ಕುಡಿವ ನೀರಿನ ಸಮಸ್ಯೆ ಪರಿಹಾರಕ್ಕೆ ಒತ್ತಾಯ
Team Udayavani, Apr 17, 2019, 5:17 PM IST
ಸೊರಬ: ಹಲವು ದಿನಗಳಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು ಪಟ್ಟಣದ ಕಾನಕೇರಿ ಬಡಾವಣೆಯ ನಿವಾಸಿಗಳು ನೀರಿನ ಸಮಸ್ಯೆ ನೀಗಿಸುವಂತೆ ಖಾಲಿ ಕೊಡ ಹಿಡಿದು ಪಪಂ ಮುಂಭಾಗದಲ್ಲಿ ಮಂಗಳವಾರ ದಿಢೀರನೆ ಪ್ರತಿಭಟನೆ ನಡೆಸಿದರು.
ಕಳೆದ 15 ದಿನಗಳಿಂದ ಪಟ್ಟಣದ ಕಾನಕೇರಿಬಡಾವಣೆಯ ಹಲವಾರು ವಾರ್ಡ್‌ಗಳಲ್ಲಿ ಕುಡಿಯುವ ನೀರಿಲ್ಲದೇ ಜನ ಪರದಾಡುತ್ತಿದ್ದಾರೆ. ಸಮರ್ಪಕ ನೀರಿನ ವ್ಯವಸ್ಥೆ ಇದ್ದಾಗಲೂ ವಾರಕ್ಕೊಮ್ಮೆ ನೀರು ಸರಬರಾಜು ಮಾಡುತ್ತಿದ್ದ ಪಪಂ ಆಡಳಿತ ಬೇಸಿಗೆ ಪ್ರಾರಂಭವಾಗುತ್ತಿದ್ದಂತೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಆಗುವ ಅಭಾವ ತಪ್ಪಿಸಲು ಮುಂಜಾಗ್ರತೆಯಾಗಿ ಕ್ರಮ ಕ್ರಮ ಕೈಗೊಳ್ಳದಿರುವುದು ಇಷ್ಟೆಲ್ಲಾ ಸಮಸ್ಯೆಗೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.
ನೀರಿನ ಅವ್ಯವಸ್ಥೆ ಬಗ್ಗೆ ಮುಖ್ಯಾಧಿಕಾರಿಗಳ ಗಮನಕ್ಕೆ ತಂದರೆ ಸರ್ವೆ ನಂ 113ರಲ್ಲಿರುವ ವಾರ್ಡ್‌ಗಳು ನನ್ನ ವ್ಯಾಪ್ತಿಗೆ ಬರುವುದಿಲ್ಲ. ನೀವು ತಹಶೀಲ್ದಾರ್ ಅವರ ಬಳಿ ನಿಮ್ಮ ಸಮಸ್ಯೆ ಬಗ್ಗೆ ಹೇಳಿಕೊಳ್ಳಿ ಎಂದು ಹೇಳುವುದಲ್ಲದೇ, ನೀರನ್ನು ಅಂಗಡಿಯಲ್ಲಿ ಖರೀದಿ ಮಾಡಿಕೊಡಬೇಕೆ ಎಂಬ ಉಡಾಫೆ ಉತ್ತರ ನೀಡುತ್ತೀರಿ. ಜನರಿಗೆ ಸ್ಪಂದಿಸುವ ಮನೋಭಾವ ನಿಮಗೆ ಇಲ್ಲದಿದ್ದರೆ ಕೆಲಸಕ್ಕೆ ರಾಜೀನಾಮೆ ಕೊಡಿ ಎಂದು ಪ್ರತಿಭಟನಾಕಾರರು ಮುಖ್ಯಾಧಿಕಾರಿ ಜಗದೀಶ ನಾಯಕ್ ಅವರನ್ನು ತರಾಟೆಗೆ ತೆಗೆದುಕೊಂಡರು.
ಕುಡಿಯುವ ನೀರಿಗಾಗಿ ಪಪಂ ತಾಲೂಕಿನ ವರದಾ ನದಿಗೆ ಅಡ್ಡಲಾಗಿ ಒಡ್ಡು ನಿರ್ಮಿಸಿ ಪಟ್ಟಣಕ್ಕೆ ನೀರು ಸರಬರಾಜು ಮಾಡುತ್ತಿದ್ದು, ಈ ತಾತ್ಕಾಲಿಕ ವ್ಯವಸ್ಥೆಗೆ ವರ್ಷಕ್ಕೆ ಲಕ್ಷಾಂತರ ರೂಪಾಯಿ ಹಣ ವ್ಯಯ ಮಾಡಲಾಗುತ್ತಿದೆ. ಈಗಾಗಲೇ ನದಿಯಲ್ಲಿ ನೀರು ಬರಿದಾಗಿದೆ. ಆದರೆ ಪರ್ಯಾಯವಾಗಿ ಹೆಚ್ಚಿನ ಕೊಳವೆ ಬಾವಿಗಳನ್ನು ಕೊರೆಸಿ ಪಟ್ಟಣದಲ್ಲಿ ಎದುರಾಗಿರುವ ನೀರಿನ ಬವಣೆ ನೀಗಿಸಲು ಮುಂದಾಗದೆ ವಿದ್ಯುತ್ ಸಮಸ್ಯೆ ಮುಂದಿಟ್ಟು ಜನರ ಜೀವನದ ಜೊತೆ ಚೆಲ್ಲಾಟವಾಡುವುದು ಸರಿಯೇ ಎಂದು ಪ್ರಶ್ನಿಸಿದರು.
ಇಡಗೋಡು ಇಸ್ಮಾಯಿಲ್, ರೇವಣಪ್ಪ, ನಾಗರಾಜ್, ರವಿ, ಅನ್ನೀಸ್, ನಜೀರ್ ಸಾಬ್, ಬಾಷಾ, ಜಗದೀಶ್, ರಾಜು, ರಾಮಪ್ಪ, ಗುರುರಾಜ, ರಾಜೇಶ್ ಮತ್ತಿತರರು ಪ್ರತಿಭಟನೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.