ರಿಪ್ಪರ್ ಕ್ರೈಂ ಕಹಾನಿ
ಕರಾವಳಿಗರ ಎದೆ ನಡುಗಿಸಿದವನ ಕಥೆ
Team Udayavani, Apr 19, 2019, 6:00 AM IST
ಅಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು ನಲವತ್ತು ವರ್ಷಗಳ ಹಿಂದೆ ಜನರ ಮನಸಲ್ಲಿ ಭೀತಿ ಹುಟ್ಟಿಸಿದ್ದ, ಕುಖ್ಯಾತ ದರೋಡೆಕೋರ ರಿಪ್ಪರ್ ಚಂದ್ರನ್ ಕುರಿತಾಗಿ ಈಗ ಚಿತ್ರವೊಂದು ನಿರ್ಮಾಣವಾಗುತ್ತಿದೆ. ಇನ್ನು ಈ ಚಿತ್ರಕ್ಕೆ “ರಿಪ್ಪರ್’ ಎಂದು ಹೆಸರಿಡಲಾಗಿದ್ದು, ಇತ್ತೀಚೆಗೆ ಈ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಮಂಗಳೂರು, ಆಗುಂಬೆ, ಬೆಂಗಳೂರು ಸುತ್ತಮುತ್ತ ಎರಡು ಹಂತದಲ್ಲಿ
ಸುಮಾರು 30 ದಿನಗಳ ಕಾಲ ಚಿತ್ರದ ಚಿತ್ರೀಕರಣ ನಡೆಸಿರುವ ಚಿತ್ರತಂಡ ಸದ್ಯ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿದೆ.
“ಜಿ.ಕೆ ರಿಯಲ್ ಇಮೇಜಸ್’ ಬ್ಯಾನರ್ನಲ್ಲಿ ನಿರ್ಮಾಣ ವಾಗುತ್ತಿರುವ ಈ ಚಿತ್ರಕ್ಕೆ ಗೋಪಾಲಕೃಷ್ಣ ಹಾಗೂ ಸ್ನೇಹಿತರು ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ. ಈ ಹಿಂದೆ “ಬಣ್ಣದ ಕೊಡೆ’ ಎನ್ನುವ ಕಲಾತ್ಮಕ ಚಿತ್ರವನ್ನು ನಿರ್ದೇಶನ ಮಾಡಿದ್ದ ನಿರ್ದೇಶಕ ಕೃಷ್ಣ ಬೆಳ್ತಂಗಡಿ, “ರಿಪ್ಪರ್’ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.
ಕನ್ನಡ ಮತ್ತು ತುಳು ನಟ, ರಂಗಭೂಮಿ ಕಲಾವಿದ ಕೌಸ್ತುಭ್ ಜಯಕುಮಾರ್ ಈ ಚಿತ್ರದಲ್ಲಿ ದರೋಡೆಕೋರನ ಪಾತ್ರದಲ್ಲಿ ಭಿನಯಿಸುತ್ತಿದ್ದಾರೆ. ಚಿತ್ರದಲ್ಲಿ ಇವರಿಗೆ ನಾಯಕಿಯಾಗಿ ಮುಂಬೈ ಬೆಡಗಿ ಅಮುಲ್ ಗೌಡ ಜೋಡಿಯಾಗಿದ್ದಾರೆ. ಉಳಿದಂತೆ ಚಿತ್ರದಲ್ಲಿ ಶ್ರೀರಾಮ್, ಸಾನ್ವಿ ಮೊದಲಾದ ಕಿರುತೆರೆ ಮತ್ತು ಹಿರಿತೆರೆಯ ಹಲವು ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
“ರಿಪ್ಪರ್’ ಚಿತ್ರದ ದೃಶ್ಯಗಳಿಗೆ ಅನಿಲ್ ಕುಮಾರ್ ಛಾಯಾಗ್ರಹಣ, ಮುಕ್ತರಾಜು ಸಂಕಲನ ಕಾರ್ಯ ನಿರ್ವಹಿಸಿದ್ದಾರೆ. ಚಿತ್ರದ ಹಾಡುಗಳಿಗೆ ಹಿತನ್ ಹಾಸನ್ ಸಂಗೀತ ಸಂಯೋಜಿಸಿದ್ದಾರೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿರುವ “ರಿಪ್ಪರ್’ ಚಿತ್ರ ಇದೇ ಜೂನ್ ವೇಳೆಗೆ ತೆರೆಗೆ ಬರುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.