ನಗರಗಳಲ್ಲಿ ಡಲ್, ಗ್ರಾಮಗಳಲ್ಲಿ ಥ್ರಿಲ್
Team Udayavani, Apr 19, 2019, 6:30 AM IST
ಬೆಂಗಳೂರು: ಗ್ರಾಮಗಳಲ್ಲಿ ಇರುವಷ್ಟು “ಮತ ಸಂಭ್ರಮ’ ನಗರಗಳಲ್ಲಿ ಕಾಣಿಸಲೇ ಇಲ್ಲ. ಅದರಲ್ಲೂ ಬೆಂಗ ಳೂರು ನಗರದ 4 ಕ್ಷೇತ್ರಗಳಲ್ಲಂತೂ ಅತ್ಯಂತ ಕಡಿಮೆ ಮತದಾನವಾಗಿದೆ.
ಮೊದಲ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ನಡೆದ ಮತ ದಾನ ದಲ್ಲಿ ಮಂಡ್ಯ ಕ್ಷೇತ್ರದಲ್ಲಿ ಗರಿಷ್ಠ ಮತದಾನವಾಗಿದೆ. ಇಲ್ಲಿ ಶೇ.80.23 ಮತದಾನವಾಗಿದೆ. ಅತೀ ಕಡಿಮೆ ಎಂದರೆ, ಬೆಂಗಳೂರು ಕೇಂದ್ರದಲ್ಲಿ ಶೇ.49.76ರಷ್ಟು ಮತದಾನವಾಗಿದ್ದು, ಓಟ್ ಮಾಡಲು ನಗರದ ಜನ ನಿರಾಸಕ್ತಿ ತೋರಿದ್ದಾರೆ. ಉಳಿದಂತೆ ದ.ಕ.ದಲ್ಲೂ ಉತ್ತಮ ಮತದಾನವಾಗಿದೆ. 14 ಕ್ಷೇತ್ರಗಳಲ್ಲಿ ಒಟ್ಟಾರೆಯಾಗಿ ಶೇ.67.67ರಷ್ಟು ಮತದಾನವಾಗಿದೆ.
ಪ್ರತಿ ಬಾರಿಯಂತೆಯೇ ಈ ಬಾರಿಯೂ ಕೆಲವು ಕಡೆಗಳಲ್ಲಿ ಇವಿಎಂಗಳ ದೋಷ ಹಾಗೂ ಸಣ್ಣಪುಟ್ಟ ಗೊಂದಲದ ಘಟನೆ ಗಳು ನಡೆದಿವೆ. ಉಳಿದಂತೆ ಮತದಾನ ಬಹುತೇಕ ಶಾಂತಿಯುತ ವಾಗಿತ್ತು. ಇವಿಎಂ ಯಂತ್ರದೋಷದಿಂದ ಕೆಲವೆಡೆ ಮತದಾನ ವಿಳಂಬ, ಅಭ್ಯರ್ಥಿಗಳ ಪರ ಕಾರ್ಯಕರ್ತರ ನಡುವೆ ವಾಕ್ಸಮರ, ಮೂಲ ಸೌಕರ್ಯ ಒದಗಿಸಿಲ್ಲ ಎಂದು ಮತದಾನ ಬಹಿಷ್ಕಾರ, ಮತ ದಾರ ರಿಗೆ ಹಂಚಲು ತಂದಿದ್ದ ಹಣ ವಶ ಹಾಗೂ ಹಲವರ ಬಂಧನ ಪ್ರಕರಣಗಳು ನಡೆದಿವೆ. ಮತದಾರರ ಪಟ್ಟಿಯಿಂದ ಹೆಸರು ತೆಗೆಯ ಲಾಗಿದೆ ಎಂಬ ಆರೋಪಗಳು ಈ ಬಾರಿಯೂ ಕೇಳಿಬಂದವು. ಚಾಮರಾಜನಗರದಲ್ಲಿ ಹೃದಯಾಘಾತದಿಂದ ಚುನಾ ವಣಾಧಿ ಕಾರಿ ಶಾಂತಮೂರ್ತಿ, ಮಂಡ್ಯದಲ್ಲಿ ಬೊಮ್ಮೇಗೌಡ ಎಂಬ ವ್ಯಕ್ತಿ ಮತದಾನ ಮಾಡಿದ ಅನಂತರ ಮೃತಪಟ್ಟಿದ್ದಾರೆ.
ಸುಮಾ-ನಿಖೀಲ್ ಬೆಂಬಲಿಗರ ನಡುವೆ ಮಾರಾಮಾರಿ
ಹೈ ವೋಲ್ಟೆàಜ್ ಕ್ಷೇತ್ರ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮದ್ದೂರಿನ ದೊಡ್ಡರಸಿಕೆರೆಯಲ್ಲಿ ಮಾತಿನ ಚಕಮಕಿ ಮತ್ತು ಹೊಡೆದಾಟ ಸಂಭವಿಸಿದೆ. ದೊಡ್ಡರಸಿನಕೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖೀಲ್ ಅವರು ರೋಡ್ಶೋ ಮೂಲಕ ಪ್ರಚಾರ ನಡೆಸಿದರು. ದೊಡ್ಡರಸಿನಕೆರೆಯಲ್ಲಿ ಮತದಾನ ಮಾಡಲು ಬಂದಿದ್ದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಮತದಾನದ ಅನಂತರ ಗ್ರಾಮದಲ್ಲಿ ಪಾದಯಾತ್ರೆ ಮೂಲಕ ಪ್ರಚಾರ ಮಾಡಲು ಮುಂದಾದಾಗ ಜೆಡಿಎಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿ ನಿಖೀಲ್ಗೆ ಅವಕಾಶ ಕೊಟ್ಟು ಇವರಿಗೆ ಯಾಕೆ ಆಕ್ಷೇಪ ಎಂದು ವಿರೋಧ ತೋರಿದರು. ಆಗ ಸುಮಲತಾ ಬೆಂಬಲಿಗರು ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಯಿತು. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಎರಡೂ ಗುಂಪುಗಳನ್ನು ಚದುರಿಸಿದರು.
ಮಳವಳ್ಳಿಯ ಬಸವನಪುರದ ಮತಗಟ್ಟೆಯೊಂದರಲ್ಲಿ ಸುಮಲತಾ ಪರ ಏಜೆಂಟ್ ಚೆನ್ನಬಸವಯ್ಯ ಅವರ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆಯೂ ಸಂಭವಿಸಿದೆ. ವೃದ್ಧರನ್ನು ಮತಗಟ್ಟೆಗೆ ಕರೆತರುತ್ತಿದ್ದ ಜೆಡಿಎಸ್ ಕಾರ್ಯಕರ್ತರು ನಿಖೀಲ್ ಪರ ಮತ ಹಾಕಿಸುತ್ತಿದ್ದಾರೆ ಎಂದು ಸುಮಲತಾ ಪರ ಏಜೆಂಟ್ ಆರೋಪಿಸಿ ಪ್ರಶ್ನಿಸಿದ್ದರಿಂದ ಜೆಡಿಎಸ್ ಕಾರ್ಯಕರ್ತರು ಅವರ ಶರ್ಟ್ ಹರಿದು ಹಲ್ಲೆ ನಡೆಸಿದ್ದಾರೆ.ಬೆಂಗಳೂರಿನ ಕೆ.ಆರ್.ಪುರದ ಅಂಜನಾಪುರ ಮತಗಟ್ಟೆ ಬಳಿ ಅಭ್ಯರ್ಥಿಗಳ ಪರ ಟೇಬಲ್ ಹಾಕುವ ವಿಚಾರದಲ್ಲಿ ಜಗಳ ಉಂಟಾಗಿ ಮಾರಾಮಾರಿ ಸಂಭವಿಸಿದೆ.
ಹಣ ಹಂಚಿಕೆ
ಮತದಾನದ ದಿನವೂ ಹಲವೆಡೆ ಬಹಿರಂಗವಾಗಿ ಹಣ ಹಂಚಿಕೆ ಮಾಡುತ್ತಿದ್ದ ಪ್ರಕರಣಗಳು ನಡೆದಿದ್ದು, ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಯುವಕನೊಬ್ಬನ್ನು ಬಂಧಿಸಲಾಯಿತು. ಅದೇ ರೀತಿ ಚಿಂತಾಮಣಿಯಲ್ಲಿ ಮತಗಟ್ಟೆ ಸಮೀಪ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಹಂಚಿಕೆ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಗರ ಮನೆ ಮೇಲೆ ಚುನಾವಣ ಆಯೋಗದ ಅಧಿಕಾರಿಗಳು ದಾಳಿ ನಡೆಸಿ 15 ಲಕ್ಷ ರೂ. ವಶಕ್ಕೆ ಪಡೆದಿದ್ದಾರೆ.
ಮಧುಗಿರಿಯಲ್ಲಿ ಹಣ ಹಂಚಿಕೆ ಮಾಡುತ್ತಿದ್ದ ಎಂಜಿನಿಯರಿಂಗ್ ಕಾಲೇಜಿನ ಅಟೆಂಡರ್ ರಾಜುವನ್ನು ಬಂಧಿಸಿ 5.80 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಕಾಲೇಜಿನ ಸಮೀಪ ಹಣ ಹಂಚಿಕೆ ಮಾಡುತ್ತಿದ್ದು ಈ ಕಾಲೇಜು ಬಿಜೆಪಿ ಅಭ್ಯರ್ಥಿಗೆ ಸೇರಿದ್ದು ಎಂದು ಹೇಳಲಾಗಿದೆ. ಕೆಜಿಎಫ್ನ ಸ್ವರ್ಣ ನಗರ ಮತಗಟ್ಟೆಯಲ್ಲಿ ಹಣ ಹಂಚಿಕೆ ಮಾಡುತ್ತಿದ್ದು ಕಾಂಗ್ರೆಸ್ ಕಾರ್ಯಕರ್ತನನ್ನು ಬಂಧಿಸಲಾಗಿದೆ.
ಮೊಬೈಲ್ನಲ್ಲಿ ವೀಡಿಯೋ-ವೈರಲ್
ಮತಗಟ್ಟೆಗಳಿಗೆ ಮೊಬೈಲ್ ಕೊಂಡೊಯ್ಯುವುದಕ್ಕೆ ನಿಷೇಧ ಹೇರಲಾಗಿದ್ದರೂ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ಪರ ಮತ ಚಲಾಯಿಸಿದ ವೀಡಿಯೋ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಕಾಣಿಸಿಕೊಂಡವು.
ತಿಂಗಳು ಕಾಯಬೇಕು
ಅಭ್ಯರ್ಥಿಗಳ ಭವಿಷ್ಯ ಇವಿಎಂ ಯಂತ್ರಗಳಲ್ಲಿ ಭದ್ರ ವಾಗಿದ್ದು, ಫಲಿತಾಂಶಕ್ಕಾಗಿ ಒಂದು ತಿಂಗಳು ಕಾಯಬೇಕು. ಮೇ 23ರಂದು ಮತ ಎಣಿಕೆ ನಡೆಯಲಿದೆ
ದಾಖಲೆ ಮುರಿದ ದ.ಕ., ಉಡುಪಿ
ಮಂಗಳೂರು/ಉಡುಪಿ: ಈ ಬಾರಿಯ ಲೋಕಸಭಾ ಚುನಾ ವಣೆ ಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳು ಮತದಾನದಲ್ಲಿ ದಾಖಲೆಯನ್ನು ನಿರ್ಮಿಸಿವೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ದಲ್ಲಿ ಶೇ. 77.78ರಷ್ಟು ಪ್ರಮಾಣದ ಮತದಾನ ವಾಗಿದೆ. 2014ಕ್ಕೆ ಹೋಲಿಸಿದರೆ ಈ ಬಾರಿ ಮತದಾನದಲ್ಲಿ ತುಸು ಹೆಚ್ಚಳವಾಗಿದ್ದು, ಹಿಂದಿನ ದಾಖಲೆಯನ್ನು ಮುರಿದಿದೆ. 2014ರ ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರ ದಲ್ಲಿ ಶೇ.77.19 ಮತದಾನವಾಗಿದ್ದು, ಅದು ರಾಜ್ಯದಲ್ಲೇ ಅತೀ ಹೆಚ್ಚು ಎಂಬ ಹೆಗ್ಗಳಿಕೆ ಪಡೆದಿತ್ತು.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಈ ಬಾರಿ ಶೇ.75.8 ಮತದಾನವಾಗಿರುವುದು ಸಾರ್ವಕಾಲಿಕ ದಾಖಲೆಯಾಗಿದೆ. 2014ರಲ್ಲಿ ಶೇ. 74.46 ಮತದಾನ ವಾಗಿತ್ತು. ಹಿಂದಿನ ಬಾರಿಗೆ ಹೋಲಿ ಸಿದರೆ ತುಸು ಹೆಚ್ಚಾಗಿದೆ. ಅಂತಿಮ ಲೆಕ್ಕಾ ಚಾರ ದಲ್ಲಿ ಶುಕ್ರವಾರ ಸ್ವಲ್ಪ ಹೆಚ್ಚು ಕಡಿಮೆ ಯಾಗಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಹೊಸ ಸೇರ್ಪಡೆ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.