲೇ 6ರಿಂದ 7ನೇ ತರಗತಿ ವರೆಗೆ ಆಂಗ್ಲ ಮಾಧ್ಯಮ ಪ್ರಾರಂಭವಾಗಿದೆ. ಇಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭವಾದರೆ ಮುಂದಿನ ದಿನಗಳಲ್ಲಿ ಶಾಲೆಗೆ ದಾಖಲಾಗುವ ವಿದ್ಯಾರ್ಥಿಗಳ ಸಂಖ್ಯೆ ಇನ್ನಷ್ಟು ಹೆಚ್ಚಾಗಲಿದೆ.
-ಮಲ್ಲಿಕಾರ್ಜುನ, ಮುಖ್ಯ ಶಿಕ್ಷಕರು ಸ.ಹಿ.ಪ್ರಾ.ಶಾಲೆ ಬ್ರಹ್ಮಾವರ
ಇಲಾಖೆಗೆ ಶಾಲೆಗಳ ಪಟ್ಟಿ ಸಲ್ಲಿಕೆ
ಸರಕಾರದ ಆದೇಶದಂತೆ ಜಿÇÉೆಯ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸುವ ಬಗ್ಗೆ ಈಗಾಗಲೇ ಶಾಲೆಗಳ ಪಟ್ಟಿಯನ್ನು ಇಲಾಖೆಗೆ ಸಲ್ಲಿಸಲಾಗಿದೆ.
– ಶೇಷಶಯನ ಕಾರಿಂಜ, ಡಿಡಿಪಿಐ
ಪಠ್ಯಪುಸ್ತಕ ಭಾಷಾಂತರ
ಸರಕಾರದಿಂದ ಆಂಗ್ಲ ಮಾಧ್ಯಮವಾಗಿ ಅನುಮೋದನೆ ಗೊಂಡ ಶಾಲೆಗಳಲ್ಲಿ 1ರಿಂದ 7ನೇ ತರಗತಿ ವರೆಗೆ ಈಗಾಗಲೆ ಕನ್ನಡದಲ್ಲಿದ್ದ ಪಠ್ಯಗಳನ್ನು ಆಂಗ್ಲ ಭಾಷೆಗೆ ಭಾಷಾಂತರಿಸ ಲಾಗುತ್ತಿದೆ.
– ತೃಪ್ತಿ ಕುಮ್ರಗೋಡು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.