ಮತದಾನ ದಿನ ಎಚ್ಚರಿಕೆ ವಹಿಸಲು ವೀಕ್ಷಕರ ಕರೆ
Team Udayavani, Apr 17, 2019, 6:30 AM IST
ಉಡುಪಿ: ಮತದಾನ ನಡೆಯುವ ದಿನ ಸೂಕ್ಷ್ಮ ಮತ್ತು ಸಮಸ್ಯಾತ್ಮಕ ಮತಗಟ್ಟೆಗಳಿರುವ ಕಡೆಗಳಲ್ಲಿ ಎಲ್ಲ ಸೆಕ್ಟರ್ ಅಧಿಕಾರಿಗಳು ಮತ್ತು ನೋಡೆಲ್ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ವೀಕ್ಷಕ ಕೃಷ್ಣ ಕುನಾಲ್ ತಿಳಿಸಿದ್ದಾರೆ.
ಅವರು ರವಿವಾರ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಲೋಕಸಭಾ ಕ್ಷೇತ್ರದ ಸೆಕ್ಟರ್ ಅಧಿಕಾರಿಗಳು ಹಾಗೂ ವಿವಿಧ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಮತಗಟ್ಟೆಯ 100 ಮೀ. ಒಳಗೆ ಮೊಬೈಲ್ ಬಳಕೆ ನಿಷೇಧಿಸಲಾಗಿದ್ದು, ಕರ್ತವ್ಯದಲ್ಲಿರುವ ಸಿಬಂದಿಗೆ ಮಾತ್ರ ಅನುಮತಿ ಇದೆ. ಆದರೆ ಮತಗಟ್ಟೆ ಒಳಗೆ ಯಾರೂ ಮೊಬೈಲ್ ಬಳಸುವಂತಿಲ್ಲ, 1,400ಕ್ಕೂ ಅಧಿಕ ಮತದಾರರು ಇರುವ ಕಡೆ ಹೆಚ್ಚುವರಿ ಸಿಬಂದಿಯನ್ನು ನಿಯೋಜಿಸಲಾಗುವುದು ಎಂದ ವೀಕ್ಷಕರು, ಸೆಕ್ಟರ್ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುವ ಮತಗಟ್ಟೆ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರಬೇಕು ಎಂದರು.
ಎಸ್ಪಿ ನಿಶಾ ಜೇಮ್ಸ್ ಮಾತನಾಡಿ, ಚುನಾ ವಣ ಕರ್ತವ್ಯಕ್ಕೆ ನಿಯೋಜಿಸಿರುವ ಪೊಲೀಸ್ ಸಿಬಂದಿಗೆ ಅಗತ್ಯ ಸಾಮಗ್ರಿಗಳ ಕಿಟ್, ಕರ್ತವ್ಯದಲ್ಲಿ ನಿರ್ವಹಿಸಬೇಕಾದ ಜವಾಬ್ದಾರಿ ಕುರಿತು ಕೈಪಿಡಿಯನ್ನು ನೀಡಲು ಕ್ರಮ ಕೈಗೊಂಡಿದೆ. ಮತಗಟ್ಟೆಯ ಸಮೀಪ ನಡೆಯುವ ನೀತಿ ಸಂಹಿತೆ ಉಲ್ಲಂಘನೆ ಕುರಿತಂತೆ ತತ್‌ಕ್ಷಣ ಕಂಟ್ರೋಲ್ ರೂಂಗೆ ಮಾಹಿತಿ ನೀಡಿ. ಮತದಾನಕ್ಕೆ 48 ಗಂಟೆ ಮೊದಲು ಕ್ಷೇತ್ರದ ಮತದಾರರಲ್ಲದವರನ್ನು ಹೊರ ಕಳಿಸಿಬೇಕು. ಈ ಬಗ್ಗೆ ಎಲ್ಲ ಹೊಟೇಲ್ ಮತ್ತು ಲಾಡ್ಜ್ ಗಳಲ್ಲಿ ಪರಿಶೀಲಿಸಬೇಕು. ಮತಗಟ್ಟೆಗೆ ಬರುವ ವಾಹನದಲ್ಲಿ ಚಾಲಕ ಸೇರಿ 5 ಮಂದಿಗೆ ಮಾತ್ರ ಅವಕಾಶವಿದ್ದು ಈ ಬಗ್ಗೆ ಪರಿಶೀಲಿಸುವಂತೆ ತಿಳಿಸಿದರು. ಡಿಸಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮಾತ ನಾಡಿ, ಮತಗಟ್ಟೆಯಿಂದ 200 ಮೀ. ಹೊರಗೆ ಮಾತ್ರ ಪಕ್ಷಗಳ ಬೂತ್ ಹಾಕಿಕೊಳ್ಳಲು ಅವ ಕಾಶ ನೀಡಿ. ಮತಗಟ್ಟೆಗೆ ಪದೇ ಪದೇ ಒಂದೇ ವಾಹನದಲ್ಲಿ ಮತದಾರರು ಬರುತ್ತಿ ದ್ದರೆ ಈ ಬಗ್ಗೆ ಕ್ರಮ ಕೈಗೊಳ್ಳಿ. ಮಸ್ಟರಿಂಗ್ ಸಮಯದಲ್ಲಿ ಸಿಬಂದಿ ಸರಿಯಾದ ಸಮಯಕ್ಕೆ ಹಾಜರಾಗಿ, ಮತದಾನದ ದಿನ ಕರ್ತವ್ಯ ಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಿ, ಸೆಕ್ಟರ್ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಿ ಎಂದರು. ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಕಾರ್ಕಳ ವಿಭಾಗದ ಎಎಸ್ಪಿ ಕೃಷ್ಣ ಕಾಂತ್, ಉಡುಪಿ ಎಎಸ್ಪಿ ಕುಮಾರ ಚಂದ್ರ ಉಪಸ್ಥಿತರಿದ್ದರು. ಜಿಲ್ಲಾ ಮಾಸ್ಟರ್ ಟ್ರೆçನರ್ ಅಶೋಕ್ ಕಾಮತ್ ತರಬೇತಿ ನೀಡಿದರು.
ಆಮಿಷದ ಸಾಧ್ಯತೆ
ಮತದಾನಕ್ಕೆ 48 ಗಂಟೆಗಳ ಮುಂಚೆ ಬಹಿರಂಗ ಪ್ರಚಾರ ಅಂತ್ಯಗೊಂಡು, ಅಭ್ಯರ್ಥಿಗಳು ಮನೆ ಮನೆ ಭೇಟಿ ನೀಡಲು ಅವಕಾಶವಿದೆ. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರಿಗೆ ಆಮಿಷ ಒಡ್ಡುವ ಸಾಧ್ಯತೆಗಳಿದ್ದು ಆ ಕುರಿತು ಜಾಗೃತರಾಗಿರಿ. ಎಲ್ಲ ಸೆಕ್ಟರ್ ಅಧಿಕಾರಿಗಳು ಯಾವುದೇ ದೂರು ಬಂದ ಕೂಡಲೇ ಸಂಬಂಧಪಟ್ಟ ತಂಡಗಳೊಂದಿಗೆ ತೆರಳಿ ಕ್ರಮ ಕೈಗೊಳ್ಳಬೇಕು ಎಂದು ಕೃಷ್ಣ ಕುನಾಲ್ ತಿಳಿಸಿದರು.
ಬರದಿದ್ದರೆ ಪರಿಶೀಲಿಸಿ
ಸೂಕ್ಷ್ಮ ಮತ್ತು ಸಮಸ್ಯಾತ್ಮಕ ಮತಗಟ್ಟೆಗಳಿರುವ ಕಡೆಗಳಲ್ಲಿ ಮಧ್ಯಾಹ್ನ 3ರ ವರೆಗೂ ಮತದಾನ ಪ್ರಮಾಣ ಕಡಿಮೆಯಿದ್ದಲ್ಲಿ, ಈ ಭಾಗದ ಮತದಾರರನ್ನು ಯಾರಾದರೂ ಮತಕೇಂದ್ರಕ್ಕೆ ಬರದಂತೆ ತಡೆಯುತ್ತಿದ್ದಾರಾ ಎಂಬ ಕುರಿತು ಪರಿಶೀಲಿಸಬೇಕು. ಮತಗಟ್ಟೆಯಲ್ಲಿನ ಪಕ್ಷ/ಅಭ್ಯರ್ಥಿಗಳ ಏಜೆಂಟ್ ಮೊಬೈಲ್ ಬಳಸದಂತೆ ನೋಡಿಕೊಳ್ಳಬೇಕು. ಮತಗಟ್ಟೆಯ 200 ಮೀ. ಒಳಗೆ ಅನಧಿಕೃತವಾಗಿ ಪ್ರವೇಶಿಸುವವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.