ಚುನಾವಣಾ ಅಕ್ರಮ ತಡೆಗೆ ಹದ್ದಿನ ಕಣ್ಣು

Team Udayavani, Apr 18, 2019, 3:00 AM IST

chun-akrama

ಹಾಸನ: ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳು ಮತದಾರಿಗೆ ಹಣ ಹಂಚಿಕೆ ಸೇರಿದಂತೆ ಯಾವುದೇ ಅಕ್ರಮ ನಡೆಸದಂತೆ ಚುನಾವಣಾ ಆಯೋಗವು ಹದ್ದಿನ ಕಣ್ಣಿರಿಸಿದ್ದು, ಮುಕ್ತ ಮತ್ತು ಪಾರದರ್ಶಕ ಚುನಾವಣೆ ನಡೆಸಲು ಸರ್ವ ಕ್ರಮಗಳನ್ನು ಕೈಗೊಂಡಿದೆ ಎಂದು ರಾಜ್ಯ ಚುನಾವಣಾ ಆಯೋಗದ ಜಾರಿ ವಿಭಾಗದ ವಿಶೇಷ ಅಧಿಕಾರಿ ಮನಿಷ್‌ ಮೌದ್ಗಿಲ್‌ ಅವರು ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾನದ ದಿನದಂದು 10 ರಿಂದ 12 ಮತಗಟ್ಟೆಗಳಿಗೆ ಒಬ್ಬರಂತೆ ಒಟ್ಟು 237 ಸೆಕ್ಟರ್‌ ಅಧಿಕಾರಿಗಳನ್ನು ನೇಮಿಸಿದ್ದು, ಅವರಿಗೆ ಮ್ಯಾಜಿಸ್ಟ್ರೀರಿಯಲ್‌ ಅಧಿಕಾರವನ್ನು ನೀಡಲಾಗಿದೆ. ಈ ಅಧಿಕಾರಿಗಳು ನಿಗದಿಪಡಿಸಿದ ಮತಗಟ್ಟೆ ವ್ಯಾಪ್ತಿಯಲ್ಲಿ ಸಂಚರಿಸಿ ಅಕ್ರಮಗಳು ನಡೆದಯದಂತೆ ನೋಡಿಕೊಳ್ಳುವರು ಎಂದು ತಿಳಿಸಿದರು.

ಅಕ್ರಮದ ಬಗ್ಗೆ ದೂರು ನೀಡಿ: ಅಭ್ಯರ್ಥಿಗಳು, ಅವರ ಬೆಂಬಲಿಗರು, ಯಾವುದೇ ರಾಜಕೀಯಪಕ್ಷಗಳ ಕಾರ್ಯಕರ್ತರು ಹಣ ಹಂಚಿಕೆ, ಮದ್ಯ ಹಂಚಿಕೆ ಅಥವಾ ಯಾವುದೇ ಅಮಿಷಗಳನ್ನು ಮತದಾರಿಗೆ ನೀಡಿದರೆ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಕಚೇರಿಯ ಕಂಟ್ರೋಲ್‌ ರೂಂ. ದೂ. 08172 -251028/ 261028, ಮತದಾರರ ಸಹಾಯವಾಣಿ ಕೇಂದ್ರ 1950 ಕ್ಕೆ ಮಾಹಿತಿ ನೀಡಿದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದರು.

18 ಪ್ರಕರಣಗಳು ದಾಖಲು: ಕೆಲವರು ದುರುದ್ದೇಶದಿಂದ ಹಾಗೂ ಅಧಿಕಾರಿಗಳನ್ನು ದಾರಿ ತಪ್ಪಿಸಲು ಮಾಹಿತಿ ನೀಡುವ ಸಾಧ್ಯತೆ ಇರುತ್ತದೆ. ಈ ಬಗ್ಗೆ ಜಿಲ್ಲಾಡಳಿತವು ಪರಿಶೀಲಿಸಿ ತಕ್ಷಣ ಕ್ರಮ ಕೈಗೊಳ್ಳುವುದು ಎಂದ ಅವರು, ಇದುವರೆಗೂ ಹಾಸನ ಲೋಕಸಭಾ ಕ್ಷೇತ್ರದ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ 23.48 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆಯ 18 ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ವಿವರ ನೀಡಿದರು.

ಜಿಲ್ಲಾಡಳಿತ ಸಜ್ಜು: ಹಾಸನ ಜಿಲ್ಲೆಯಲ್ಲಿ ಮತದಾನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿದ್ದು, ಎಲ್ಲಾ ಮತಗಟ್ಟೆಗಳಿಗೂ ಸಿಬ್ಬಂದಿ ತೆರಳಿದ್ದಾರೆ. ಮತಯಂತ್ರಗಳಲ್ಲಿ ಲೋಪ ಕಂಡು ಬಂದರೆ ತಕ್ಷಣವೇ ಬದಲಿ ಮತಯಂತ್ರದ ವ್ಯವಸ್ಥೆ ಮಾಡಲೂ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌, ಎಸ್ಪಿ ಚೇತನ್‌ಸಿಂಗ್‌ ರಾಥೋಡ್‌ ಅವರೂ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.