ಇಂದಿನ ಮತದಾನಕ್ಕೆ ಮಳೆರಾಯ ಅಡ್ಡಿ ಸಾಧ್ಯತೆ!
Team Udayavani, Apr 18, 2019, 3:00 AM IST
ಬೆಂಗಳೂರು: ಬಿರು ಬೇಸಿಗೆಯ ನಡುವೆ ಬುಧವಾರದ ಮಳೆ ರಾಜ್ಯದ ಜನತೆಗೆ ತಂಪೆರೆದಿದ್ದು, ಗುರುವಾರವೂ ಮಳೆ ಮುಂದುವರಿಯುವ ಹಿನ್ನೆಲೆಯಲ್ಲಿ ಮತದಾರರು ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಮಧ್ಯಾಹ್ನದೊಳಗೆ ಮತದಾನದ ಹಕ್ಕು ಚಲಾಯಿಸುವುದು ಉತ್ತಮ.
ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುರುವಾರ ಲೋಕಸಭಾ ಚುನಾವಣೆ ನಡೆಯಲಿದ್ದು, ಮತದಾನಕ್ಕೆ ಮಳೆರಾಯ ಅಡ್ಡಿಪಡಿಸುವ ಸಾಧ್ಯತೆಯಿದೆ. ಮಧ್ಯಾಹ್ನ 3 ಗಂಟೆ ನಂತರ ಚುನಾವಣೆ ನಡೆಯಲಿರುವ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಬೆಳಗ್ಗೆ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವುದು ಉತ್ತಮ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ಒಳನಾಡಿನ ಹಲವು ಜಿಲ್ಲೆಗಳಲ್ಲಿ ಕಳೆದ ಹಲವು ದಿನಗಳಿಂದ ಮಳೆಯಾಗುತ್ತಿದ್ದು, ಬುಧವಾರ ತಮಿಳುನಾಡಿಗೆ ಹೊಂದಿಕೊಂಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಗುರುವಾರವೂ ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಗುಡುಗು, ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನಿಂದ ಕನ್ಯಾಕುಮಾರಿಯವರೆಗೆ ನಿರ್ಮಾಣವಾಗಿರುವ ಕಡಿಮೆ ಒತ್ತಡದ ತಗ್ಗು (ಟ್ರಫ್) ಹಾಗೂ ಮೇಲ್ಮೆ„ ಸುಳಿಗಾಳಿಯ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಅದರಲ್ಲಿಯೂ ತಮಿಳುನಾಡಿಗೆ ಹತ್ತಿರವಿರುವ ಆನೇಕಲ್, ರಾಮನಗರ, ಕೋಲಾರ, ಚಾಮರಾಜನಗರ, ಬೆಂಗಳೂರು,
ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಗುರುವಾರ ಮಧ್ಯಾಹ್ನ ನಂತರ ಈ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ನಿರ್ದೇಶಕ ಶ್ರೀನಿವಾಸ ರೆಡ್ಡಿ ಮಾಹಿತಿ ನೀಡಿದರು.
ಎಲ್ಲೆಲ್ಲಿ,ಎಷ್ಟು ಮಳೆ?: ಗುರುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಜೋರು ಗಾಳಿಯೊಂದಿಗೆ ಆರಂಭವಾದ ಮಳೆಯಿಂದಾಗಿ ಹತ್ತಾರು ಮರಗಳು ಧರೆಗುರುಳಿದ್ದು, ಚಾಮರಾಜನಗರದಲ್ಲಿ 34.50 ಹಾಗೂ ಬೆಂಗಳೂರು ನಗರದಲ್ಲಿ 24.50 ಮಿಲಿ ಮೀಟರ್ ಮಳೆಯಾಗಿದೆ.
ಉಳಿದಂತೆ ಬೆಂಗಳೂರು ಗ್ರಾಮಾಂತರ 20.50, ರಾಮನಗರ 26.50, ಕೋಲಾರ 12.50, ಚಿಕ್ಕಬಳ್ಳಾಪುರ 17.50, ತುಮಕೂರು 3, ಚಾಮರಾಜನಗರ 34.50, ಮೈಸೂರು 7, ಮಂಡ್ಯ 6.60, ಬಳ್ಳಾರಿ 1.3, ಬೆಳಗಾವಿ 2.50, ಬಾಗಲಕೋಟೆ 2, ಧಾರವಾಡ 4, ಹಾಸನ 18, ಚಿಕ್ಕಮಗಳೂರು 1.50, ಕೊಡಗು 5, ಕೊಪ್ಪಳ, ಕಲಬುರಗಿ, ಬೀದರ್ ಹಾಗೂ ಹಾವೇರಿಯಲ್ಲಿ ತಲಾ 0.50 ಮಿ.ಮೀ. ಮಳೆಯಾಗಿದೆ. ಮುಂದಿನ 48 ಗಂಟೆಗಳಲ್ಲಿ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಮಳೆಗೆ ಇಬ್ಬರು ಬಲಿ
ಬೆಂಗಳೂರು: ರಾಜಧಾನಿಯಲ್ಲಿ ಬುಧವಾರ ಸಂಜೆ ಸುರಿದ ಭಾರೀ ಮಳೆಗೆ ಇಬ್ಬರು ಯುವಕರು ಬಲಿಯಾಗಿದ್ದು 13 ಕ್ಕೂ ಹೆಚ್ಚು ಮರಗಳು ಧರೆಗುರುಳಿವೆ. ಹೆಬ್ಟಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಲುಂಬಿನಿ ಗಾರ್ಡನ್ ಬಳಿ ದ್ವಿಚಕ್ರ ವಾಹನದ ಮೇಲೆ ಮರದ ಕೊಂಬೆ ಬಿದ್ದ ಪರಿಣಾಮ ಕೋರಿಯರ್ ಸಂಸ್ಥೆ ಉದ್ಯೋಗಿ ಕಿರಣ್ (28) ಮೃತಪಟ್ಟಿದ್ದಾನೆ.
ಮತ್ತೂಂದು ಪ್ರಕರಣದಲ್ಲಿ ಜಾಲಹಳ್ಳಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಎಂಜಿನಿಯರಿಂಗ್ ವಿದ್ಯಾರ್ಥಿ ಆಶೀಶ್ ವರ್ಮಾ (21) ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.