“ಪಾಕಿಸ್ತಾನ ವಿಜಯೋತ್ಸವ ಆಚರಿಸಬೇಕೆಂದರೆ ಕೈ ಗೆಲ್ಲಿಸಿ’
Team Udayavani, Apr 18, 2019, 3:00 AM IST
ಐನಾಪುರ: “ಮೇ 23ರಂದು ದೇಶದೆಲ್ಲೆಡೆ ವಿಜಯೋತ್ಸವ ಆಚರಿಸಬೇಕೆಂದರೆ ಬಿಜೆಪಿಗೆ ಮತ ಹಾಕಿ; ಪಾಕಿಸ್ತಾನದಲ್ಲಿ ವಿಜಯೋತ್ಸವ ಆಚರಿಸಬೇಕೆಂದರೆ ಕಾಂಗ್ರೆಸ್‌ಗೆ ಮತ ಹಾಕಿ’ ಎಂದು ಮಾಜಿ ಶಾಸಕ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿ ಸಂಜಯ ಪಾಟೀಲ ಬಹಿರಂಗ ಸಭೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಪಟ್ಟಣದಲ್ಲಿ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು,”ಈ ಲೋಕಸಭೆ ಚುನಾವಣೆ ಬಿಜೆಪಿ- ಕಾಂಗ್ರೆಸ್ ಮಧ್ಯದ ಚುನಾವಣೆಯಲ್ಲ. ದೇಶಭಕ್ತರು ಹಾಗೂ ದೇಶದ್ರೋಹಿಗಳ ನಡುವಿನ ಮಹಾಯುದ್ಧ.
ಅದಕ್ಕಾಗಿ ದೇಶದ್ರೋಹಿಗಳನ್ನು ಅಧಿ ಕಾರದಿಂದ ಕಿತ್ತೂಗೆಯಲು ನರೇಂದ್ರ ಮೋದಿಯವರನ್ನು ಬೆಂಬಲಿಸಿ’ ಎಂದರು. ಕುಮಾರಸ್ವಾಮಿ, ದೇವೇಗೌಡರ ವಿರುದ್ಧವೂ ಹರಿಹಾಯ್ದ ಸಂಜಯ ಪಾಟೀಲ, ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಚುನಾವಣೆಗೆ ಸ್ಪರ್ಧಿಸಬಹುದೆಂದು ಸಂವಿಧಾನದಲ್ಲಿದೆ.
ಆದರೆ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಅವರು ನಿಖಿಲ್ ವಿರುದ್ಧ ಸ್ಪರ್ಧಿಸಿದರೆ ಅವಳು ಗೌಡತಿ ಅಲ್ಲ, ಅವಳು ನಾಯ್ಡು ಎಂಬುದಾಗಿ ಟೀಕಿಸುತ್ತಿದ್ದಾರೆ ಎಂದರಲ್ಲದೆ, ಕುಮಾರಸ್ವಾಮಿಯವರು ತನ್ನ ಮಗ ಸೋತರೆ ಮುಖ್ಯಮಂತ್ರಿ ಕುರ್ಚಿ ಹೋಗುತ್ತದೆ ಎಂಬ ಭಯದಿಂದ ಒಬ್ಬ ಹೆಣ್ಣು ಮಗಳ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.