ಕಂಗನಾ ಕನಸು


Team Udayavani, Apr 19, 2019, 6:00 AM IST

16

ಬಾಲಿವುಡ್‌ನ‌ಲ್ಲಿ ತನ್ನ ಅಭಿನಯ, ಸಿನಿಮಾಗಳಿಗಿಂತಲೂ ಬೇರೆ ವಿಷಯಗಳಿಗೆ ಹೆಚ್ಚಾಗಿ ಸುದ್ದಿಯಾಗುವ, ಇತ್ತೀಚಿನ ನಾಯಕ ನಟಿಯರ ಪೈಕಿ ಕಂಗನಾ ರಣಾವತ್‌ ಕೂಡ ಒಬ್ಬರು. ಇತ್ತೀಚೆಗೆ ಕಂಗನಾ ಏನು ಮಾಡಿದರೂ, ಏನು ಮಾತನಾಡಿದರೂ ಅದು ಸುದ್ದಿಯಾಗುತ್ತೆ. ಅದರಲ್ಲೂ ಕೆಲದಿನಗಳ ಹಿಂದಷ್ಟೇ ಕಂಗನಾ ನೀಡಿರುವ ಹೇಳಿಕೆಯೊಂದು ಬಾಲಿವುಡ್‌ನ‌ಲ್ಲಿ ಹಲವರು ಹುಬ್ಬೇರಿಸುವಂತೆ ಮಾಡಿದೆ.

ಹೌದು, ಭಾರತೀಯ ಚಿತ್ರರಂಗದಲ್ಲಿ ಬಾಹುಬಲಿ ಸಿನಿಮಾ ಮಾಡಿದ ಸದ್ದು, ಬರೆದ ದಾಖಲೆಗಳ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ. ಅದ್ದೂರಿ ಮೇಕಿಂಗ್‌, ಬಿಗ್‌ ಬಜೆಟ್‌, ಬಾಕ್ಸಾಫೀಸ್‌ನಲ್ಲಿ ಭಾರೀ ಕಲೆಕ್ಷನ್‌ ಹೀಗೆ ಹತ್ತುಹಲವು ವಿಷಯಗಳಲ್ಲಿ ಬಾಹುಬಲಿ ಸಿನಿಮಾ ದಾಖಲೆ ನಿರ್ಮಿಸಿದೆ. ಇಂಥ ಬಾಹುಬಲಿ ಸದ್ಯಕ್ಕೆ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಅತಿ ದೊಡ್ಡ ಸಿನಿಮಾ ಎನ್ನಲಾಗಿದೆ. ಈ ಚಿತ್ರವನ್ನು ಮೀರಿಸುವಂತೆ ಸಿನಿಮಾ ಮಾಡಬೇಕು ಎನ್ನುವ ಪ್ಲಾನಿಂಗ್‌ನಲ್ಲಿ ಮಾಡುತ್ತಿದ್ದಾರಂತೆ ಕಂಗನಾ ರಾಣಾವತ್‌.

ಈ ಬಗ್ಗೆ ಮಾತನಾಡಿರುವ ಕಂಗನಾ, ಬಾಹುಬಲಿ, ಪದ್ಮಾವತ್‌ ಅಂತಹ ಚಿತ್ರಗಳನ್ನ ಮೀರಿಸುವಂತಹ ಸಿನಿಮಾ ಮಾಡಬೇಕು ಅನ್ನೋದು ನನ್ನ ಕನಸು. ಈಗಾಗಲೇ ಈ ಚಿತ್ರಕ್ಕೆ ಕಥೆ ಅಂತಿಮವಾಗಿದ್ದು, ಒಂದಷ್ಟು ಸ್ಕ್ರಿಪ್ಟ್ ಕೆಲಸಗಳು ನಡೆಯುತ್ತಿದೆ. ಅದು ಮುಗಿಯುತ್ತಿದ್ದಂತೆ ಚಿತ್ರದ ಹೆಸರನ್ನು ಅಧಿಕೃತವಾಗಿ ಅನೌನ್ಸ್‌ ಮಾಡಲಾಗುವುದು. ಸದ್ಯದಲ್ಲೇ ಈ ಚಿತ್ರಕ್ಕಾಗಿ ಭರ್ಜರಿ ಫೋಟೋಶೂಟ್‌ ಮಾಡಲು ಪ್ಲಾನ್‌ ಮಾಡಿಕೊಂಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಅಂದ ಹಾಗೆ, ಕಂಗನಾ ಕಬಡ್ಡಿ ಕ್ರೀಡೆಯನ್ನು ಆಧರಿಸಿದ ಕಥೆಯನ್ನು ಸಿನಿಮಾ ಮಾಡಲು ಹೊರಟಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಕಂಗನಾ ಕೂಡ ಕೆಲದಿನಗಳಿಂದ ಕಬಡ್ಡಿ ಟ್ರೈನಿಂಗ್‌ ಪಡೆದುಕೊಳ್ಳುತ್ತಿ¨ªಾರಂತೆ. ಆದರೆ, ಇದು ಬಯೋಪಿಕ್‌ ಚಿತ್ರವಾ ಅಥವಾ ಕಾಲ್ಪನಿಕ ಕಥೆ ಆಧರಿತ ಚಿತ್ರವಾ ಎನ್ನುವುದರ ಬಗ್ಗೆ ಇನ್ನೂ ಮಾಹಿತಿ ಇಲ್ಲ.

ಇನ್ನೊಂದು ವಿಶೇಷ ಅಂದ್ರೆ, ಈ ಚಿತ್ರದ ಮುಖ್ಯ ಭೂಮಿಕೆಯಲ್ಲಿ ಕಂಗನಾ ಕಾಣಿಸಿಕೊಳ್ಳುತ್ತಿದ್ದು, ಇಂಥ ದೊಡ್ಡ ಚಿತ್ರವನ್ನು ಕಂಗನಾ ಅವರೇ ನಿರ್ದೇಶಿಸಲಿದ್ದಾರಂತೆ. ತಮ್ಮ ಈ ಹಿಂದಿನ ಮಣಿಕರ್ಣಿಕಾ ಚಿತ್ರದಲ್ಲೂ ಅರ್ಧದಷ್ಟು ನಿರ್ದೇಶನ ಮಾಡಿದ ಅನುಭವ ಹೊಂದಿರುವ ಕಂಗನಾ, ಅದೇ ಜೋಶ್‌ನಲ್ಲಿ ಈ ಸಿನಿಮಾ ಮಾಡಲು ಸಜ್ಜಾಗುತ್ತಿದ್ದಾರೆ. ಒಟ್ಟಾರೆ ಕಂಗನಾ ಆಡುವ ಭರವಸೆಯ ಮಾತುಗಳನ್ನು ಕೇಳುತ್ತಿದ್ದರೆ, ನಿಜಕ್ಕೂ ಬಾಹುಬಲಿಯನ್ನು ಮೀರಿಸುವ ಸಿನಿಮಾ ಮಾಡುತ್ತಾರಾ ಎಂಬ ಕುತೂಹಲದ ಪ್ರಶ್ನೆ ಮೂಡುವುದರಲ್ಲಂತೂ ಅನುಮಾನವಿಲ್ಲ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.