“ಪ್ರಕಾಶ’ಮಾನವಾಗಲು ಅಣ್ಣಾ ತೊಡರುಗಾಲು

ರಣಾಂಗಣ: ಚಿಕ್ಕೋಡಿ

Team Udayavani, Apr 17, 2019, 3:00 AM IST

prakasha

ಬೆಳಗಾವಿ: ಅಸಮಾಧಾನದ ಹೊಗೆಯ ಮಧ್ಯೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾ ಅಖಾಡದ ಚಿತ್ರಣ ಸ್ಪಷ್ಟವಾಗಿದ್ದು ಇಬ್ಬರು ಪ್ರಭಾವಿ ನಾಯಕರ ಮಧ್ಯೆ ನೇರ ಕುಸ್ತಿಗೆ ಮತದಾರರು ಸಾಕ್ಷಿಯಾಗಲಿದ್ದಾರೆ. ಕಾಂಗ್ರೆಸ್‌ನಿಂದ ಪ್ರಕಾಶ ಹುಕ್ಕೇರಿ ಮರು ಆಯ್ಕೆ ಬಯಸಿದ್ದರೆ, ಬಿಜೆಪಿಯಿಂದ ಅಣ್ಣಾಸಾಹೇಬ ಜೊಲ್ಲೆ ಪ್ರಬಲ ಪೈಪೋಟಿಗೆ ಸಿದ್ಧತೆ ಮಾಡಿಕೊಂಡಿದ್ದಾರೆ.

ಕಣದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಅಭ್ಯರ್ಥಿಗಳನ್ನು ಹೊರತುಪಡಿಸಿ ಬಹುಜನ ಸಮಾಜ ಪಕ್ಷದ ಮಚ್ಚೇಂದ್ರ ಕಾಡಾಪುರೆ ಸೇರಿ 9 ಜನ ಉಳಿದುಕೊಂಡಿದ್ದಾರೆ. ಆದರೆ ಪ್ರಕಾಶ ಹುಕ್ಕೇರಿ ಹಾಗೂ ಅಣ್ಣಾಸಾಹೇಬ ಜೊಲ್ಲೆ ಮಧ್ಯೆ ನೇರ ಕದನ ಇರುವುದರಿಂದ ಉಳಿದ ಅಭ್ಯರ್ಥಿಗಳ ಬಗ್ಗೆ ಅಂತಹ ಆಸಕ್ತಿ ಮತದಾರರಲ್ಲಿ ಕಾಣುತ್ತಿಲ್ಲ.

ಒಂದು ಕಾಲದಲ್ಲಿ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಈ ಕ್ಷೇತ್ರ ನಂತರ ಯಾರಿಗೂ ಭದ್ರವಾಗಿ ನೆಲೆ ಕೊಟ್ಟಿಲ್ಲ. ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಈ ಕೋಟೆಯ ವಶಕ್ಕೆ ಆಗಾಗ ಪೈಪೋಟಿ ನಡೆದೇ ಇದೆ. ಸಕ್ಕರೆ ಕಾರ್ಖಾನೆಗಳು ಹಾಗೂ ಡಿಸಿಸಿ ಬ್ಯಾಂಕ್‌ ರಾಜಕಾರಣ ಇಲ್ಲಿ ಚುನಾವಣೆಯ ಮುಖ್ಯ ವಿಷಯ. ನಂತರ ಜಾತಿ ಸಮೀಕರಣ. ಇದಾದ ಮೇಲೆ ಆಯಾ ಪಕ್ಷಗಳ ಸಾಧನೆ. ಬಲಾಡ್ಯ ವ್ಯಕ್ತಿಗಳು ಇಲ್ಲಿರುವುದರಿಂದ ಪಕ್ಷಗಳ ಹೆಸರು ನಗಣ್ಯ.

ಅಣ್ಣಾಸಾಹೇಬ ಜೊಲ್ಲೆಗೆ ಇದು ಮೊದಲ ಲೋಕಸಭೆ ಚುನಾವಣೆ. ವಿಧಾನಸಭೆ ಚುನಾವಣೆಯಲ್ಲಿ ಪ್ರಕಾಶ ಹುಕ್ಕೇರಿ ಹಾಗೂ ಅವರ ಪುತ್ರ ಗಣೇಶ ವಿರುದ್ಧ ಸೋಲು ಅನುಭವಿಸಿರುವ ಜೊಲ್ಲೆಗೆ ಈ ಎರಡೂ ಸೋಲಿನ ಸೇಡು ತೀರಿಸಿಕೊಳ್ಳುವ ಅವಕಾಶ ಈಗ ಒದಗಿ ಬಂದಿದೆ.

ಕಠಿಣ ಸವಾಲಿನ ಚುನಾವಣೆ – ಕ್ಷೇತ್ರದಲ್ಲಿನ ವಾತಾವರಣ ಗಮನಿಸಿದರೆ ಇಬ್ಬರೂ ಅಭ್ಯರ್ಥಿಗಳಿಗೂ ಚುನಾವಣೆ ಸರಳವಾಗಿಲ್ಲ. ಎರಡೂ ಪಕ್ಷಗಳಲ್ಲಿ ಆಂತರಿಕ ಅಸಮಾಧಾನ ಇರುವುದೇ ಇದಕ್ಕೆ ಮುಖ್ಯ ಕಾರಣ. ಕ್ಷೇತ್ರದ ಜನರಲ್ಲಿ ಇಬ್ಬರ ಬಗ್ಗೆಯೂ ಒಳ್ಳೆಯ ಅಭಿಪ್ರಾಯ ಇದ್ದರೂ ಮುಖಂಡರ ಮನಸ್ತಾಪ ಅಭ್ಯರ್ಥಿಗಳ ಮುನ್ನಡೆಗೆ ಅಡ್ಡಿಯಾಗಿದೆ.

ಟಿಕೆಟ್‌ ಹ‌ಂಚಿಕೆ ವಿಷಯದಲ್ಲಿ ಎರಡೂ ಪಕ್ಷಗಳಲ್ಲಿ ಸಾಕಷ್ಟು ಅಪಸ್ವರಗಳು ಕೇಳಿ ಬಂದಿದ್ದವು. ಅದರಲ್ಲೂ ಬಿಜೆಪಿ ಟಿಕೆಟ್‌ ವಿಷಯ ರಾಜ್ಯಮಟ್ಟದಲ್ಲಿ ಬಹಳ ದೊಡ್ಡ ಸುದ್ದಿ ಮಾಡಿತ್ತು. ಕಡೆಯ ಕ್ಷಣದವರೆಗೆ ಹೆಸರು ಘೋಷಣೆ ಮಾಡದೇ ಇದ್ದದ್ದು ಗೊಂದಲಕ್ಕೆ ಕಾರಣವಾಗಿತ್ತು. ಟಿಕೆಟ್‌ ಮೇಲೆ ಆಸೆ ಇಟ್ಟುಕೊಂಡಿದ್ದ ಮಾಜಿ ಸಂಸದ ರಮೇಶ ಕತ್ತಿ ಬಂಡಾಯದ ಸೂಚನೆ ಸಹ ನೀಡಿದ್ದರು.

ಕಾಂಗ್ರೆಸ್‌ಗೆ ಸೇರುವ ಬೆದರಿಕೆ ಹಾಕಿದ್ದರು. ಕೊನೆಗೆ ಇವರ ಬಂಡಾಯವನ್ನು ಶಮನ ಮಾಡಲು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಬೆಳಗಾವಿಗೆ ಬರಬೇಕಾಯಿತು. ಕತ್ತಿ ಅವರ ಈ ಅಸಮಾಧಾನ ಚುನಾವಣೆಯಲ್ಲಿ ಬಿಜೆಪಿಗೆ ಸಮಸ್ಯೆ ಉಂಟು ಮಾಡಿದರೂ ಅಚ್ಚರಿ ಇಲ್ಲ.

ಕಾಂಗ್ರೆಸ್‌ನಲ್ಲಿ ಸಹ ಪ್ರಕಾಶ ಹುಕ್ಕೇರಿಗೆ ಟಿಕೆಟ್‌ ನೀಡಬಾರದೆಂದು ಚಿಕ್ಕೋಡಿ ಭಾಗದ ಮಾಜಿ ಶಾಸಕರು ವರಿಷ್ಠರ ಮೇಲೆ ಒತ್ತಡ ಹಾಕಿದ್ದರು. ಆದರೆ ಜೊಲ್ಲೆ ವಿರುದ್ಧ ಸಮಬಲದ ಹೋರಾಟ ಮಾಡುವ ಅಭ್ಯರ್ಥಿ ಸಿಗದೇ ಇರುವ ಕಾರಣ ಮಾಜಿ ಶಾಸಕರ ಒತ್ತಡ ಕೆಲಸ ಮಾಡಲಿಲ್ಲ. ಇದರ ಜತೆಗೆ ಪ್ರಕಾಶ ಹುಕ್ಕೇರಿ ಸಹ ಚಿಕ್ಕೋಡಿ ಬದಲು ಬೆಳಗಾವಿಯಿಂದ ಸ್ಪರ್ಧಿಸಲು ಆಸಕ್ತಿ ತೋರಿಸಿದ್ದರು. ಆದರೆ ಇದಕ್ಕೆ ಸತೀಶ ಜಾರಕಿಹೊಳಿ ಅಡ್ಡಿಯಾದರು.

ಬಿಜೆಪಿ ಎಂದಿನಂತೆ ಪ್ರಧಾನಿ ಮೋದಿ ಅವರ ಗಾಳಿಯನ್ನೇ ನೆಚ್ಚಿಕೊಂಡಿದೆ. ಪಕ್ಷದ ಅಭ್ಯರ್ಥಿ ಜೊಲ್ಲೆಗೆ ತಮ್ಮ ಸಾಧನೆ ಹೇಳಿಕೊಳ್ಳುವ ಅವಕಾಶ ಇಲ್ಲ. ಆದರೆ ಸಾಮಾಜಿಕವಾಗಿ ಜನರ ಜತೆ ಹತ್ತಿರದ ಸಂಪರ್ಕ ಹೊಂದಿದ್ದಾರೆ. ಹೀಗಾಗಿ ಬಿಜೆಪಿ ನಾಯಕರು, ಕಾರ್ಯಕರ್ತರು ಮೋದಿ ಅವರನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡಲು ಜೊಲ್ಲೆ ಅವರನ್ನು ಬೆಂಬಲಿಸಬೇಕೆಂದು ಪ್ರಚಾರ ಮಾಡುತ್ತಿದ್ದಾರೆ. ಇದರ ಜತೆಗೆ ಜೊಲ್ಲೆ ಅವರ ಪತ್ನಿ ಶಶಿಕಲಾ ಅವರು ಶಾಸಕಿಯಾಗಿರುವುದೂ ಅನುಕೂಲವಾಗಿದೆ.

ಹುಕ್ಕೇರಿಗೆ ಕೆಲಸದ ವಿಶ್ವಾಸ – ಆರು ಬಾರಿ ಶಾಸಕರಾಗಿ ನಂತರ ಮೊದಲ ಪ್ರಯತ್ನದಲ್ಲೇ ಸಂಸದರಾದ ಅನುಭವಿ ರಾಜಕಾರಣಿ ಪ್ರಕಾಶ ಹುಕ್ಕೇರಿ ಅವರಿಗೆ ತಾವು ಮಾಡಿದ ಅಭಿವೃದ್ಧಿ ಕೆಲಸಗಳ ಮೇಲೆ ಹೆಚ್ಚಿನ ವಿಶ್ವಾಸ. ಐದು ವರ್ಷಗಳ ಈ ಅವಧಿಯಲ್ಲಿ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ತಂದಿದ್ದೇನೆಂದು ಹೇಳುವ ಅವರು ಇದೇ ಅಭಿವೃದ್ಧಿ ಕೆಲಸಗಳು ತಮ್ಮ ಕೈಹಿಡಿಯಲಿವೆ ಎಂಬ ವಿಶ್ವಾಸ ಹೊಂದಿದ್ದಾರೆ.

ಕ್ಷೇತ್ರ ವ್ಯಾಪ್ತಿ?: ಅಥಣಿ, ಕಾಗವಾಡ, ರಾಯಬಾಗ, ಕುಡಚಿ, ಚಿಕ್ಕೋಡಿ, ಹುಕ್ಕೇರಿ, ನಿಪ್ಪಾಣಿ, ಯಮಕನಮರಡಿ ವಿಧಾನಸಭೆ ಕ್ಷೇತ್ರ.

ನಿರ್ಣಾಯಕ ಅಂಶ:  ಕ್ಷೇತ್ರದಲ್ಲಿ ಲಿಂಗಾಯತ ಮತದಾರರು ಅಧಿಕವಾಗಿದ್ದಾರೆ. ಹೀಗಾಗಿ ಎರಡೂ ಪ್ರಮುಖ ಪಕ್ಷಗಳು ಇದೇ ಸಮಾಜದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಇವರ ಜತೆಗೆ ಕುರುಬರು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಮತ್ತು ಮರಾಠಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದು ಚುನಾವಣೆಯ ಫಲಿತಾಂಶ ಅದಲು ಬದಲು ಮಾಡುವ ಶಕ್ತಿ ಹೊಂದಿದ್ದಾರೆ. ಇಲ್ಲಿ ಜೆಡಿಎಸ್‌ ಹೆಸರಿಗೆ ಮಾತ್ರ. ಹೀಗಾಗಿ ಮೈತ್ರಿ ಧರ್ಮ ಕಾಣಿಸುವುದೇ ಇಲ್ಲ. ಕಾಂಗ್ರೆಸ್‌ ಹಾಗೂ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಇರುವುದರಿಂದ ಫಲಿತಾಂಶ ಬಹಳ ಕುತೂಹಲ ಮೂಡಿಸಿದೆ.

ಒಟ್ಟು ಮತದಾರರು – 15,79,309
ಪುರುಷರು – 8,06,052
ಮಹಿಳೆಯರು – 7,73,202
ಇತರೆ – 55

ಜಾತಿವಾರು ಲೆಕ್ಕಾಚಾರ
ಲಿಂಗಾಯತರು – 3.90 ಲಕ್ಷ
ಕುರುಬರು – 1.84 ಲಕ್ಷ
ಎಸ್‌ಸಿ – 2 ಲಕ್ಷ
ಎಸ್‌ಟಿ – 1 ಲಕ್ಷ
ಮುಸ್ಲಿಂ – 1.98 ಲಕ್ಷ
ಮರಾಠ – 1.47 ಲಕ್ಷ
ಜೈನ್‌ – 1.03 ಲಕ್ಷ
ಹಣಬರ – 1.04 ಲಕ್ಷ.

* ಕೇಶವ ಆದಿ

ಟಾಪ್ ನ್ಯೂಸ್

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನು ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.