ಕರಾವಳಿಯಲ್ಲಿ ಯೇಸು ಕ್ರಿಸ್ತರ ಕೊನೆಯ ಭೋಜನದ ಸ್ಮರಣೆ


Team Udayavani, Apr 19, 2019, 10:45 AM IST

pawl

ಮಂಗಳೂರು/ ಉಡುಪಿ: ಕ್ರೈಸ್ತರು ಪವಿತ್ರ ಗುರುವಾರವನ್ನು ಆಚರಿಸಿ ಯೇಸು ಕ್ರಿಸ್ತರ ಕೊನೆಯ ಭೋಜನದ ದಿನವನ್ನು ಸ್ಮರಿಸಿದರು. ಆ ಪ್ರಯುಕ್ತ ಚರ್ಚ್‌ಗಳಲ್ಲಿ ಮತ್ತು ಇತರ ಕ್ರೈಸ್ತ ಪ್ರಾರ್ಥನ ಮಂದಿರಗಳಲ್ಲಿ ಗುರುವಾರ ಸಂಜೆ ಬಲಿಪೂಜೆ ಮತ್ತು ವಿಶೇಷ ಪ್ರಾರ್ಥನೆಗಳು ಜರಗಿದವು.

ಮಂಗಳೂರಿನ ರೊಜಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್‌ ರೆ| ಡಾ| ಪೀಟರ್‌ ಪಾವ್‌ ಸಲ್ಡಾನ್ಹಾ ಬಲಿ ಪೂಜೆ ಮತ್ತು ಪರಮ ಪ್ರಸಾದದ ಮೆರವಣಿಗೆ ನೇತೃತ್ವ ವಹಿಸಿದ್ದರು. ಕೆಥೆಡ್ರಲ್‌ನ ರೆಕ್ಟರ್‌ ವಂ| ಜೆ.ಬಿ. ಕ್ರಾಸ್ತಾ ಪರಮ ಪ್ರಸಾದದ ಆರಾಧನೆ ನಡೆಸಿಕೊಟ್ಟರು. ರೊಸಾರಿಯೊ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಫಾ| ವಿಕ್ಟರ್‌ ಡಿ’ಸೋಜಾ ಪ್ರವಚನ ನೀಡಿದರು. ಪದವಿ ಕಾಲೇಜಿನ ಪ್ರಾಂಶುಪಾಲ ವಂ| ರೊಕಿ ಫೆರ್ನಾಂಡಿಸ್‌, ಕೆಥೆಡ್ರಲ್‌ನ ಸಹಾಯಕ ಗುರು ವಂ| ಫ್ಲೆವಿಯನ್‌ ಲೋಬೊ, ಮೈನರ್‌ ಸೆಮಿನರಿಯ ರೆಕ್ಟರ್‌ ವಂ| ಅನಿಲ್‌ ಫೆರ್ನಾಂಡಿಸ್‌ ಉಪಸ್ಥಿತರಿದ್ದರು.

ಯೇಸು ಕ್ರಿಸ್ತರು ತಮ್ಮ ಕೊನೆಯ ಭೋಜನದ ಸಂದರ್ಭದಲ್ಲಿ 12 ಶಿಷ್ಯರ ಪಾದ ತೊಳೆದು ಸೇವೆಯ ಸಂಸ್ಕಾರವನ್ನು ಪ್ರತಿಪಾದಿಸಿದ್ದು, ಅದರ ಸಂಕೇತವಾಗಿ ಕೆಥೆಡ್ರಲ್‌ನಲ್ಲಿ ಬಿಷಪರು ಮತ್ತು ಇತರ ಚರ್ಚ್‌ಗಳಲ್ಲಿ ಸಳೀಯ ಧರ್ಮಗುರುಗಳು 12 ಕ್ರೈಸ್ತರ ಪಾದಗಳನ್ನು ತೊಳೆದರು. ಇದರಲ್ಲಿ ಆರು ಮಹಿಳೆಯರು ಇದ್ದರು. ಯುವ ಜನರಿಗೆ, ವಯಸ್ಕರಿಗೆ, ರೋಗಿಗಳಿಗೆ ಮತ್ತು ಧಾರ್ಮಿಕ ವ್ಯಕ್ತಿಗಳಿಗೂ ಪ್ರಾತಿನಿಧ್ಯ ನೀಡಲಾಗಿತ್ತು. ಬಿಷಪ್‌ ಪೀಟರ್‌ ಪಾವ್‌ ಸಲ್ಡಾನ್ಹಾ ಸಂದೇಶ ನೀಡಿ, ಪವಿತ್ರ ಗುರುವಾರ ಎದಂದು ಮೂರು ವಿಷಯಗಳಿಗೆ ಪ್ರಾಮುಖ್ಯ ಇದೆ. ಯೇಸು ಕ್ರಿಸ್ತರು ಪರಮ ಪ್ರಸಾದದ ಸಂಸ್ಕಾರವನ್ನು ಈ ದಿನದಂದು ಆರಂಭಿಸಿದರು ಮತ್ತು ಅದನ್ನು ಪುನರಪಿ ನಡೆಸುವಂತೆ ಸೂಚಿಸಿದರು. ಅದರ ಪ್ರಕಾರ ಪ್ರತಿ ಪವಿತ್ರ ಬಲಿ ಪೂಜೆಯಲ್ಲಿ ಇದನ್ನು ನಡೆಸಲಾಗುತ್ತದೆ. ಗುರು ದೀಕ್ಷೆಯ ಸಂಸ್ಕಾರವನ್ನು ಯೇಸು ಕ್ರಿಸ್ತರು ಇದೇ ದಿನದಂದು ನೆರವೇರಿಸಿದ್ದರು. ತನ್ನ 12 ಶಿಷ್ಯರ ಪಾದ ತೊಳೆದು ಸೇವೆಯ ಸಂಸ್ಕಾರಕ್ಕೆ ನಾಂದಿ ಹಾಡಿದರು. “ನಾನು ನಿಮ್ಮನ್ನು ಪ್ರೀತಿಸಿದಂತೆ ನೀವು ಪರಸ್ಪರ ಪ್ರೀತಿಸಬೇಕು’ ಎಂಬ ಉಪದೇಶವನ್ನು ನೀಡಿದ್ದರು. ಕ್ರೈಸ್ತ ಧರ್ಮ ಸಭೆಯ ಉಗಮ ಈ ದಿನ ಆಯಿತು ಎಂದರು.

ಅವಳಿ ಆಚರಣೆ
ಕ್ರೈಸ್ತರು ಯೇಸು ಕ್ರಿಸ್ತರ ಕೊನೆಯ ಭೋಜನದ ಸ್ಮರಣಾರ್ಥ ಪವಿತ್ರ ಗುರುವಾರ ಆಚರಿಸುವ ಜತೆಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಹಬ್ಬ ಎಂದೇ ಬಣ್ಣಿಸಲಾಗಿರುವ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.

ಟಾಪ್ ನ್ಯೂಸ್

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8

Kasaragod: ಟ್ಯಾಂಕರ್‌ ಲಾರಿಯಿಂದ ರಸ್ತೆಗೆ ಹರಿದ ಎಣ್ಣೆ

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

crime

Siddapura: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Untitled-1

Kasaragod Crime News: ಬೈಕ್‌ ಕಳವು; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.