ಪರಿಸರ ಸ್ನೇಹಿ ಚುನಾವಣೆ: ಉಡುಪಿ ಜಿಲ್ಲಾಡಳಿತ ಮಾದರಿ
Team Udayavani, Apr 17, 2019, 6:30 AM IST
ಉಡುಪಿ: ಪರಿಸರ ಸ್ನೇಹಿಯಾದ ಆಡಳಿತಕ್ಕೆ ಹಲವಾರು ಕ್ರಮಗಳನ್ನು ಕೈಗೊಂಡು ಜಾರಿಗೆ ತಂದಿದ್ದ ಉಡುಪಿ ಜಿಲ್ಲಾಡಳಿತವು ಈಗ ಲೋಕಸಭಾ ಚುನಾವಣೆಯನ್ನೂ ಪರಿಸರ ಸ್ನೇಹಿ ನೆಲೆಯಲ್ಲಿ ನಡೆಸುವ ಮೂಲಕ ಇನ್ನೊಂದು ದಿಟ್ಟ ಹೆಜ್ಜೆ ಇರಿಸಿದೆ.
ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟಿಸುವಾಗ ಚುನಾವಣೆಯನ್ನು ಪರಿಸರ ಸ್ನೇಹಿಯಾಗಿ ನಡೆಸಲು ಒತ್ತು ನೀಡುವುದಾಗಿ ದಿಲ್ಲಿಯಲ್ಲಿ ಕೇಂದ್ರ ಚುನಾವಣ ಆಯೋಗದ ಮುಖ್ಯ ಆಯುಕ್ತರು ಪ್ರಕಟಿಸಿದ್ದರು. ಈ ನಿಟ್ಟಿನಲ್ಲಿ ಉಡುಪಿ ಜಿಲ್ಲಾಡಳಿತವು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಚುನಾವಣೆ ಘೋಷಣೆಯ ಆರಂಭದಲ್ಲಿಯೇ ಎಲ್ಲ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳ ಸಭೆ ನಡೆಸಿ ಪರಿಸರ ಸ್ನೇಹಿ ಚುನಾವಣೆ ನಡೆಸಲು ಸಹಕಾರ ಕೋರಿತ್ತು.
ಪರಿಸರ ಸ್ನೇಹಿ ಚುನಾವಣೆ ಭರಾಟೆ
ಈ ಹಿಂದೆ ಚುನಾವಣೆ ಎಂದರೆ ರಸ್ತೆಯುದ್ದಕ್ಕೂ ಬ್ಯಾನರ್, ಬಂಟಿಂಗ್ಸ್, ಪಕ್ಷದ ಧÌಜಗಳು ಸಾಮಾನ್ಯವಾಗಿದ್ದವು. ಆದರೆ ಪ್ರಸ್ತುತ ಉಡುಪಿ ಜಿಲ್ಲೆಯಲ್ಲಿ ಇವು ಅಪರೂಪ. ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಪಡೆದು ಬ್ಯಾನರ್, ಕಟೌಟ್, ಬಂಟಿಂಗ್ಸ್ ಹಾಕಲು ಅವಕಾಶ ಇದ್ದರೂ ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳಿಂದ ಇವುಗಳಿಗೆ ಅನುಮತಿ ಕೋರಿ ಅರ್ಜಿಗಳು ಚುನಾವಣಾಧಿಕಾರಿಗಳ ಕಚೇರಿಗೆ ಬಾರದಿರುವುದು ಗಮನಾರ್ಹ.
ಪರಿಸರದಲ್ಲಿ ವಾಯು ಮಾಲಿನ್ಯ ತಡೆಗಟ್ಟಲು ಯಾವುದೇ ರೀತಿಯ ವಾಹನ ರ್ಯಾಲಿ, ಬೈಕ್ ರ್ಯಾಲಿಗಳಿಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷದ/ಅಭ್ಯರ್ಥಿಗಳ ಸಭೆಯಲ್ಲಿ ಚರ್ಚಿಸಲಾಗಿತ್ತು. ಅಂದು ಪರಿಸರ ಸ್ನೇಹಿ ಚುನಾವಣೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದವರು ಯಾವುದೇ ರ್ಯಾಲಿಗಳಿಗೆ ಜಿಲ್ಲಾಡಳಿತದ ಅನುಮತಿಯನ್ನು ಕೋರದೆ ಪರಿಸರದ ಬಗ್ಗೆ ಕಾಳಜಿಯನ್ನು ಪ್ರದರ್ಶಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಪ್ರಸಕ್ತ ಲೋಕಸಭಾ ಚುನಾವಣೆಯನ್ನು ಪರಿಸರಸ್ನೇಹಿಯಾಗಿ ನಡೆಸಲು ಎಲ್ಲ ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ಸಹಕಾರ ನೀಡಿರುವುದು ಶ್ಲಾಘನೀಯವಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ಪರಿಸರ ಸ್ನೇಹಿ ಚುನಾವಣೆ ಆಚರಣೆಯ ಉದ್ದೇಶದಿಂದ ಜಿಲ್ಲಾಡಳಿತ ವತಿಯಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ವಿವಿಧ ತಾಲೂಕು ಕೇಂದ್ರಗಳಲ್ಲಿ ಆಯೋಜಿಸಿದ್ದ ತರಬೇತಿಯಲ್ಲಿ ಕಾಫಿ, ಟೀ ಕುಡಿಯಲು ಪೇಪರ್‌ನಿಂದ ಮಾಡಿದ ಗ್ಲಾಸ್‌ಗಳು, ಊಟಕ್ಕೆ ಅಡಿಕೆ ಹಾಳೆಯ ತಟ್ಟೆ, ಕುಡಿಯಲು ನೀರಿನ ಕ್ಯಾನ್‌ಗಳನ್ನು ಇಡುವ ಮೂಲಕ ಪ್ಲಾಸ್ಟಿಕ್ ಮುಕ್ತ ತರಬೇತಿ ಕೇಂದ್ರ ಆಯೋಜಿಸಲಾಗಿತ್ತು. ಮತದಾನ ದಿನದಂದು ಕೂಡ ಎಲ್ಲ ಮತಗಟ್ಟೆಗಳಲ್ಲಿ ಇದೇ ವ್ಯವಸ್ಥೆ ಮಾಡಲಾಗಿದೆ. ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲೂ ಯಾವುದೇ ರೀತಿಯ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ಮುಂಜಾಗರೂಕತೆ ವಹಿಸಲಾಗಿದೆ. ಮತಗಟ್ಟೆಗಳಲ್ಲಿ ಮತದಾರರಿಗೆ ಮಾಹಿತಿ ನೀಡಲು ಬಟ್ಟೆಯ ಬ್ಯಾನರ್‌ಗಳನ್ನು ಅಳವಡಿಸಲಾಗುತ್ತಿದೆ. ಮಸ್ಟರಿಂಗ್ ಕೇಂದ್ರದಲ್ಲಿ ಮತಗಟ್ಟೆಗಳಿಗೆ ವಿತರಿಸಲಾಗುವ ಎಲ್ಲ ರೀತಿಯ ಕಿಟ್‌ಗಳನ್ನು ಬಟ್ಟೆಯಲ್ಲಿ ತಯಾರಿಸಿದ ಬ್ಯಾಗುಗಳಲ್ಲಿಯೇ ನೀಡಲು ಸಿದ್ಧತೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.