ಸರ್ವಾಧಿಕಾರಿ ಮೋದಿಗೆ ಸೋಲಿನ ರುಚಿ ತೋರಿಸಿ


Team Udayavani, Apr 17, 2019, 5:07 PM IST

cta-

ಚಿತ್ರದುರ್ಗ: ಹಸಿ ಸುಳ್ಳಿನ ಸರದಾರ ಹಾಗೂ ಮಾತಿನ ಮೋಡಿಗಾರ ಮೋದಿಯವರನ್ನು ಸೋಲಿಸಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಚುನಾವಣೆಯಲ್ಲಿ ಮೋದಿ ಗೆದ್ದರೆ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಕೆಲಸ ಮಾಡಲಿದ್ದಾರೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಮುಖ್ಯಮಂತ್ರಿ ಚಂದ್ರು ಆತಂಕ ವ್ಯಕ್ತಪಡಿಸಿದರು.

ಇಲ್ಲಿನ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ
ಮೋದಿ ಸರ್ವಾಧಿ ಕಾರಿಯಾಗಿದ್ದು ಚುನಾವಣೆಯಲ್ಲಿ ಅವರಿಗೆ ಸೋಲಿನ ರುಚಿ ತೋರಿಸಕಿದೆ. ಈ ದೇಶವನ್ನು ಕಾಂಗ್ರೆಸ್‌ ಉಳಿಸಿದ್ದರಿಂದಲೇ ಮೋದಿ ಪ್ರಧಾನಿಯಾಗಲು ಸಾಧ್ಯವಾಗಿದೆ. ಸಂವಿಧಾನದ ಆಶಯ ಮತ್ತು ಅರ್ಥವೇ ಬಿಜೆಪಿ ಮತ್ತು ಮೋದಿಗೆ ಗೊತ್ತಿಲ್ಲ.

ರಾಜ್ಯದ 28 ಕ್ಷೇತ್ರಗಳಲ್ಲಿ ಹಿಂದುಳಿದವರಿಗೆ ಸ್ಪರ್ಧಿಸಲು ಒಂದು ಕ್ಷೇತ್ರದಲ್ಲಿಯೂ ಮೋದಿ ಅವಕಾಶ ಕೊಟ್ಟಿಲ್ಲ. ಶ್ರೀಮಂತರ ಪರವಾಗಿರುವ ಮೋದಿಯಿಂದ ದೇಶದ ಬಡವರು, ರೈತರು, ದಲಿತರು, ಕೂಲಿ ಕಾರ್ಮಿಕರಿಗೆ ಎಂದಿಗೂ ಒಳ್ಳೆಯದಾಗುವುದಿಲ್ಲ ಎಂದು ಎಚ್ಚರಿಸಿದರು. ಚುನಾವಣೆಯಲ್ಲಿ ಆಯಾ ಪಕ್ಷದ ಸಾಧನೆ ಮುಂದಿಟ್ಟು ಮತ ಕೇಳಲಿ. ಆದರೆ ಬಿಜೆಪಿ ವ್ಯಕ್ತಿಗತ ನಿಂದನೆ, ಅಶ್ಲೀಲ ಪದಗಳ ಬಳಕೆ, ಅಸಂಸ್ಕೃತ ನಡವಳಿಕೆ ತೋರುತ್ತಿರುವುದನ್ನು ಖಂಡಿಸುತ್ತೇವೆ. ಯುಪಿಎ ಸರ್ಕಾರ ರೈತರ 72 ಸಾವಿರ ಕೋಟಿ ರೂ. ಸಾಲವನ್ನು ಒಂದೇ ಸಲ ಮನ್ನಾ ಮಾಡಿದರೆ, ಮೋದಿ ಶ್ರೀಮಂತರು ಮತ್ತು ಉದ್ಯಮಿಗಳ 2.31 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದ್ದಾರೆ ಎಂದು ಆರೋಪಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ| ಎಸ್‌.ಜಿ. ಸಿದ್ದರಾಮಯ್ಯ ಮಾತನಾಡಿ, ಇಂದಿರಾ ಗಾಂಧಿ  ಕಾಲದ ತುರ್ತು ಪರಿಸ್ಥಿತಿಗಿಂತಲೂ ಈಗಿನ ಅಘೋಷಿತ ತುರ್ತು ಪರಿಸ್ಥಿತಿ ಘೋರವಾಗಿದೆ. ಇದಕ್ಕೆ ಹಿಟ್ಲರ್‌ ಧೋರಣೆಯ ಪ್ರಧಾನಿ ಮೋದಿಯೇ ಕಾರಣ. ಬಡವರನ್ನು ಕಡೆಗಣಿಸಿರುವ ಮೋದಿ ಬಂಡವಾಳಶಾಹಿ, ಕಾರ್ಪೊರೆಟ್‌ ಕಂಪನಿಗಳ ಪರವಾಗಿದ್ದಾರೆ. ಸುಳ್ಳುಗಳ ಸರದಾರನ ಮುಖವಾಡ ಕಳಚಬೇಕಿದೆ ಎಂದರು.

ಬಹುತ್ವ ಭಾರತದ ಅನನ್ಯತೆ, ವಿಶೇಷತೆ, ಬಹುಭಾಷೆಯ ಸಂಸ್ಕೃತಿ ನಾಶವಾಗುತ್ತಿದೆ. ದೇಶದದಲ್ಲಿ ತುರ್ತು ಪರಿಸ್ಥಿತಿ ಇದ್ದಾಗ ದೇಶದ ಬಹುತ್ವ ನಾಶವಾಗಿರಲಿಲ್ಲ. ಐದು ವರ್ಷಗಳಿಂದ ಮೋದಿಯಿಂದ ಪ್ರಭುತ್ವವೇ ನಾಶವಾಗಿದೆ. ದೇಶ ರಾಷ್ಟ್ರೀಕರಣದಿಂದ ಖಾಸಗೀಕರಣದತ್ತ ಹೆಜ್ಜೆ ಹಾಕುತ್ತಿದೆ. ಇಪ್ಪತ್ತು ಅಂಶಗಳ ಕಾರ್ಯಕ್ರಮ, ಭೂಸುಧಾರಣೆ, ಉಚಿತ ಶಿಕ್ಷಣ, ಕಡ್ಡಾಯ ಶಿಕ್ಷಣ ಇವುಗಳೆಲ್ಲ ಕಾಂಗ್ರೆಸ್‌ ಕೊಡುಗೆ ಎನ್ನುವುದನ್ನು ಮರೆಯಬಾರದು ಎಂದು ತಿಳಿಸಿದರು.

ನಿವೃತ್ತ ಐಎಎಸ್‌ ಅಧಿಕಾರಿ ರುದ್ರಪ್ಪ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಫಾತ್ಯರಾಜನ್‌ ಇತರರು ಇದ್ದರು. ಚುನಾವಣೆಯಲ್ಲಷ್ಟೇ ಬಿಜೆಪಿಗೆ ರಾಮಮಂದಿರ ನೆನಪು ಬಿಜೆಪಿಯವರು ಐದು ವರ್ಷ ಸುಮ್ಮನಿದ್ದು ಚುನಾವಣೆ ಸಮಯದಲ್ಲಿ ರಾಮ ಮಂದಿರ ಜಪ ಮಾಡುತ್ತಾರೆ. ಏಕೆ ರಾಮಮಂದಿರ ಕಟ್ಟಲಿಲ್ಲ, ರಾಮಮಂದಿರ ಕಟ್ಟಲು ಬೇಡ ಎಂದವರು ಯಾರು, ಈಗ ಏಕೆ ರಾಜ್ಯದಲ್ಲಿ ಐಟಿ ದಾಳಿ ನಡೆಯುತ್ತಿದೆ, ಜಿಎಸ್‌ಟಿ ವಿರೋ ಧಿಸಿದವರು ಅದನ್ನೇ ಏಕೆ ಜಾರಿಗೆ ತಂದಿದ್ದಾರೆ ಎಂದು ಮುಖ್ಯಮಂತ್ರಿ ಚಂದ್ರು ಪ್ರಶ್ನೆಗಳ ಸುರಿಮಳೆಗೈದರು. ಐದು ವರ್ಷದಲ್ಲಿ ಮೋದಿ ಕೇವಲ 19 ದಿನ ಮಾತ್ರ ಸಂಸತ್‌ನಲ್ಲಿದ್ದರು. 106 ಬಾರಿ ವಿದೇಶಕ್ಕೆ ಹೋಗಿ ಎರಡು ಸಾವಿರ ಕೋಟಿ ರೂ. ಖರ್ಚು ಮಾಡಿದ್ದಾರೆ. ಇವರು ಪ್ರಜಾತಂತ್ರ ವ್ಯವಸ್ಥೆ ಹಾಳು ಮಾಡುವವರು ಎಂದು ಕಿಡಿ ಕಾರಿದರು.

ಟಾಪ್ ನ್ಯೂಸ್

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

Kiran Raj will be a superhero in next film

Kiran Raj: ಸೂಪರ್‌ ಹೀರೋ ಆಗಲಿದ್ದಾರೆ ಕಿರಣ್‌ ರಾಜ್‌

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

Kiran Raj will be a superhero in next film

Kiran Raj: ಸೂಪರ್‌ ಹೀರೋ ಆಗಲಿದ್ದಾರೆ ಕಿರಣ್‌ ರಾಜ್‌

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.