ಸಂತನ ನೆಲದಲ್ಲಿ ಮತ ರಂಗು


Team Udayavani, Apr 17, 2019, 11:00 AM IST

Udayavani Kannada Newspaper
ಶಿಗ್ಗಾವಿ: ಸಂತ ಶಿಶುನಾಳ ಶರೀಫರ ನೆಲವಾದ ಶಿಗ್ಗಾವಿ-ಸವಣೂರ ಕ್ಷೇತ್ರದಲ್ಲಿ ಧಾರವಾಡ ಲೋಕಸಭಾ ಚುನಾವಣೆ ಕಣ ರಂಗೇರಿದ್ದು, ಪ್ರಚಾರ ಭರಾಟೆ ಭರಪೂರಾಗಿ ನಡೆದಿದೆ.
ಹಾವೇರಿ ಜಿಲ್ಲೆಯ ಶಿಗ್ಗಾವಿ-ಸವಣೂರು ವಿಧಾನ ಸಭಾ ಕ್ಷೇತ್ರ ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರಲಿದೆ. ಬಿಜೆಪಿಯಿಂದ ಪ್ರಹ್ಲಾದ ಜೋಶಿ, ಕಾಂಗ್ರೆಸ್‌ನಿಂದ ವಿನಯ ಕುಲಕರ್ಣಿ ಕಣದಲ್ಲಿದ್ದು, ಇಬ್ಬರ ನಡುವೆ ನೇರ ಹಣಾಹಣಿ ನಡೆಯಲಿದೆ.
ಹೀಗಾಗಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳ ಮುಖಂಡರು, ಕಾರ್ಯಕರ್ತರು ಬೇಸಿಗೆಯ ಬಿರು ಬಿಸಿಲಲ್ಲೂ ಭರದ ಪ್ರಚಾರ ನಡೆಸಿದ್ದಾರೆ.
ಸ್ಥಳೀಯವಾಗಿ ಶಾಸಕ ಬಸವರಾಜ ಬೊಮ್ಮಾಯಿ ಇದ್ದಾರೆ. ಬಿಜೆಪಿಯಲ್ಲಿ ಹಿರಿಯ ಮುಖಂಡರೆನಿಸಿರುವ ಬೊಮ್ಮಾಯಿ ತಮ್ಮ ಕ್ಷೇತ್ರದಲ್ಲಿ ಹೆಚ್ಚು ಮತಗಳನ್ನು ಸೆಳೆದು ಪ್ರಹ್ಲಾದ ಜೋಶಿಯವರ ಪೆಟ್ಟಿಗೆಗೆ ಹಾಕಿಸಲು ಕ್ಷೇತ್ರ ಸಂಚಾರ ನಡೆಸಿದ್ದಾರೆ.
ಬಿಜೆಪಿಯಿಂದ ಸ್ಟಾರ್‌ ಪ್ರಚಾರಕಾಗಿ ನಟಿ ಶೃತಿ ಬಂದಿದ್ದು ಬಿಟ್ಟರೆ ಬೇರೆ ಯಾರೂ ಬಂದಿಲ್ಲ. ಕಾಂಗ್ರೆಸ್‌ನಲ್ಲಿ ಟಿಕೆಟ್‌ ಹಂಚಿಕೆ ಗೊಂದಲ ಏರ್ಪಟ್ಟು ತಡವಾಗಿ ವಿನಯ ಕುಲಕರ್ಣಿಯವರಿಗೆ ಟಿಕೆಟ್‌ ಘೋಷಣೆ ಯಾಗಿದ್ದರಿಂದ ಪ್ರಚಾರದಲ್ಲಿ ಕಾಂಗ್ರೆಸ್‌ ತುಸು ಹಿಂದೆ ಬೀಳುವಂತಾಯಿತು.
ಬಿಜೆಪಿಯವರು ಪ್ರಧಾನಿ ಮೋದಿಯವರ ಸಾಧನೆ, ಕೇಂದ್ರ ಸರ್ಕಾರದ ಯೋಜನೆ, ಪಕ್ಷದ ಪ್ರಣಾಳಿಕೆ, ಕ್ಷೇತ್ರದಲ್ಲಿ ಶಾಸಕ
ಬಸವರಾಜ ಬೊಮ್ಮಾಯಿ ಅವರಿಂದಾದ ಪ್ರಗತಿ, ಬಿಜೆಪಿ ಅಧಿಕಾರದಲ್ಲಿದ್ದಾಗ ಆಗಿರುವ ಅಭಿವೃದ್ಧಿಯನ್ನು ಪ್ರಸ್ತಾಪಿಸಿ ಮತಬೇಟೆಯಲ್ಲಿ ತೊಡಗಿದ್ದಾರೆ.
ಪ್ರಹ್ಲಾದ ಜೋಶಿಯವರು ಚುನಾವಣೆ ಬಂದಾಗ ಮಾತ್ರ ಕ್ಷೇತ್ರದ ಜನರಿಗೆ ಮುಖ ತೋರಿಸುತ್ತಾರೆ ಎಂಬ ಆರೋಪ
ಚುನಾವಣೆ ಆರಂಭದ ದಿನಗಳಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಂದ ಕೇಳಿಬಂದಿತ್ತು. ಈ ಆರೋಪದ ಆಕ್ರೋಶವನ್ನು ಬೊಮ್ಮಾಯಿಯವರು ಶಮನ ಮಾಡುವಲ್ಲಿ ಯಶಸ್ವಿಯಾಗಿದ್ದು, ಎಲ್ಲರೂ “ಈ ಬಾರಿ ಮತ್ತೂಮ್ಮೆ ಮೋದಿ’ ಎಂದು ಮತ ಪ್ರಚಾರದಲ್ಲಿ ತೊಡಗಿದ್ದಾರೆ.
ಕಾಂಗ್ರೆಸ್‌ ಅಭ್ಯರ್ಥಿ ವಿನಯ ಕುಲಕರ್ಣಿ ಧಾರವಾಡ ಗ್ರಾಮೀಣ ಶಾಸಕರಾಗಿ ಹಿಂದಿನ ಅವಧಿಯಲ್ಲಿ ರಾಜ್ಯ ಸರ್ಕಾರದ ಮಂತ್ರಿಮಂಡಲದಲ್ಲಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಾಧನೆ ಮತ್ತು ಅಭಿವೃದ್ಧಿಯನ್ನು ಪ್ರಚುರ ಪಡಿಸಿ ಅವುಗಳನ್ನು ಮತಗಳನ್ನಾಗಿ ಪರಿವರ್ತಸುವ ಪ್ರಯತ್ನ ನಡೆಸಿದ್ದಾರೆ.
ಮೈತ್ರಿ ಸರ್ಕಾರದ ಯೋಜನೆ, ಪಕ್ಷದ ಪ್ರಣಾಳಿಕೆ ಕ್ಷೇತ್ರದಲ್ಲಿ ಜತೆಗೆ ಶೇ. 40ರಷ್ಟಿರುವ ಲಿಂಗಾಯಿತ ಮತಗಳನ್ನು ಸೆಳೆಯಲು ತಂತ್ರಗಾರಿಕೆ ನಡೆಸಿದ್ದಾರೆ. ಪ್ರಧಾನಿ ಮೋದಿ ಸರ್ಕಾರದ ಆಡಳಿತ ವೈಫಲ್ಯಗಳನ್ನೇ ಪ್ರಚಾರದ ವಸ್ತುವನ್ನಾಗಿ ಬಳಸುತ್ತಿದ್ದಾರೆ. ಕ್ಷೇತ್ರದಲ್ಲಿ ಅಭ್ಯರ್ಥಿಗಿಂತ ಅಭ್ಯರ್ಥಿ ಬೆಂಬಲಿಗರು ಹಾಗೂ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಮನೆ ಮನೆ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.
ಕ್ಷೇತ್ರದಲ್ಲಿ ಕೃಷಿಕರೇ ಹೆಚ್ಚಾಗಿದ್ದು, ಯಾವ ಪಕ್ಷ ಈ ವರೆಗೆ ರೈತರಿಗೆ ಅನುಕೂಲ ಕಲ್ಪಿಸಿದೆ, ಎರಡೂ ಪಕ್ಷಗಳು ರೈತರ ವಿಚಾರಗಳ ಬಗ್ಗೆ ತಮ್ಮ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿದ್ದು, ಯಾವ ಪಕ್ಷವನ್ನು ಬೆಂಬಲಿಸಿದರೆ  ರೈತರಿಗೆ ಅನುಕೂಲ ಆಗಬಹುದು ಎಂಬ ಚಿಂತನೆಯಲ್ಲಿ ತೊಡಗಿದ್ದಾರೆ. ಯಾವ ರಾಜಕೀಯ ಪಕ್ಷ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಕ್ಷೇತ್ರಕ್ಕೆ ಏನು ಕೊಡುಗೆ ನೀಡಿವೆ ಎಂಬುದರ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.
ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಕ್ಷೇತ್ರಕ್ಕೆ ಬಹಳಷ್ಟು ಅನುದಾನ ಬಂದಿದೆ. ರಸ್ತೆ, ಮನೆಯಂಥ ಸೌಲಭ್ಯಗಳು ಹೆಚ್ಚಾಗಿವೆ ಎಂದು ಬಿಜೆಪಿಯವರು ವಾದಿಸಿದರೆ, ಕಾಂಗ್ರೆಸ್‌ನವರು ಸಹ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಕ್ಷೇತ್ರದ ಹೆಚ್ಚು ಜನರಿಗೆ ಅನುಕೂಲವಾಗುವ ಯೋಜನೆ ಸಿಕ್ಕಿದೆ ಎಂಬ ವಾದ ಮಂಡಿಸುತ್ತಿದ್ದಾರೆ. ಎರಡೂ
ಪಕ್ಷಗಳ ವಾದಗಳನ್ನು ಆಲಿಸುತ್ತಿರುವ ಕ್ಷೇತ್ರದ ಮತದಾರ ಯಾರಿಗೆ ಮಣೆ ಹಾಕುತ್ತಾನೆ ಎಂಬುದು ನಿಗೂಡ
ಜಿಲ್ಲೆ ಹಾವೇರಿಯಾದರೂ ಶಿಗ್ಗಾವಿ-ಸವಣೂರು ವಿಧಾನ ಸಭಾ ಕ್ಷೇತ್ರ ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯದ್ದು. ಹ್ಯಾಟ್ರಿಕ್‌ ಗೆಲುವಿನ ಸರದಾರ ಪ್ರಹ್ಲಾದ ಜೋಶಿ ಅವರ ಮತ್ತೂಂದು ಗೆಲುವಿಗೆ ಬಿಜೆಪಿ ಮುಖಂಡರು ಶ್ರಮಿಸುತ್ತಿದ್ದರೇ. ಶತಾಯಗತಾಯ ಈ ಬಾರಿ ಕ್ಷೇತ್ರವನ್ನು “ಕೈ’ವಶ ಮಾಡಿಕೊಳ್ಳಲೇ ಬೇಕು ಎಂದು ವಿನಯ ಕುಲಕರ್ಣಿ ಪಣ ತೊಟ್ಟಿದ್ದಾರೆ. ಮತದಾರನ ಒಲವು
ಮತ ಬಲ ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ 544857 ಮತಗಳು, ಕಾಂಗ್ರೆಸ್‌ ಗೆ 431509 ಮತಗಳು
ಬಿದ್ದಿದ್ದವು. 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ 83868 ಮತಗಳು, ಕಾಂಗ್ರೆಸ್‌ಗೆ 74603 ಮತಗಳು ಬಿದ್ದಿದ್ದವು.

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Untitled-1

Missing case: ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ; ದೂರು ದಾಖಲು

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.